< Genèse 20 >
1 Et Abraham se transporta de là dans la région du Midi, et se fixa entre Kadès et Sur, et fit un séjour à Gérar.
೧ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.
2 Et Abraham disait de Sarah, sa femme: C'est ma sœur. Alors Abimélech, roi de Gérar, envoya enlever Sarah.
೨ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
3 Mais Dieu descendit vers Abimélech dans un songe de la nuit, et lui dit: Voici, tu vas mourir à cause de la femme que tu as enlevée et qui est mariée à un mari.
೩ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
4 Cependant Abimélech ne s'était point approché d'elle. Et il dit: Seigneur, veux-tu faire périr un peuple, même innocent?
೪ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?
5 Ne m'a-t-il pas dit: C'est ma sœur, et elle, elle-même a dit: Il est mon frère? C'est dans l'innocence de mon cœur et la pureté de mes mains que je l'ai fait.
೫ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.
6 Et Dieu lui dit en songe: Je sais aussi que tu l'as fait dans l'innocence de ton cœur, et aussi t'ai-je empoché de pécher contre moi; c'est pourquoi je n'ai pas permis que tu la touchasses.
೬ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
7 Maintenant donc rends la femme à son mari, car il est prophète et il intercédera pour toi, afin que tu vives; mais si tu ne la rends pas, sache que tu mourras, toi et tout ce qui t'appartient.
೭ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
8 Alors Abimélech se leva le matin, et manda tous ses serviteurs, et redit toutes ces choses à leurs oreilles, et ces hommes furent très effrayés.
೮ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.
9 Et Abimélech fit appeler a Abraham et lui dit: Qu'est-ce que tu nous as fait, et en quoi ai-je manqué à ton égard que tu aies attiré sur moi et sur mon royaume une si grande culpabilité? Tu t'es porté envers moi à des actions qu'on ne fait pas.
೯ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,
10 Et Abimélech dit à Abraham: Qu'avais-tu en vue pour en agir ainsi avec moi?
೧೦“ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು.
11 Et Abraham dit: C'est que je me disais: assurément il n'y a aucune crainte de Dieu dans ce lieu, et ils me tueront à cause de ma femme.
೧೧ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
12 Aussi bien elle est vraiment ma sœur, fille de mon père, seulement n'est-elle pas fille de ma mère, et elle est devenue ma femme.
೧೨ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.
13 Et lorsque Dieu me fit quitter, pour voyager, la maison de mon père, je lui dis: Fais-moi cette grâce: dans quelque lieu que nous allions, dis de moi: C'est mon frère.
೧೩ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.
14 Alors Abimélech prit des brebis et des bœufs et des serviteurs et des servantes, et en fit un don à Abraham et lui rendit Sarah, sa femme.
೧೪ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,
15 Et Abimélech dit: Tu as tout mon pays devant toi; établis-toi où il le plaira.
೧೫“ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.
16 Et à Sarah il dit: Voici, j'ai donné mille sicles d'argent à ton frère: eh bien! que ce soit une réparation auprès de tous tes entours, et auprès de tous le voilà justifiée.
೧೬ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.
17 Alors Abraham intercéda auprès de Dieu, et Dieu guérit Abimélech et sa femme et ses servantes, et elles purent enfanter.
೧೭ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
18 Car l'Éternel avait frappé de stérilité toutes les femmes de la maison d'Abimélech, à cause de Sarah, femme d'Abraham.
೧೮ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.