< 1 Rois 1 >
1 Or David était vieux, avancé en âge, et on le couvrait de vêtements, mais il ne se réchauffait point.
೧ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.
2 Et ses serviteurs lui dirent: Que l'on cherche à mon Seigneur le Roi une jeune fille, une vierge, pour faire le service du Roi et le soigner et dormir entre ses bras, afin que mon Seigneur se réchauffe.
೨ಆದುದರಿಂದ ಅವನ ಸೇವಕರು ಅವನಿಗೆ, “ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು” ಎಂದು ಹೇಳಿದರು.
3 Et l'on se mit en quête d'une jeune fille, belle, dans tout le territoire d'Israël, et l'on trouva Abisag, de Sunem, et on l'amena au Roi.
೩ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.
4 Or la jeune fille était extrêmement belle. Et elle soigna le Roi et le servit, mais il ne la connut point.
೪ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.
5 Cependant Adonia, fils de Haggith, se mit en avant et dit: C'est moi qui serai Roi! Et il se procura un char et des cavaliers et cinquante hommes pour le précéder comme coureurs.
೫ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.
6 Et son père durant toute sa vie ne lui avait jamais fait de la peine en disant: Pourquoi agis-tu ainsi? Et il était aussi très beau de figure, et [sa mère] l'avait enfanté après Absalom.
೬ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
7 Et il entra en pourparler avec Joab, fils de Tseruïa, et avec le Prêtre Abiathar qui le suivaient comme auxiliaires.
೭ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.
8 Alors le Prêtre Tsadoc, et Benaïa, fils de Joïada, et Nathan, le prophète, et Siméï et Réï et les héros de David ne furent point les partisans d'Adonia.
೮ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
9 Et Adonia tua des moutons et des bœufs et des veaux gras près de la pierre Sohéleth qui est à côté de la Fontaine du Foulon, et il convia tous ses frères fils du Roi, et tous les hommes de Juda au service du Roi.
೯ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.
10 Mais il ne convia point Nathan, le prophète, ni Benaïa, ni les héros, ni Salomon, son frère.
೧೦ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.
11 Alors Nathan s'aboucha avec Bathséba, mère de Salomon, et dit: N'as-tu pas appris l'avènement d'Adonia, fils de Haggith, à la royauté? Et notre Seigneur, David, l'ignore.
೧೧ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?
12 Eh bien! maintenant reçois de moi un conseil pour mettre en sûreté ta vie et la vie de ton fils Salomon!
೧೨ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
13 Va et entre chez le Roi David et lui dis: N'as-tu pas, ô Roi, mon Seigneur, fait à ta servante un serment et cette déclaration: Salomon, ton fils, sera Roi après moi, et il s'assiéra sur mon trône? Pourquoi donc Adonia est-il Roi?
೧೩ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ’ ಎಂದು ಕೇಳು.
14 Voici, pendant que tu seras encore là en pourparler avec le Roi, moi, j'entrerai après toi, et je compléterai ton discours.
೧೪ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು” ಎಂದನು.
15 Bathséba entra donc chez le Roi dans l'appartement. Or le Roi était très vieux, et Abisag, la Sunamite, servait le Roi.
೧೫ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
16 Et Bathséba s'inclina et se prosterna devant le Roi. Et le Roi dit: Qu'est-ce qui t'amène?
೧೬ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ನಿನಗೇನು ಬೇಕು?” ಎಂದು ಆಕೆಯನ್ನು ಕೇಳಿದನು.
17 Et elle lui dit: Mon Seigneur, tu as fait par l'Éternel, ton Dieu, à ta servante ce serment: Salomon, ton fils, sera Roi après moi, et c'est lui qui s'assiéra sur mon trône;
೧೭ಆಗ ಆಕೆಯು, “ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.
18 et maintenant voilà que Adonia est Roi; et cependant, ô Roi, mon Seigneur, tu l'ignores. Et il a tué des bœufs et des veaux gras et des moutons en quantité;
೧೮ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ.
