< Actes 21 >
1 Ainsi donc étant partis, et nous étant éloignés d'eux, nous tirâmes droit à Coos, et le jour suivant à Rhodes, et de là à Patara.
೧ನಾವು ಅವರನ್ನು ಬಿಟ್ಟು ಹಡಗನ್ನು ಹತ್ತಿದ ಮೇಲೆ ನೇರವಾಗಿ ಕೋಸ್ ದ್ವೀಪಕ್ಕೆ ಬಂದು ಸೇರಿದೆವು. ಮರುದಿನ ರೋದ ದ್ವೀಪಕ್ಕೆ ಹೋಗಿ ಅಲ್ಲಿಂದ ಪತರ ಪಟ್ಟಣಕ್ಕೆ ಬಂದೆವು.
2 Et ayant trouvé là un navire qui traversait en Phénicie, nous montâmes dessus, et partîmes.
೨ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು.
3 Puis ayant découvert Cypre, nous la laissâmes à main gauche, et tirant vers la Syrie, nous arrivâmes à Tyr: car le navire y devait laisser sa charge.
೩ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.
4 Et ayant trouvé là des disciples, nous y demeurâmes sept jours. Or ils disaient par l'Esprit à Paul qu'il ne montât point à Jérusalem.
೪ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.
5 Mais ces jours-là étant passés, nous partîmes, et nous nous mîmes en chemin, étant conduits de tous avec leurs femmes et leurs enfants, jusque hors de la ville, et ayant mis les genoux en terre sur le rivage, nous fîmes la prière.
೫ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,
6 Et après nous être embrassés les uns les autres, nous montâmes sur le navire, et les autres retournèrent chez eux.
೬ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.
7 Et ainsi achevant notre navigation, nous vînmes de Tyr à Ptolémaïs; et après avoir salué les frères, nous demeurâmes un jour avec eux.
೭ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,
8 Et le lendemain Paul et sa compagnie partant de là, nous vînmes à Césarée; et étant entrés dans la maison de Philippe l'Evangéliste, qui était l'un des sept, nous demeurâmes chez lui.
೮ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
9 Or il avait quatre filles vierges qui prophétisaient.
೯ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.
10 Et comme nous fûmes là plusieurs jours, il y arriva de Judée un Prophète, nommé Agabus;
೧೦ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,
11 Qui nous étant venu voir, prit la ceinture de Paul, et s'en liant les mains et les pieds, il dit: le Saint-Esprit dit ces choses: Les Juifs lieront ainsi à Jérusalem l'homme à qui est cette ceinture, et ils le livreront entre les mains des Gentils.
೧೧ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.
12 Quand nous eûmes entendu ces choses, nous, et ceux qui étaient du lieu, nous le priâmes qu'il ne montât point à Jérusalem.
೧೨ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.
13 Mais Paul répondit: que faites-vous, en pleurant et en affligeant mon cœur? pour moi, je suis tout prêt, non-seulement d'être lié, mais aussi de mourir à Jérusalem pour le Nom du Seigneur Jésus.
೧೩ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
14 Ainsi, parce qu'il ne pouvait être persuadé, nous nous tûmes là-dessus, en disant: la volonté du Seigneur soit faite!
೧೪ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.
15 Quelques jours après, ayant chargé nos hardes, nous montâmes à Jérusalem.
೧೫ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
16 Et quelques-uns des disciples vinrent aussi de Césarée avec nous, amenant avec eux un homme [appelé] Mnason, Cyprien, qui était un ancien disciple, chez qui nous devions loger.
೧೬ಕೈಸರೈಯದಿಂದ ಕೆಲವು ಶಿಷ್ಯರು ನಮ್ಮ ಜೊತೆಯಲ್ಲಿ ಬಂದು ನಾವು ಇಳುಕೊಳ್ಳಬೇಕಾಗಿದ್ದವನ ಮನೆಯ ತನಕ ನಮ್ಮನ್ನು ಕರೆದುಕೊಂಡು ಹೋದರು. ಆ ಮನೆಯವನು ಪ್ರಥಮ ಶಿಷ್ಯರಲ್ಲಿ ಒಬ್ಬನಾದ ಕುಪ್ರದೇಶದ ಮ್ನಾಸೋನನೆಂಬವನು.
17 Et quand nous fûmes arrivés à Jérusalem, les frères nous reçurent avec joie.
೧೭ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.
18 Et le jour suivant, Paul vint avec nous chez Jacques, et tous les Anciens y vinrent.
೧೮ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.
19 Et après qu'il les eut embrassés, il raconta en détail les choses que Dieu avait faites parmi les Gentils par son ministère.
೧೯ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.
20 Ce qu'ayant ouï, ils glorifièrent le Seigneur, et ils dirent à [Paul]: frère, tu vois combien il y a de milliers de Juifs qui ont cru; et ils sont tous zélés pour la Loi.
