< 2 Chroniques 33 >
1 Manassé avait douze ans à son avènement et il régna cinquante-cinq ans à Jérusalem.
೧ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.
2 Et il fit ce qui est mal aux yeux de l'Éternel, imitant les abominations des nations que l'Éternel avait chassées devant les enfants d'Israël.
೨ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
3 Et il releva les tertres qu'Ézéchias, son père, avait renversés, et érigea des autels aux Baals, et fit des Astartés et adora toute l'armée des Cieux et lui rendit un culte.
೩ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
4 Et il bâtit des autels dans le Temple de l'Éternel, dont l'Éternel avait dit: A Jérusalem sera mon Nom éternellement.
೪ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,
5 Et il bâtit des autels a toute l'armée des Cieux dans les deux parvis du Temple de l'Éternel.
೫ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
6 Et il fit passer ses fils par le feu dans la Vallée des fils de Hinnom, et pratiqua la magie, les augures et les évocations, et institua des évocateurs et des pronostiqueurs et il fit le mal à l'extrême aux yeux de l'Éternel, à l'effet de le provoquer.
೬ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
7 Et il plaça le simulacre sculpté qu'il avait fait, dans le Temple de Dieu, dont Dieu avait dit à David et à Salomon, son fils: Dans ce Temple-ci, et à Jérusalem que j'ai choisie sur toutes les Tribus d'Israël, je mettrai Mon Nom pour l'éternité.
೭ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.
8 Et je ne laisserai plus le pied d'Israël quitter le sol que j'ai assuré à vos pères, pourvu seulement qu'ils veillent à pratiquer tout ce que par l'organe de Moïse je leur ai prescrit, toute la Loi, et les statuts et les arrêts.
೮ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
9 Mais Manassé égara Juda et les habitants de Jérusalem au point qu'ils firent pis que les nations que l'Éternel avait exterminées devant les enfants d'Israël.
೯ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
10 Et l'Éternel parla à Manassé et à son peuple, mais ils n'y prirent pas garde.
೧೦ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
11 Alors l'Éternel les fit envahir par les généraux d'armée du roi d'Assyrie, qui avec des ceps firent Manassé prisonnier et le lièrent avec des chaînes et le menèrent à Babel.
೧೧ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
12 Et dans la gêne où il était, il chercha à fléchir l'Éternel, son Dieu, et s'humilia profondément devant le Dieu de ses pères,
೧೨ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು
13 et lui adressa sa prière, et Dieu se laissa fléchir et exauça sa prière et le fit revenir à Jérusalem dans son royaume, et Manassé reconnut que l'Éternel est Dieu.
೧೩ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.
14 Et ensuite il bâtit un mur extérieur à la Cité de David, à l'occident de Gihon dans le ravin, et à l'avenue de la porte des Poissons, et lui fit contourner Ophel, et l'éleva très haut, et il plaça des commandants militaires dans toutes les places fortes de Juda.
೧೪ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
15 Et il fit disparaître les dieux de l'étranger et le simulacre, du Temple de l'Éternel, et tous les autels qu'il avait bâtis sur la montagne du Temple de l'Éternel et à Jérusalem, et les jeta en dehors de la ville.
೧೫ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.
16 Et il releva l'autel de l'Éternel et y offrit des sacrifices pacifiques et d'actions de grâces et enjoignit à Juda de servir l'Éternel, Dieu d'Israël.
೧೬ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.
17 Cependant le peuple sacrifiait encore sur les tertres, mais seulement à l'Éternel, leur Dieu.
೧೭ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
18 Le reste des actes de Manassé et sa prière à son Dieu, et les discours des Voyants qui lui parlèrent au nom de l'Éternel, Dieu d'Israël, sont d'ailleurs consignés dans les histoires des rois d'Israël;
೧೮ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.
19 et sa prière et son exaucement et tout son péché et sa rébellion et les lieux où il avait construit des tertres et érigé des Astartés et des idoles, avant de s'être humilié, tout cela se trouve consigné dans les Histoires de Hozaï.
೧೯ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.
20 Et Manassé reposa à côté de ses pères et reçut la sépulture dans sa demeure, et Amon, son fils, devint roi en sa place.
೨೦ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
21 Amon avait vingt-deux ans à son avènement, et il régna deux ans à Jérusalem.
೨೧ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.
22 Et il fit ce qui est mal aux yeux de l'Éternel comme avait fait Manassé, son père, et Amon offrit des sacrifices à toutes les idoles qu'avait faites Manassé, son père, et leur rendit un culte.
೨೨ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
23 Mais il ne s'humilia pas devant l'Éternel, comme s'était humilié Manassé, son père; car lui, Amon, se rendit beaucoup plus coupable.
೨೩ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.
24 Et ses serviteurs conjurèrent contre lui et le tuèrent dans son palais.
೨೪ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.
25 Cependant le peuple du pays fit main basse sur tous ceux qui avaient conjuré contre le roi Amon, et établit Josias, son fils, roi en sa place.
೨೫ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.