< Lévitique 26 >
1 Vous ne vous ferez point d'idoles, et vous ne vous dresserez point d'image taillée, ni de statue, et vous ne mettrez point de pierre peinte dans votre pays pour vous prosterner devant elles; car je suis l'Eternel votre Dieu.
೧“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.
2 Vous garderez mes Sabbats, et vous révérerez mon Sanctuaire; je suis l'Eternel.
೨ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
3 Si vous marchez dans mes ordonnances, et si vous gardez mes commandements et les faites;
೩“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,
4 Je vous donnerai les pluies qu'il vous faut en leur temps, la terre donnera son fruit, et les arbres des champs donneront leur fruit.
೪ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.
5 La foulure des grains atteindra la vendange chez vous, et la vendange atteindra les semailles; vous mangerez votre pain, vous en serez rassasiés, et vous habiterez sûrement en votre pays.
೫ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
6 Je donnerai la paix au pays, vous dormirez sans qu'aucun vous épouvante; je ferai qu'il n'y aura plus de mauvaises bêtes au pays; et l'épée ne passera point par votre pays.
೬ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.
7 Mais vous poursuivrez vos ennemis, et ils tomberont par l'épée devant vous.
೭ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ.
8 Cinq d'entre vous en poursuivront cent, et cent en poursuivront dix mille; et vos ennemis tomberont par l'épée devant vous.
೮ನಿಮ್ಮಲ್ಲಿ ಐದು ಜನರು ನೂರು ಜನರನ್ನೂ ಮತ್ತು ನೂರು ಜನರು ಹತ್ತು ಸಾವಿರ ಜನರನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
9 Et je me tournerai vers vous, je vous ferai croître et multiplier, et j'établirai mon alliance avec vous.
೯ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
10 Vous mangerez aussi des provisions fort vieilles, et vous tirerez dehors le vieux pour y loger le nouveau.
೧೦ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
11 Même je mettrai mon Tabernacle au milieu de vous, et mon âme ne vous aura point à contrecœur.
೧೧ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.
12 Mais je marcherai au milieu de vous, je vous serai Dieu, et vous serez mon peuple.
೧೨ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.
13 Je [suis] l'Eternel votre Dieu qui vous ai retirés du pays d'Egypte, afin que vous ne fussiez point leurs esclaves; j'ai rompu les bois de votre joug, et vous ai fait marcher la tête levée.
೧೩ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.
14 Mais si vous ne m'écoutez point, et que vous ne fassiez pas tous ces commandements;
೧೪“ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
15 Et que vous rejetiez mes ordonnances, et que votre âme ait mes jugements à contrecœur, pour ne point faire tous mes commandements, et pour enfreindre mon alliance;
೧೫ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,
16 Aussi je vous ferai ceci; je répandrai sur vous la frayeur, la langueur, et l'ardeur, qui [vous] consumeront les yeux, et vous tourmenteront l'âme; et vous sèmerez en vain votre semence; car vos ennemis la mangeront.
೧೬ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
17 Et je mettrai ma face contre vous; vous serez battus devant vos ennemis; ceux qui vous haïssent domineront sur vous; et vous fuirez, sans qu'aucun vous poursuive.
೧೭ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.
18 Que si encore après ces choses vous ne m'écoutez point, j'en ajouterai sept fois autant pour vous châtier, à cause de vos péchés.
೧೮“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
19 Et j'abattrai l'orgueil de votre force, et je ferai que le ciel sera pour vous comme de fer, et votre terre comme d'airain.
೧೯ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.
20 Votre force se consumera inutilement, car votre terre ne donnera point son rapport, et les arbres de la terre ne donneront point leur fruit.
೨೦ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.
21 Que si vous marchez de front contre moi, et que vous refusiez de m'écouter, j'ajouterai sur vous sept fois autant de plaies, selon vos péchés.
೨೧“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
22 J'enverrai contre vous les bêtes des champs, qui vous priveront de vos enfants, qui tueront votre bétail, et vous réduiront à un petit nombre, et vos chemins seront déserts.
೨೨ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.
23 Que si vous ne vous corrigez pas après ces choses [pour vous convertir] à moi, mais que vous marchiez de front contre moi;
೨೩“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,
24 Je marcherai aussi de front contre vous, et je vous frapperai encore sept fois autant, selon vos péchés.
೨೪ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
25 Et je ferai venir sur vous l'épée qui fera la vengeance de mon alliance; et quand vous vous retirerez dans vos villes j'enverrai la mortalité parmi vous, et vous serez livrés entre les mains de l'ennemi.
೨೫ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
26 Lorsque je vous aurai rompu le bâton du pain, dix femmes cuiront votre pain dans un four, et vous rendront votre pain au poids; vous en mangerez, et vous n'en serez point rassasiés.
