< Deutéronome 18 >
1 Les Prêtres, les Lévites, la Tribu de Lévi entière, n'auront ni portion ni lot au milieu d'Israël: ils jouiront des sacrifices ignés de l'Éternel et de Sa part;
೧ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.
2 ils n'auront aucune propriété parmi leurs frères.
೨ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು.
3 L'Éternel est leur lot, comme Il le leur a dit. Et voici ce que les Prêtres ont le droit de réclamer du peuple et de ceux qui sacrifient des victimes, soit gros, soit menu bétail: on donnera au Prêtre l'épaule et les deux mâchoires et le ventricule gras.
೩ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
4 Tu leur donneras les prémices de ton froment, de ton moût et de ton huile, et les prémices de la tonte de tes moutons.
೪ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
5 Car l'Éternel, ton Dieu, l'a choisi entre toutes tes Tribus pour porter présence officiant de par l'Éternel, lui et ses fils à perpétuité.
೫ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.
6 Et si le Lévite sort de l'une de tes villes où il est domicilié, dans tout Israël, et que suivant tout le désir de son âme il arrive au lieu qu'aura choisi l'Éternel,
೬ಇಸ್ರಾಯೇಲರ ಯಾವುದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು, ಯೆಹೋವನು ಆರಿಸಿಕೊಂಡ ಪವಿತ್ರ ಸ್ಥಳಕ್ಕೆ ಬಂದು,
7 et y officie de par l'Éternel, son Dieu, ainsi que tous ses frères les Lévites présents pour servir l'Éternel,
೭ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
8 ils jouiront de portions égales, outre ce qu'ils peuvent vendre de leur patrimoine.
೮ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.
9 Lorsque tu seras entré dans le pays que l'Éternel, ton Dieu, te donne, tu n'apprendras pas à imiter les abominations de ces nations-là.
೯ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
10 Qu'on ne trouve chez toi personne qui fasse passer par le feu son fils ou sa fille, qui pratique la divination, les maléfices, les enchantements et les conjurations,
೧೦ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
11 personne qui fasse des nœuds magiques, évoque les morts, se livre aux sciences occultes, interroge les trépassés.
೧೧ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
12 Car quiconque fait ces choses est l'abomination de l'Éternel, et c'est à cause de cette abomination-là que l'Éternel, ton Dieu, va les chasser devant toi.
೧೨ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
13 C'est sans partage que tu dois appartenir à l'Éternel, ton Dieu.
೧೩ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.
14 Car ces nations que tu vas expulser, écoutent les enchanteurs et les devins; mais à toi, l'Éternel, ton Dieu, ne le permet pas.
೧೪ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.
15 C'est un prophète de ton sein, d'entre tes frères, semblable à moi que te suscitera l'Éternel, ton Dieu, c'est Lui que vous écouterez;
೧೫ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
16 ainsi que tu l'as demandé à l'Éternel, ton Dieu, en Horeb, le jour de l'Assemblée, lorsque tu dis: Désormais je ne veux plus entendre la voix de l'Éternel, mon Dieu, ni voir ce grand feu, afin de ne pas mourir.
೧೬ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.
17 Et l'Éternel me dit: Ce qu'ils ont dit est bien;
೧೭ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;
18 je leur susciterai un prophète du sein de leurs frères, semblable à toi, et je mettrai mes paroles en sa bouche, et il leur dira tout ce dont je le chargerai.
೧೮ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
19 Et à quiconque n'écoutera pas mes paroles qu'il prononcera en mon nom, je lui en demanderai compte.
೧೯ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.
20 Mais le prophète qui aura l'audace de dire en mon nom ce que je ne lui aurai point commandé de dire, et celui qui parlera au nom de dieux étrangers, ce prophète mourra.
೨೦ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
21 Et si tu dis en ton cœur: A quoi reconnaîtrons-nous la parole que l'Éternel n'aura point prononcée?…
೨೧‘ಪ್ರವಾದಿಯು ಹೇಳಿದ ಮಾತು ಯೆಹೋವನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ’ ಅಂದುಕೊಳ್ಳುತ್ತೀರೋ?
22 ce que dira ce prophète au nom de l'Éternel et qui n'aura pas lieu, et ne s'accomplira pas, telle sera la parole que l'Éternel n'aura pas dite; le prophète l'a dite par audace: n'aie pas peur de lui.
೨೨ಪ್ರವಾದಿಯು ‘ಇದು ಯೆಹೋವನ ನುಡಿ’ ಎಂದು ಹೇಳಿ, ಆತನು ತಿಳಿಸಿದ ಸಂಗತಿಯೂ ನಡೆಯದೆ ಹೋದರೆ, ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ನನ್ನ ಅಪ್ಪಣೆ ಇಲ್ಲದೆ ಮಾತನಾಡಿದವನು ಮತ್ತು ನೀವು ಅವನಿಗೆ ಹೆದರಬಾರದು” ಎಂದು ಹೇಳಿದನು.