< Hébreux 12 >
1 Nous donc aussi, puisque nous sommes environnés d'une si grande nuée de témoins, rejetant tout fardeau, et le péché qui nous enveloppe si aisément, poursuivons constamment la course qui nous est proposée;
೧ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
2 Portant les yeux sur Jésus, le chef et le consommateur de la foi, lequel au lieu de la joie dont il jouissait, a souffert la croix, ayant méprisé la honte, et s'est assis à la droite du trône de Dieu.
೨
3 C'est pourquoi, considérez soigneusement celui qui a souffert une telle contradiction de la part des pécheurs contre lui-même, afin que vous ne succombiez point en perdant courage.
೩ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
4 Vous n'avez pas encore résisté jusqu'à [répandre votre] sang en combattant contre le péché;
೪ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.
5 Et cependant vous avez oublié l'exhortation qui s'adresse à vous comme à ses enfants, disant: mon enfant ne méprise point le châtiment du Seigneur, et ne perds point courage quand tu es repris de lui.
೫ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
6 Car le Seigneur châtie celui qu'il aime, et il fouette tout enfant qu'il avoue.
೬ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
7 Si vous endurez le châtiment, Dieu se présente à vous comme à ses enfants: car qui est l'enfant que le père ne châtie point?
೭ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ?
8 Mais si vous êtes sans châtiment auquel tous participent, vous êtes donc des enfants supposés, et non pas légitimes.
೮ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.
9 Et puisque nos pères selon la chair nous ont châtiés et que malgré cela nous les avons respectés; ne serons-nous pas beaucoup plus soumis au Père des esprits? et nous vivrons.
೯ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?
10 Car par rapport à ceux-là, ils nous châtiaient pour un peu de temps, suivant leur volonté; mais celui-ci nous châtie pour notre profit, afin que nous soyons participants de sa sainteté.
೧೦ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
11 Or tout châtiment ne semble pas sur l'heure être [un sujet] de joie, mais de tristesse; mais ensuite il produit un fruit paisible de justice à ceux qui sont exercés par ce moyen.
೧೧ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
12 Relevez donc vos mains qui sont faibles, [et fortifiez vos] genoux qui sont déjoints.
೧೨ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.
13 Et faites les sentiers droits à vos pieds; afin que celui qui chancelle ne se dévoie point, mais plutôt qu'il soit remis en son entier.
೧೩ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
14 Recherchez la paix avec tous; et la sanctification, sans laquelle nul ne verra le Seigneur.
೧೪ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
15 Prenant garde qu'aucun ne se prive de la grâce de Dieu; que quelque racine d'amertume bourgeonnant en haut ne vous trouble, et que plusieurs ne soient souillés par elle.
೧೫ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
16 Que nul [de vous] ne soit fornicateur, ou profane comme Esaü, qui pour une viande vendit son droit d'aînesse.
೧೬ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.
17 Car vous savez que même désirant ensuite d'hériter la bénédiction, il fut rejeté: car il ne trouva point de lieu à la repentance, quoiqu'il l'eût demandée avec larmes.
೧೭ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
18 Car vous n'êtes point venus à une montagne qui se puisse toucher à la main, ni au feu brûlant, ni au tourbillon, ni à l'obscurité, ni à la tempête,
೧೮ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.
19 Ni au retentissement de la trompette, ni à la voix des paroles, [au sujet de] laquelle, ceux qui l'entendaient prièrent que la parole ne leur fût plus adressée;
೧೯
20 Car ils ne pouvaient soutenir ce qui était ordonné, [savoir], Si même une bête touche la montagne, elle sera lapidée, ou percée d'un dard.
೨೦ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.
21 Et Moïse, tant était terrible ce qui paraissait, dit: Je suis épouvanté et j'en tremble tout.
೨೧ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.
22 Mais vous êtes venus à la montagne de Sion, et à la Cité du Dieu vivant, à la Jérusalem céleste, et aux milliers d'Anges,
೨೨ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,
23 Et à l'assemblée et à l'Eglise des premiers nés qui sont écrits dans les Cieux, et à Dieu qui est le juge de tous, et aux esprits des justes sanctifiés;
೨೩ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,
24 Et à Jésus, le Médiateur de la nouvelle alliance, et au sang de l'aspersion, qui prononce de meilleures choses que [celui] d'Abel.
೨೪ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
25 Prenez garde de ne mépriser point celui qui [vous] parle; car si ceux qui méprisaient celui qui [leur] parlait sur la terre, ne sont point échappés, nous serons punis beaucoup plus, si nous nous détournons [de celui qui parle] des Cieux;
೨೫ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?
26 Duquel la voix ébranla alors la terre, mais à l'égard du temps présent, il a fait cette promesse, disant: j'ébranlerai encore une fois non seulement la terre, mais aussi le Ciel.
೨೬ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.
27 Or ce [mot], encore une fois, signifie l'abolition des choses muables, comme ayant été faites [de main], afin que celles qui sont immuables demeurent;
೨೭“ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
28 C'est pourquoi saisissant le Royaume qui ne peut point être ébranlé, retenons la grâce par laquelle nous servions Dieu, en sorte que nous lui soyons agréables avec respect et avec crainte,
೨೮ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
29 Car aussi notre Dieu est un feu consumant.
೨೯ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.