೨೬ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.
27 Que si avec cela vous ne m'écoutez point, mais que vous marchiez de front contre moi,
೨೭“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,
28 Je marcherai de front contre vous en ma fureur, et je vous châtierai aussi sept fois autant selon vos péchés;
೨೮ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.
29 Et vous mangerez la chair de vos fils, et vous mangerez aussi la chair de vos filles.
೨೯ನೀವು ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳ ಮಾಂಸವನ್ನೇ ತಿನ್ನುವಿರಿ.
30 Je détruirai vos hauts lieux; je ruinerai vos Tabernacles; je mettrai vos charognes sur les charognes de vos dieux de fiente, et mon âme vous aura en haine.
೩೦ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
31 Je réduirai aussi vos villes en désert, je ruinerai vos Sanctuaires, et je ne flairerai point votre odeur agréable.
೩೧ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಪರಿಮಳವನ್ನು ನಾನು ಮೂಸಿಯೂ ನೋಡುವುದಿಲ್ಲ.
32 Et je désolerai le pays, tellement que vos ennemis qui s'y habitueront, en seront étonnés.
೩೨ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
33 Et je vous disperserai parmi les nations, et je tirerai l'épée après vous, et votre pays sera en désolation, et vos villes en désert.
೩೩ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
34 Alors la terre prendra plaisir à ses Sabbats, tout le temps qu'elle sera désolée; et lorsque vous serez au pays de vos ennemis la terre se reposera, et prendra plaisir à ses Sabbats.
೩೪ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವುದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಅನುಭವಿಸುವುದು.
35 Tout le temps qu'elle demeurera désolée, elle se reposera; au lieu qu'elle ne s'était point reposée en vos Sabbats, lorsque vous y habitiez.
೩೫ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು.
36 Et quant à ceux qui demeureront de reste d'entre vous, je rendrai leur cœur lâche lorsqu'ils seront au pays de leurs ennemis, de sorte que le bruit d'une feuille émue les poursuivra, et ils fuiront comme s'ils fuyaient de devant l'épée, et ils tomberont sans qu'aucun les poursuive.
೩೬“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
37 Et ils s'entreheurteront l'un l'autre comme s'ils fuyaient de devant l'épée, sans que personne les poursuive; et vous ne pourrez point subsister devant vos ennemis.
೩೭ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಮುಂದೆ ನಿಲ್ಲಲಾರದೆ ತತ್ತರಿಸುವಿರಿ.
38 Et vous périrez entre les nations, et la terre de vos ennemis vous consumera.
೩೮ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು.
39 Et ceux qui demeureront de reste d'entre vous se fondront à cause de leurs iniquités, au pays de vos ennemis; et ils se fondront aussi à cause des iniquités de leurs pères, avec eux.
೩೯ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.
40 Alors ils confesseront leur iniquité, et l'iniquité de leurs pères, selon les péchés qu'ils auront commis contre moi; et même selon qu'ils auront marché de front contre moi.
೪೦“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ
41 J'aurai aussi marché de front contre eux, et je les aurai amenés au pays de leurs ennemis; et alors leur cœur incirconcis s'humiliera, et ils recevront alors avec soumission, [la punition de] leur iniquité.
೪೧ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,
42 Et alors je me souviendrai de mon alliance avec Jacob, et de mon alliance avec Isaac, et je me souviendrai aussi de mon alliance avec Abraham, et je me souviendrai de la terre.
೪೨ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.
43 Quand [donc] la terre aura été abandonnée par eux, et qu'elle aura pris plaisir à ses Sabbats, ayant demeure désolée à cause d'eux; lors donc qu'ils auront reçu avec soumission [la punition de] leur iniquité, à cause qu'ils ont rejeté mes jugements, et que leur âme a dédaigné mes ordonnances.
೪೩ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು. ಅವರು ಯೆಹೋವನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವುದು.
44 [Je m'en souviendrai, dis-je], lorsqu'ils seront au pays de leurs ennemis; parce que je ne les ai point rejetés, ni eus en haine pour les consumer entièrement, et pour rompre l'alliance que j'ai faite avec eux; car je [suis] l'Eternel leur Dieu.
೪೪ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.
45 Et je me souviendrai pour leur bien de l'alliance faite avec leurs ancêtres, lesquels j'ai retirés du pays d'Egypte, à la vue des nations, pour être leur Dieu; je [suis] l'Eternel.
೪೫ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.
46 Ce sont là les ordonnances, les jugements, et les lois que l'Eternel établit entre lui et les enfants d'Israël sur la montagne de Sinaï, par le moyen de Moïse.
೪೬ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳೇ ಇವು.