< Lévitique 6 >
1 L’Éternel parla à Moïse, et dit:
೧ಯೆಹೋವನು ಮೋಶೆಗೆ,
2 Lorsque quelqu’un péchera et commettra une infidélité envers l’Éternel, en mentant à son prochain au sujet d’un dépôt, d’un objet confié à sa garde, d’une chose volée ou soustraite par fraude,
೨“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
3 en niant d’avoir trouvé une chose perdue, ou en faisant un faux serment sur une chose quelconque de nature à constituer un péché;
೩ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.
4 lorsqu’il péchera ainsi et se rendra coupable, il restituera la chose qu’il a volée ou soustraite par fraude, la chose qui lui avait été confiée en dépôt, la chose perdue qu’il a trouvée,
೪ಅವನು ಪಾಪಮಾಡಿ ಅಪರಾಧಿಯಾಗಿರುವುದರಿಂದ ಅವನು ತಾನು ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು ತನ್ನ ವಶಕ್ಕೆ ತೆಗೆದುಕೊಂಡದ್ದನ್ನು, ತಾನು ಕಂಡುಕೊಂಡದ್ದನ್ನು,
5 ou la chose quelconque sur laquelle il a fait un faux serment. Il la restituera en son entier, y ajoutera un cinquième, et la remettra à son propriétaire, le jour même où il offrira son sacrifice de culpabilité.
೫ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.
6 Il présentera au sacrificateur en sacrifice de culpabilité à l’Éternel pour son péché un bélier sans défaut, pris du troupeau d’après ton estimation.
೬ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.
7 Et le sacrificateur fera pour lui l’expiation devant l’Éternel, et il lui sera pardonné, quelle que soit la faute dont il se sera rendu coupable.
೭ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.
8 L’Éternel parla à Moïse, et dit:
೮ಅನಂತರ ಯೆಹೋವನು ಮೋಶೆಗೆ,
9 Donne cet ordre à Aaron et à ses fils, et dis: Voici la loi de l’holocauste. L’holocauste restera sur le foyer de l’autel toute la nuit jusqu’au matin, et le feu brûlera sur l’autel.
೯“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.
10 Le sacrificateur revêtira sa tunique de lin, et mettra des caleçons sur sa chair, il enlèvera la cendre faite par le feu qui aura consumé l’holocauste sur l’autel, et il la déposera près de l’autel.
೧೦ಯಾಜಕನು ನಾರಿನ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರಿನ ಒಳಉಡುಪನ್ನು ಹಾಕಿಕೊಂಡು, ಯಜ್ಞವೇದಿಯ ಮೇಲಣ ಸರ್ವಾಂಗಹೋಮದ್ರವ್ಯದ ಬೂದಿಯನ್ನು ಎತ್ತಿ ಯಜ್ಞವೇದಿಯ ಬಳಿಯಲ್ಲಿ ಇಡಬೇಕು.
11 Puis il quittera ses vêtements et en mettra d’autres, pour porter la cendre hors du camp, dans un lieu pur.
೧೧ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
12 Le feu brûlera sur l’autel, il ne s’éteindra point; chaque matin, le sacrificateur y allumera du bois, arrangera l’holocauste, et brûlera la graisse des sacrifices d’actions de grâces.
೧೨ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.
13 Le feu brûlera continuellement sur l’autel, il ne s’éteindra point.
೧೩ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.
14 Voici la loi de l’offrande. Les fils d’Aaron la présenteront devant l’Éternel, devant l’autel.
೧೪“‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.
15 Le sacrificateur prélèvera une poignée de la fleur de farine et de l’huile, avec tout l’encens ajouté à l’offrande, et il brûlera cela sur l’autel comme souvenir d’une agréable odeur à l’Éternel.
೧೫ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
16 Aaron et ses fils mangeront ce qui restera de l’offrande; ils le mangeront sans levain, dans un lieu saint, dans le parvis de la tente d’assignation.
೧೬ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.
17 On ne le cuira pas avec du levain. C’est la part que je leur ai donnée de mes offrandes consumées par le feu. C’est une chose très sainte, comme le sacrifice d’expiation et comme le sacrifice de culpabilité.
೧೭ಅದಕ್ಕೆ ಹುಳಿಹಿಟ್ಟು ಸೇರಿಸಿ ಸುಡಬಾರದು. ನನಗೆ ಹೋಮರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಟ್ಟಿದ್ದೇನೆ. ದೋಷಪರಿಹಾರಕ ಯಜ್ಞದ್ರವ್ಯದಂತೆಯೂ ಮತ್ತು ಪ್ರಾಯಶ್ಚಿತ್ತ ಯಜ್ಞದ್ರವ್ಯದಂತೆಯೂ ಅದು ಮಹಾಪರಿಶುದ್ಧವಾದದ್ದು.