೨೦ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.
21 Or ils ont ouï dire de toi, que tu enseignes tous les Juifs qui sont parmi les Gentils, de renoncer à Moïse, en [leur] disant qu'ils ne doivent point circoncire leurs enfants, ni vivre selon les ordonnances [de la Loi].
೨೧ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.
22 Que faut-il donc faire? Il faut absolument assembler la multitude [des Fidèles], car ils entendront dire que tu es arrivé.
೨೨ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?
23 Fais donc ce que nous allons te dire: nous avons quatre hommes qui ont fait un vœu;
೨೩ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.
24 Prends-les avec toi, et te purifie avec eux, et contribue avec eux, afin qu'ils se rasent la tête, et que tous sachent qu'il n'est rien des choses qu'ils ont ouï dire de toi, mais que tu continues aussi de garder la Loi.
೨೪ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
25 Mais à l'égard de ceux d'entre les Gentils qui ont cru, nous en avons écrit, ayant ordonné qu'ils n'observent rien de semblable; mais seulement qu'ils s'abstiennent de ce qui est sacrifié aux idoles, du sang, des bêtes étouffées, et de la fornication.
೨೫ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ಕುರಿತಾದರೋ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕತ್ತು ಹಿಸುಕಿ ಕೊಂದದ್ದನ್ನೂ ಅನೈತಿಕತೆಯನ್ನೂ ಬಿಟ್ಟು ದೂರವಾಗಿರಬೇಕೆಂಬುದಾಗಿ ನಾವು ತೀರ್ಮಾನಿಸಿದ ನಿಯಮಗಳನ್ನು ಬರೆದು ಕಳುಹಿಸಿದೆವಲ್ಲಾ” ಎಂದು ಹೇಳಿದರು.
26 Paul ayant donc pris ces hommes avec lui, et le jour suivant s'étant purifié avec eux, il entra au Temple en dénonçant quel jour leur purification devait s'achever, [et continuant ainsi] jusqu'à ce que l'oblation fût présentée pour chacun d'eux.
೨೬ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.
27 Et comme les sept jours s'accomplissaient, quelques Juifs d'Asie ayant vu Paul dans le Temple, soulevèrent tout le peuple, et mirent les mains sur lui,
೨೭ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;
28 En criant: hommes Israélites, aidez- nous! voici cet homme qui partout enseigne tout le monde contre le peuple, contre la Loi, et contre ce Lieu; et qui de plus a aussi amené des Grecs dans le Temple, et a profané ce saint Lieu.
೨೮“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
29 Car avant cela ils avaient vu avec lui dans la ville Trophime Ephésien, et ils croyaient que Paul l'avait amené dans le Temple.
೨೯ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.
30 Et toute la ville fut émue, et le peuple y accourut; et ayant saisi Paul, ils le traînèrent hors du Temple; et on ferma aussitôt les portes.
೩೦ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.
31 Mais comme ils tâchaient de le tuer, le bruit vint au capitaine de la compagnie [de la garnison] que tout Jérusalem était en trouble;
೩೧ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.
32 Et aussitôt il prit des soldats et des centeniers, et courut vers eux; mais eux voyant le capitaine et les soldats ils cessèrent de battre Paul.
೩೨ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
33 Et le capitaine s'étant approché, se saisit de lui, et commanda qu'on le liât de deux chaînes; puis il demanda qui il était, et ce qu'il avait fait.
೩೩ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
34 Mais les uns criaient d'une manière, et les autres d'une autre, dans la foule; et parce qu'il ne pouvait en apprendre rien de certain à cause du bruit, il commanda que [Paul] fût mené dans la forteresse.
೩೪ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.
35 Et quand il fut venu aux degrés, il arriva qu'il fut porté par les soldats, à cause de la violence de la foule;
೩೫ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
36 Car la multitude du peuple le suivait, en criant: fais-le mourir.
೩೬ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.
37 Et comme on allait faire entrer Paul dans la forteresse, il dit au capitaine: m'est-il permis de te dire quelque chose? Et [le capitaine lui] demanda: Sais-tu parler Grec?
೩೭ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?
38 N'es-tu pas l'Egyptien qui ces jours passés as excité une sédition, et as emmené au désert quatre mille brigands?
೩೮ಕೆಲವು ದಿನಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ” ಎಂದು ಕೇಳಿದನು.
39 Et Paul lui dit: certes je suis Juif, citoyen, natif de Tarse, ville renommée de la Cilicie; mais je te prie, permets-moi de parler au peuple.
೩೯ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.
40 Et quand il le lui eut permis, Paul se tenant sur les degrés fit signe de la main au peuple, et s'étant fait un grand silence, il leur parla en Langue Hébraïque, disant:
೪೦ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,