< Genèse 2 >
1 Et ainsi furent achevés les cieux et la terre et toute leur armée.
೧ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
2 Et Dieu acheva le septième jour son œuvre qu'il avait faite, et Il se reposa le septième jour de toute son œuvre qu'Il avait faite.
೨ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.
3 Et Dieu bénit le septième jour et le consacra, parce que ce jour-là Il se reposa de toute son œuvre qu'il avait créée en agissant.
೩ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
4 C'est ici l'histoire des cieux et de la terre lors de leur création, lorsque l'Éternel Dieu fit les cieux et la terre.
೪ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.
5 Or, tous les arbustes des champs n'étaient point encore sur la terre, et toutes les plantes des champs n'avaient pas germé; car l'Éternel Dieu n'avait pas encore fait pleuvoir sur la terre; et il n'existait point d'homme pour travailler le sol.
೫ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
6 Mais un brouillard s'élevait de la terre et imbibait toute la surface du sol.
೬ಆದರೂ ಭೂಮಿಯಿಂದ ನೀರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
7 Alors l'Éternel Dieu forma l'homme de la poudre de la terre, et Il souffla dans ses narines l'haleine de la vie, et l'homme devint une personne vivante.
೭ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
8 Et l'Éternel Dieu planta un jardin en Eden vers l'Orient, et Il y établit l'homme qu'il avait formé.
೮ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
9 Et l'Éternel Dieu fit germer du sol toutes sortes d'arbres agréables à la vue et bons pour la nourriture, et l'arbre de la vie au milieu du jardin et l'arbre de la connaissance du bien et du mal.
೯ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
10 Et un fleuve sortait d'Eden pour arroser le jardin; et depuis là il se divisait et formait quatre bras.
೧೦ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
11 Le nom du premier est Pison: il entoure tout le pays de Havila, où est l'or;
೧೧ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
12 et l'or de ce pays-là est bon: là se trouve le bdellium et la pierre d'onyx.
೧೨ಆ ಪ್ರದೇಶದ ಬಂಗಾರವು ಅಮೂಲ್ಯವಾದದ್ದು. ಅಲ್ಲಿ ಬದೋಲಖ ಧೂಪವೂ, ಗೋಮೇಧಿಕದ ಅಮೂಲ್ಯ ರತ್ನವು ಸಿಕ್ಕುತ್ತದೆ.
13 Et le nom du second fleuve est Gihon: il entoure tout le pays de Cus.
೧೩ಎರಡನೆಯ ನದಿಯ ಹೆಸರು ಗೀಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
14 Et le nom du troisième fleuve est Hiddekel; il coule à l'orient d'Assur. Et le quatrième fleuve c'est le Phrath.
೧೪ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
15 Et l'Éternel Dieu prit l'homme, et l'établit dans le jardin d'Eden pour le cultiver et pour le garder.
೧೫ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
16 Et l'Éternel Dieu imposa un commandement à l'homme en ces termes: Tu peux manger de tous les arbres du jardin;
೧೬ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
17 mais de l'arbre de la connaissance du bien et du mal, tu n'en mangeras pas, car le jour où tu en mangeras, de mort tu mourras.
೧೭ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
18 Et l'Éternel Dieu dit: Il n'est pas bon que l'homme soit seul; je lui ferai une aide qui lui corresponde.
೧೮ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
19 Puis l'Éternel Dieu forma de la terre tous les animaux des champs et tous les oiseaux des cieux, et Il les amena à l'homme pour voir quel nom il leur donnerait, et tous les noms que l'homme leur donnerait, aux animaux vivants, devaient rester leurs noms.
೧೯ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
20 Et l'homme nomma de noms tous les bestiaux et tous les oiseaux des cieux, et toutes les bêtes des champs; mais pour l'homme il ne trouva pas d'aide qui lui correspondît.
೨೦ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
21 Alors l'Éternel Dieu fit tomber un profond sommeil sur l'homme, qui s'endormit; et Il prit l'une de ses côtes, et referma les chairs en son lieu.
೨೧ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
22 Et l'Etemel Dieu bâtit en femme la côte qu'il avait prise de l'homme, et Il l'amena à l'homme.
೨೨ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
23 Alors l'homme dit: Cette fois, c'est os de mes os, chair de ma chair! On l'appellera femme-d'homme, parce qu'elle a été prise de l'homme.
೨೩“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.
24 C'est pourquoi un homme quittera son père et sa mère pour s'attacher à sa femme, et ils formeront une seule chair.
೨೪ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
25 Et ils étaient les deux nus, l'homme et sa femme, et ils n'en avaient point de honte.
೨೫ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.