18 Tout mâle d’entre les enfants d’Aaron en mangera. C’est une loi perpétuelle pour vos descendants, au sujet des offrandes consumées par le feu devant l’Éternel: quiconque y touchera sera sanctifié.
೧೮ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
19 L’Éternel parla à Moïse, et dit:
೧೯ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
20 Voici l’offrande qu’Aaron et ses fils feront à l’Éternel, le jour où ils recevront l’onction: un dixième d’épha de fleur de farine, comme offrande perpétuelle, moitié le matin et moitié le soir.
೨೦“ಆರೋನನಿಗೆ ಅಭಿಷೇಕವಾದ ದಿನ ಮೊದಲುಗೊಂಡು ಅವನೂ ಮತ್ತು ಅವನ ವಂಶದವರೂ ಯೆಹೋವನಿಗೆ ಸಮರ್ಪಿಸಬೇಕಾದ ಧಾನ್ಯ ನೈವೇದ್ಯ ಕ್ರಮ ಹೇಗೆಂದರೆ, ಅವರು ನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಹೊತ್ತಾರೆ ಅರ್ಧವನ್ನು ಹಾಗೂ ಸಾಯಂಕಾಲ ಅರ್ಧವನ್ನು ಸಮರ್ಪಿಸಬೇಕು.
21 Elle sera préparée à la poêle avec de l’huile, et tu l’apporteras frite; tu la présenteras aussi cuite et en morceaux comme une offrande d’une agréable odeur à l’Éternel.
೨೧ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
22 Le sacrificateur qui, parmi les fils d’Aaron, sera oint pour lui succéder, fera aussi cette offrande. C’est une loi perpétuelle devant l’Éternel: elle sera brûlée en entier.
೨೨ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತನಾದ ಯಾಜಕನ ಪಟ್ಟಕ್ಕೆ ಬರುವನೋ ಅವನೇ ಅದನ್ನು ಸಮರ್ಪಿಸಬೇಕು; ಇದು ಶಾಶ್ವತನಿಯಮ. ಅದನ್ನು ಯೆಹೋವನಿಗೆ ಸಂಪೂರ್ಣವಾಗಿ ಹೋಮಮಾಡಬೇಕು.
23 Toute offrande d’un sacrificateur sera brûlée en entier; elle ne sera point mangée.
೨೩ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು.
24 L’Éternel parla à Moïse, et dit:
೨೪ಯೆಹೋವನು ಮೋಶೆಯೊಂದಿಗೆ ಪುನಃ ಮಾತನಾಡಿ,
25 Parle à Aaron et à ses fils, et dis: Voici la loi du sacrifice d’expiation. C’est dans le lieu où l’on égorge l’holocauste que sera égorgée devant l’Éternel la victime pour le sacrifice d’expiation: c’est une chose très sainte.
೨೫“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಹೀಗೆ ಆಜ್ಞಾಪಿಸು, ‘ದೋಷಪರಿಹಾರಕ ಯಜ್ಞದ ನಿಯಮಗಳು: ಸರ್ವಾಂಗಹೋಮದ ಪಶುವನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಯಜ್ಞಪಶುವನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.
26 Le sacrificateur qui offrira la victime expiatoire la mangera; elle sera mangée dans un lieu saint, dans le parvis de la tente d’assignation.
೨೬ಅದನ್ನು ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಅದನ್ನು ಊಟಮಾಡಬೇಕು.
27 Quiconque en touchera la chair sera sanctifié. S’il en rejaillit du sang sur un vêtement, la place sur laquelle il aura rejailli sera lavée dans un lieu saint.
೨೭ಆ ಪಶುವಿನ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರಸ್ಥಳದೊಳಗೆ ಒಗೆದುಕೊಳ್ಳಬೇಕು.
28 Le vase de terre dans lequel elle aura cuit sera brisé; si c’est dans un vase d’airain qu’elle a cuit, il sera nettoyé et lavé dans l’eau.
೨೮ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಉಜ್ಜಿ ನೀರಿನಿಂದ ತೊಳೆಯಬೇಕು.
29 Tout mâle parmi les sacrificateurs en mangera: c’est une chose très sainte.
೨೯ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
30 Mais on ne mangera aucune victime expiatoire dont on apportera du sang dans la tente d’assignation, pour faire l’expiation dans le sanctuaire: elle sera brûlée au feu.
೩೦ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.