19 et il a convié tous les fils du Roi, et le Prêtre Abiathar et Joab, le chef de l'armée; mais à Salomon, ton serviteur, il n'a point adressé d'invitation.
೧೯ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.
20 Et sur toi, ô Roi, mon Seigneur, sont fixés les yeux de tout Israël afin que tu déclares qui doit s'asseoir sur le trône de mon Seigneur le Roi après lui.
೨೦ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.
21 Et il adviendra que, lorsque mon Seigneur le Roi ira reposer avec ses pères, nous serons, moi et mon fils Salomon, traités comme coupables.
೨೧ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.
22 Et voilà que comme elle parlait encore avec le Roi, Nathan, le prophète, arriva.
೨೨ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.
23 Et on l'annonça au Roi en ces termes: Voici Nathan, le prophète. Et il se présenta devant le Roi, et il se prosterna devant le Roi le visage contre terre.
೨೩ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು.
24 Et Nathan parla: Mon Seigneur le Roi, tu as donc dit: Adonia sera Roi après moi, et c'est lui qui s'assiéra sur mon trône!
೨೪ನಾತಾನನು, “ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
25 car aujourd'hui il est descendu et a tué des bœufs et des veaux gras et des moutons en quantité, et a convié tous les fils du Roi et les chefs de l'armée et le Prêtre Abiathar, et les voilà mangeant et buvant devant lui et disant: Vive le Roi Adonia!
೨೫ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ’ ಎಂದು ಕೂಗುತ್ತಿದ್ದಾರೆ.
26 Mais à moi qui suis ton serviteur et au Prêtre Tsadoc et à Benaïa, fils de Joïada, et à Salomon, ton serviteur, il n'a point adressé d'invitation.
೨೬ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.
27 Est-ce que ce serait de par mon Seigneur le Roi que telle chose aurait lieu, sans que tu aies notifié à ton serviteur qui doit s'asseoir sur le trône de mon Seigneur le Roi après lui?
೨೭ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ” ಎಂದು ಹೇಳಿದನು.
28 Alors le Roi David répondit et dit: Mandez-moi Bathséba! Et elle parut devant le Roi et se présenta au Roi.
೨೮ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.
29 Et le Roi prononça le serment en ces termes: Par la vie de l'Éternel qui a délivré mon âme de toutes les détresses!
೨೯ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,
30 ainsi que je te l'ai juré par l'Éternel, Dieu d'Israël, quand j'ai dit: Salomon, ton fils, sera Roi après moi, et c'est lui qui me remplacera sur le trône, ainsi veux-je l'effectuer aujourd'hui!
೩೦ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು” ಎಂದನು.
31 Alors Bathséba s'inclina le visage contre terre et se prosterna devant le Roi et dit: Vive mon Seigneur le roi David éternellement!
೩೧ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.
32 Et le Roi David dit: Mandez-moi le Prêtre Tsadoc et le prophète Nathan, et Benaïa, fils de Joïada! Et ils se présentèrent au Roi.
೩೨ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, “ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ” ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.
33 Et le Roi leur dit: Prenez avec vous les serviteurs de votre maître, et donnez à mon fils Salomon pour monture mon propre mulet et faites-le descendre à Gihon.
೩೩ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.
34 Et que l'onction lui soit conférée là par le Prêtre Tsadoc et le prophète Nathan, pour l'établir Roi d'Israël! et sonnez de la trompette et dites: Vive le Roi Salomon!
೩೪ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.
35 Et remontez à sa suite, et qu'il vienne et se place sur mon trône, et c'est lui qui me succédera dans la royauté, et je l'ordonne Prince d'Israël et de Juda.
೩೫ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ” ಎಂದನು.
36 Alors Benaïa, fils de Joïada, répondit au Roi et dit: Ainsi soit-il! Ainsi prononce l'Éternel, le Dieu de mon Seigneur, du Roi.
