< Matthieu 18 >

1 En cette même heure-là les Disciples vinrent à Jésus, en lui disant: qui est le plus grand au Royaume des cieux?
ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು.
2 Et Jésus ayant appelé un petit enfant, le mit au milieu d'eux,
ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ,
3 Et leur dit: en vérité je vous dis, que si vous n'êtes changés, et si vous ne devenez comme de petits enfants, vous n'entrerez point dans le Royaume des cieux.
“ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
4 C'est pourquoi quiconque deviendra humble, comme est ce petit enfant, celui-là est le plus grand au Royaume des cieux.
ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.
5 Et quiconque reçoit un tel petit enfant en mon Nom, il me reçoit.
ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.
6 Mais quiconque scandalise un de ces petits qui croient en moi, il lui vaudrait mieux qu'on lui pendît une meule d'âne au cou, et qu'on le jetât au fond de la mer.
“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.
7 Malheur au monde à cause des scandales; car il est infaillible qu'il n'arrive des scandales; toutefois malheur à l'homme par qui le scandale arrive.
ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!
8 Que si ta main ou ton pied te fait broncher, coupe-les, et jette-les loin de toi; car il vaut mieux que tu entres boiteux ou manchot dans la vie, que d'avoir deux pieds ou deux mains, et d'être jeté au feu éternel. (aiōnios g166)
ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. (aiōnios g166)
9 Et si ton œil te fait broncher, arrache-le, et jette-le loin de toi; car il vaut mieux que tu entres dans la vie n'ayant qu'un œil, que d'avoir deux yeux, et d'être jeté dans la géhenne du feu. (Geenna g1067)
ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು. (Geenna g1067)
10 Prenez garde de ne mépriser aucun de ces petits, car je vous dis, que dans les cieux leurs Anges regardent toujours la face de mon Père qui est aux cieux.
“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.
11 Car le Fils de l'homme est venu pour sauver ce qui était perdu.
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
12 Que vous en semble? Si un homme a cent brebis, et qu'il y en ait une qui se soit égarée, ne laisse-t-il pas les quatre-vingt-dix-neuf, pour s'en aller dans les montagnes chercher celle qui s'est égarée?
“ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?
13 Et s'il arrive qu'il la trouve, en vérité je vous dis, qu'il en a plus de joie, que des quatre-vingt-dix-neuf qui ne se sont point égarées.
ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
14 Ainsi la volonté de votre Père qui est aux cieux n'est pas qu'un seul de ces petits périsse.
ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
15 Que si ton frère a péché contre toi, va, et reprends-le entre toi et lui seul; s'il t'écoute, tu as gagné ton frère.
“ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
16 Mais s'il ne t'écoute point, prends encore avec toi une ou deux [personnes]; afin qu'en la bouche de deux ou de trois témoins toute parole soit ferme.
ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’
17 Que s'il ne daigne pas les écouter, dis-le à l'Eglise; et s'il ne daigne pas écouter l'Eglise, qu'il te soit comme un païen et comme un péager.
ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
18 En vérité je vous dis, que tout ce que vous aurez lié sur la terre, sera lié dans le ciel; et tout ce que vous aurez délié sur la terre, sera délié dans le ciel.
“ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
19 Je vous dis aussi, que si deux d'entre vous s'accordent sur la terre, tout ce qu'ils demanderont leur sera donné par mon Père qui est aux cieux.
“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.
20 Car là où il y en a deux ou trois assemblés en mon Nom, je suis là au milieu d'eux.
ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.
21 Alors Pierre s'approchant, lui dit: Seigneur, jusques à combien de fois mon frère péchera-t-il contre moi, et je lui pardonnerai? sera-ce jusqu'à sept fois?
ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು.
22 Jésus lui répondit: je ne te dis pas jusqu'à sept fois, mais jusqu'à sept fois septante fois.
ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.
23 C'est pourquoi le Royaume des cieux est semblable à un Roi qui voulut compter avec ses serviteurs.
“ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
24 Et quand il eut commencé à compter, on lui en présenta un qui lui devait dix mille talents.
ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
25 Et parce qu'il n'avait pas de quoi payer, son Seigneur commanda qu'il fût vendu, lui et sa femme et ses enfants, et tout ce qu'il avait, et que la dette fût payée.
ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.
26 Mais ce serviteur se jetant à ses pieds, le suppliait, en disant: Seigneur! aie patience, et je te rendrai le tout.
“ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು.
27 Alors le Seigneur de ce serviteur, touché de compassion, le relâcha, et lui quitta la dette.
ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
28 Mais ce serviteur étant sorti, rencontra un de ses compagnons de service, qui lui devait cent deniers; et l'ayant pris, il l'étranglait, en lui disant: paye-moi ce que tu me dois.
“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.
29 Mais son compagnon de service se jetant à ses pieds, le priait, en disant: aie patience, et je te rendrai le tout.
“ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.
30 Mais il n'en voulut rien faire; et il s'en alla, et le mit en prison, jusqu'à ce qu'il eût payé la dette.
“ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
31 Or ses autres compagnons de service voyant ce qui était arrivé, en furent extrêmement touchés, et ils s'en vinrent, et déclarèrent à leur Seigneur tout ce qui s'était passé.
ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.
32 Alors son Seigneur le fit venir, et lui dit: méchant serviteur, je t'ai quitté toute cette dette, parce que tu m'en as prié;
“ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.
33 Ne te fallait-il pas aussi avoir pitié de ton compagnon de service, comme j'avais eu pitié de toi?
ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,
34 Et Son seigneur étant en colère le livra aux sergents, jusqu'à ce qu'il lui eût payé tout ce qui lui était dû.
ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.
35 C'est ainsi que vous fera mon Père céleste, si vous ne pardonnez de [tout] votre cœur chacun à son frère ses fautes.
“ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.

< Matthieu 18 >