< Cantiques 6 >
1 Où est allé ton bien-aimé, O la plus belle des femmes? De quel côté ton bien-aimé s’est-il dirigé? Nous le chercherons avec toi.
೧ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ?
2 Mon bien-aimé est descendu à son jardin, Au parterre d’aromates, Pour faire paître son troupeau dans les jardins, Et pour cueillir des lis.
೨ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.
3 Je suis à mon bien-aimé, et mon bien-aimé est à moi; Il fait paître son troupeau parmi les lis.
೩ಎನ್ನಿನಿಯನು ನನ್ನವನೇ, ನಾನು ಅವನವಳೇ, ಅವನು ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
4 Tu es belle, mon amie, comme Thirtsa, Agréable comme Jérusalem, Mais terrible comme des troupes sous leurs bannières.
೪ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
5 Détourne de moi tes yeux, car ils me troublent. Tes cheveux sont comme un troupeau de chèvres, Suspendues aux flancs de Galaad.
೫ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ.
6 Tes dents sont comme un troupeau de brebis, Qui remontent de l’abreuvoir; Toutes portent des jumeaux, Aucune d’elles n’est stérile.
೬ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
7 Ta joue est comme une moitié de grenade, Derrière ton voile…
೭ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
8 Il y a soixante reines, quatre-vingts concubines, Et des jeunes filles sans nombre.
೮ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
9 Une seule est ma colombe, ma parfaite; Elle est l’unique de sa mère, La préférée de celle qui lui donna le jour. Les jeunes filles la voient, et la disent heureuse; Les reines et les concubines aussi, et elles la louent.
೯ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.
10 Qui est celle qui apparaît comme l’aurore, Belle comme la lune, pure comme le soleil, Mais terrible comme des troupes sous leurs bannières?
೧೦ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?
11 Je suis descendue au jardin des noyers, Pour voir la verdure de la vallée, Pour voir si la vigne pousse, Si les grenadiers fleurissent.
೧೧ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.
12 Je ne sais, mais mon désir m’a rendue semblable Aux chars de mon noble peuple.
೧೨ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.
13 Reviens, reviens, Sulamithe! Reviens, reviens, afin que nous te regardions. Qu’avez-vous à regarder la Sulamithe Comme une danse de deux chœurs?
೧೩ಶೂಲಮ್ ಊರಿನವಳೇ, ತಿರುಗು, ಹಿಂತಿರುಗು, ನಾನು ನಿನ್ನನ್ನು ನೋಡಬೇಕು; ತಿರುಗು, ಇತ್ತ ತಿರುಗು. ಎರಡು ಸಾಲಿನಲ್ಲಿ ನರ್ತಿಸುವ ನರ್ತಕಿಯರ ನಡುವೆ ನರ್ತಿಸುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನ್ನು ನೀನು ನೋಡುವುದೇಕೆ?