< Ézéchiel 2 >
1 Et Il me dit: Fils de l'homme, dresse-toi sur tes pieds, et je te parlerai.
೧ಯೆಹೋವನು ನನಗೆ, “ನರಪುತ್ರನೇ, ಎದ್ದು ನಿಂತುಕೋ, ನಿನ್ನ ಸಂಗಡ ಮಾತನಾಡುವೆನು” ಎಂದು ಹೇಳಿದನು.
2 Et comme Il me parlait, l'Esprit me pénétra et me fit tenir sur mes pieds, et je l'entendis me parler;
೨ಆತನು ಈ ಮಾತನ್ನು ಹೇಳುವಾಗ ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತನಾಡಿದಾತನ ನುಡಿಯನ್ನು ಕೇಳಿದೆನು.
3 et Il me dit: Fils de l'homme, je t'envoie aux enfants d'Israël, à cette race rebelle qui s'est rebellée contre moi: eux et leurs pères se sont révoltés contre moi, jusqu'au jour même où nous sommes.
೩ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನನ್ನ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ; ಈ ದಿನದವರೆಗೆ ಅವರೂ, ಅವರ ಪೂರ್ವಿಕರೂ ನನ್ನ ವಿರುದ್ಧವಾಗಿ ಪಾಪಮಾಡುತ್ತಲೇ ಇದ್ದಾರೆ.
4 Ce sont des fils au visage dur, au cœur endurci, auprès de qui je t'envoie. Dis-leur: « Ainsi parle le Seigneur, l'Éternel. »
೪“ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.
5 Qu'ils t'écoutent, ou qu'ils s'y refusent (car ils sont une race réfractaire), il faut qu'ils sachent qu'un prophète est au milieu d'eux.
೫ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”
6 Et toi, fils de l'homme, n'aie nulle peur d'eux, et de leurs discours n'aie nulle peur, quand même ils sont des orties et des épines pour toi, et que tu habites avec des scorpions; de leurs discours n'aie nulle peur, et ne tremble point en leur présence, car ils sont une race réfractaire.
೬“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.
7 Et tu leur diras mes paroles, qu'ils écoutent, ou qu'ils s'y refusent, car ils sont réfractaires.
೭ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”
8 Mais toi, fils de l'homme, écoute ce que je vais te dire! Ne sois pas réfractaire, comme cette race réfractaire! Ouvre la bouche et mange ce que je te présente.
೮ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.
9 Et je regardai, et voici, une main était tendue vers moi, et voici, elle tenait un volume en rouleau.
೯ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.
10 Et Il le déploya devant moi, et il était écrit en dedans et en dehors; et des chants lugubres, et des complaintes, et des lamentations y étaient écrits.
೧೦ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.