< Josué 2 >
1 Josué, fils de Nun, envoya secrètement de Sittim deux espions, en leur disant: Allez, examinez le pays et Jérico. Ils partirent donc et vinrent dans la maison d'une courtisane, nommée Rahab, et ils couchèrent là.
೧ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.
2 Et l'on dit au roi de Jérico: Voici, des hommes sont venus ici cette nuit, d'entre les enfants d'Israël, pour explorer le pays.
೨ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.
3 Le roi de Jérico envoya dire à Rahab: Fais sortir les hommes qui sont venus chez toi, qui sont entrés dans ta maison; car ils sont venus pour explorer tout le pays.
೩ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.
4 Mais la femme avait pris les deux hommes, et les avait cachés; et elle dit: Il est vrai que ces hommes sont venus chez moi, mais je ne savais d'où ils étaient;
೪ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.
5 Et comme la porte allait être fermée, sur le soir, ces hommes sont sortis; je ne sais où ils sont allés; hâtez-vous de les poursuivre, car vous les atteindrez.
೫ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು.
6 Or, elle les avait fait monter sur le toit, et les avait cachés sous des tiges de lin, qu'elle avait arrangées sur le toit.
೬ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.
7 Et les hommes les poursuivirent dans la direction du Jourdain, vers les gués, et l'on ferma la porte, après que ceux qui les poursuivaient furent sortis.
೭ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು.
8 Avant qu'ils se couchassent, elle monta vers eux sur le toit,
೮ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆಯು ಮಾಳಿಗೆ ಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನೆಂದರೆ
9 Et elle leur dit: Je sais que l'Éternel vous a donné le pays, et que la terreur de votre nom nous a saisis, et que tous les habitants du pays ont perdu courage à cause de vous.
೯“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
10 Car nous avons appris comment l'Éternel a tari devant vous les eaux de la mer Rouge, quand vous sortiez d'Égypte, et ce que vous avez fait aux deux rois des Amoréens qui étaient au delà du Jourdain, à Sihon et à Og, que vous avez dévoués à l'interdit.
೧೦ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ
11 Nous l'avons appris, et notre cœur s'est fondu, et le courage d'aucun homme ne se soutient encore devant vous; car l'Éternel votre Dieu est Dieu dans les cieux en haut et sur la terre en bas.
೧೧ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.
12 Maintenant donc, jurez-moi, je vous prie, par l'Éternel, que puisque j'ai usé de bonté envers vous, vous userez aussi de bonté envers la maison de mon père; et donnez-moi une preuve assurée,
೧೨ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.
13 Que vous laisserez vivre mon père, ma mère, mes frères, mes sœurs, et tous ceux qui leur appartiennent, et que vous garantirez nos personnes de la mort.
೧೩ನನ್ನ ತಂದೆ ತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದಳು.
14 Et ces hommes lui répondirent: Nous exposerons notre personne pour vous à la mort, si vous ne divulguez pas notre entreprise; et quand l'Éternel nous donnera le pays, nous te traiterons avec bonté et fidélité.
೧೪ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.
15 Elle les fit donc descendre avec une corde par la fenêtre; car sa maison était dans le mur du rempart, et elle habitait sur le rempart.
೧೫ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ
16 Et elle leur dit: Allez vers la montagne, de peur que ceux qui vous poursuivent ne vous rencontrent, et cachez-vous là trois jours, jusqu'à ce que ceux qui vous poursuivent soient de retour; et après cela vous irez votre chemin.
೧೬“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.
17 Or ces hommes lui avaient dit: Voici comment nous serons quittes de ce serment que tu nous as fait faire.
೧೭ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;
18 Lorsque nous entrerons dans le pays, tu attacheras ce cordon de fil écarlate à la fenêtre par laquelle tu nous auras fait descendre, et tu réuniras chez toi, dans la maison, ton père, ta mère, tes frères, et toute la famille de ton père;
೧೮ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.
19 Et si quelqu'un d'eux sort des portes de ta maison, son sang sera sur sa tête et nous en serons innocents; mais pour tous ceux qui seront avec toi dans la maison, leur sang sera sur notre tête, si l'on met la main sur quelqu'un d'eux.
೧೯ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.
20 Et si tu divulgues ce qui nous concerne, nous serons quittes du serment que tu nous as fait faire.
೨೦ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು.
21 Alors elle répondit: Qu'il en soit comme vous avez dit. Puis elle les renvoya, et ils s'en allèrent. Et elle attacha le cordon d'écarlate à la fenêtre.
೨೧ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.
22 Ils s'en allèrent donc et vinrent à la montagne, et demeurèrent là trois jours, jusqu'à ce que ceux qui les poursuivaient fussent de retour. Et ceux qui les poursuivaient les cherchèrent par tout le chemin, et ils ne les trouvèrent point.
೨೨ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
23 Les deux hommes s'en retournèrent alors, descendirent de la montagne et, passant le Jourdain, ils vinrent vers Josué, fils de Nun, et lui racontèrent tout ce qui leur était arrivé.
೨೩ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.
24 Et ils dirent à Josué: Certaine-ment l'Éternel a livré tout le pays entre nos mains; et même, tous les habitants du pays ont perdu courage devant nous.
೨೪ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.