< Psaumes 101 >
1 Psaume de David. Je chanterai la grâce et la justice; Éternel, je te psalmodierai.
೧ದಾವೀದನ ಕೀರ್ತನೆ. ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು; ಯೆಹೋವನೇ, ನಿನ್ನನ್ನು ಕೊಂಡಾಡುವೆನು.
2 Je prendrai garde à la voie de l'intégrité. Quand viendras-tu à moi? Je marcherai dans l'intégrité de mon cœur, au milieu de ma maison.
೨ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
3 Je ne mettrai rien de mauvais devant mes yeux; j'ai en haine la conduite des transgresseurs; elle ne s'attachera point à moi.
೩ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.
4 Le cœur pervers s'éloignera de moi; je ne connaîtrai pas le méchant.
೪ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ; ಕೆಟ್ಟತನವನ್ನು ಅರಿಯದಿರುವೆನು.
5 Je retrancherai celui qui médit en secret de son prochain; je ne supporterai point celui qui a le regard hautain et le cœur enflé.
೫ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
6 J'aurai les yeux sur les fidèles du pays, afin qu'ils demeurent avec moi; celui qui marche dans l'intégrité, me servira.
೬ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
7 Celui qui use de tromperie, n'habitera point dans ma maison; celui qui profère le mensonge, ne subsistera pas devant mes yeux.
೭ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
8 Chaque matin je retrancherai tous les méchants du pays, pour exterminer de la cité de l'Éternel tous les ouvriers d'iniquité.
೮ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.