೩೬ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
37 Que de même que l'Éternel a été avec mon Seigneur le Roi, de même Il soit avec Salomon, et donne à son trône plus de grandeur qu'au trône de mon Seigneur le Roi David!
೩೭ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಹೆಚ್ಚಾಗಿ ಅಭಿವೃದ್ಧಿಮಾಡಲಿ” ಎಂದು ನುಡಿದನು.
38 En conséquence le Prêtre Tsadoc et le prophète Nathan, et Benaïa, fils de Joïada, et les satellites et les coureurs descendirent et placèrent Salomon sur le mulet du Roi David, et le menèrent à Gihon.
೩೮ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
39 Et le Prêtre Tsadoc prit la corne d'huile dans la Tente, et il oignit Salomon, et on sonna de la trompette et tout le peuple dit: Vive le Roi Salomon!
೩೯ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
40 Et tout le peuple monta à sa suite, et tout le peuple formait des concerts de flûtes, et ils se livraient aux transports d'une grande joie, à faire éclater la terre par leurs acclamations.
೪೦ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
41 Et Adonia entendit, et tous les convives avec lui; or ils étaient a la fin du banquet, et Joab distingua le son de la trompette et dit: Pourquoi cette clameur dans la ville en rumeur?
೪೧ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸಿದನು.
42 Il parlait encore que voici venir Jonathan, fils du Prêtre Abiathar; et Adonia dit: Viens! tu es un brave, et tu nous donneras de bonnes nouvelles!
೪೨ಆಗ ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ” ಎಂದನು.
43 Mais Jonathan répondit et dit à Adonia: Au contraire! notre Seigneur le Roi David a fait Salomon Roi.
೪೩ಯೋನಾತಾನನು ಅವನಿಗೆ, “ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
44 Et le Roi a envoyé avec lui le Prêtre Tsadoc et le prophète Nathan et Benaïa, fils de Joïada, et les satellites et les coureurs et ils lui ont donné pour monture le mulet du Roi,
೪೪ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.
45 et le Prêtre Tsadoc et le prophète Nathan l'ont oint comme Roi à Gihon, et de là sont remontés joyeux, et la ville est en rumeur; c'est le bruit que vous entendez.
೪೫ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.
46 Et de plus Salomon s'est assis sur le trône royal,
೪೬ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
47 et de plus les serviteurs du Roi sont entrés pour féliciter notre Seigneur le Roi David en disant: Que ton Dieu rende le nom de Salomon plus beau que le tien, et son trône plus éminent que ton trône!… et le Roi s'est prosterné sur son lit,
೪೭ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.
48 et de plus le Roi a prononcé ces paroles: Béni soit l'Éternel, Dieu d'Israël, qui en ce jour m'a accordé quelqu'un pour s'asseoir sur mon trône, et m'en a rendu témoin!
೪೮ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, ‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಹೇಳಿದ್ದಾನೆ” ಅಂದರು.
49 Alors tous les convives d'Adonia prirent l'épouvante et se levèrent et s'en allèrent chacun de son côté.
೪೯ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.
50 Mais Adonia eut peur de Salomon, et s'étant levé il alla saisir les cornes de l'Autel.
೫೦ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.
51 Et l'avis en fut porté à Salomon en ces termes: Voilà qu'Adonia a peur du Roi Salomon, et voilà qu'il a saisi les cornes de l'Autel, disant: Qu'aujourd'hui le Roi Salomon me fasse le serment de ne pas mettre à mort son serviteur par l'épée.
೫೧ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ’” ಎಂಬುದಾಗಿ ತಿಳಿಸಿದನು.
52 Alors Salomon dit: S'il veut être un brave homme, pas un seul de ses cheveux ne tombera en terre; mais s'il est pris en flagrant délit, il est mort.
೫೨ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.
53 Là-dessus le Roi Salomon envoya des gens pour le faire descendre de l'Autel, et il se présenta et il se prosterna devant le Roi Salomon et Salomon lui dit: Va dans ta maison.
೫೩ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.