< Isaïe 49 >
1 Îles, écoutez-moi, et prêtez attention, peuples reculés! L'Éternel m'appela dès le sein maternel; j'étais encore dans les flancs de ma mère, qu'il nommait mon nom.
೧ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
2 Il donna à ma bouche le tranchant de l'épée, de l'ombre de sa main Il me couvrit, Il fit de moi un trait acéré, et Il me cacha dans son carquois.
೨ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
3 Et Il me dit: Tu es mon serviteur, Israël en qui je ferai éclater ma gloire.
೩ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.
4 Mais je dis: En vain j'ai travaillé, vainement et pour rien j'ai consumé mes forces; mais mon bon droit est par devers l'Éternel, et mon salaire par devers mon Dieu.
೪ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.
5 Or maintenant l'Éternel parle, lui qui me forma dès le sein maternel, pour être son serviteur, pour ramener à lui Jacob, et Israël qui n'est pas recueilli; et aux yeux de l'Éternel je suis honoré, et mon Dieu est ma force…
೫ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
6 Il dit: C'est trop peu que tu sois mon serviteur, pour relever les tribus de Jacob et ramener les restes conservés d'Israël; je t'établis lumière des nations, pour que tu portes mon salut jusqu'au bout de la terre.
೬ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
7 Ainsi parle l'Éternel, rédempteur d'Israël, son Saint, à celui que tous méprisent, qui inspire l'horreur au peuple, au serviteur des dominateurs: Des rois le verront et se lèveront, et des princes s'inclineront devant lui, pour l'amour de l'Éternel qui est fidèle, du Saint d'Israël qui t'a choisi.
೭ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”
8 Ainsi parle l'Éternel: Au temps de la grâce je t'exaucerai, et au jour du salut je te serai en aide: je te garderai et te ferai médiateur de l'alliance de mon peuple, pour relever le pays et répartir les héritages désolés,
೮ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.
9 pour dire aux prisonniers: « Sortez! » et à ceux qui sont dans les ténèbres: « Paraissez au jour! » Sur les chemins ils trouveront une pâture, et sur les coteaux nus leur pâturage.
೯ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
10 Ils ne seront point affamés, et point altérés; le hâle ni le soleil ne les accablera; car Celui qui a pitié d'eux les mène, et Il les conduit aux eaux jaillissantes.
೧೦ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.
11 Et je changerai tous mes monts en chaussées, et mes chemins seront élevés.
೧೧ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.
12 Voici, les uns arrivent des lointains pays, et voici, les autres du septentrion et de l'occident, et d'autres du pays de Sinim.
೧೨ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
13 Cieux, soyez dans l'allégresse! terre, réjouis-toi! et vous montagnes, éclatez en acclamations! car l'Éternel console son peuple et de ses malheureux Il prend pitié.
೧೩ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”
14 Sion dit: « L'Éternel m'abandonne et le Seigneur m'oublie. » –
೧೪ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು.
15 Une femme oublie-t-elle son nourrisson, perdant sa tendresse pour le fruit de ses entrailles? Quand elle pourrait l'oublier, moi je ne t'oublierai pas.
೧೫ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
16 Voici, je t'ai gravée sur mes mains; tes murs me sont toujours présents.
೧೬ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
17 Tes fils accourent, tes destructeurs et tes désolateurs s'enfuient.
೧೭ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುತ್ತಾರೆ.
18 Porte les yeux de toutes parts et regarde! tous ils s'assemblent et s'acheminent vers toi. Par ma vie, dit l'Éternel, oui, tu les porteras tous comme une parure, tu t'en ceindras comme une fiancée.
೧೮ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.
19 Quant à tes ruines et à ton sol désolé, et à ton pays ravagé, tu seras trop étroite pour tant d'habitants, et tes exterminateurs se sont éloignés.
೧೯ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.
20 Les fils dont tu fus privée, de ces mots frapperont encore tes oreilles: La place est pour moi trop étroite, serre-toi contre moi, pour que je puisse me loger.
೨೦ಸಂತಾನವನ್ನು ಕಳೆದುಕೊಂಡವಳಾದ ನಿನ್ನ ಮಕ್ಕಳು, ‘ಸ್ಥಳವು ನನಗೆ ಸಂಕೋಚ, ನಾನು ವಾಸಿಸುವುದಕ್ಕೆ ಸ್ಥಳವಾಗುವಂತೆ ಸರಿದುಕೋ’ ಎಂದು ಆಡಿಕೊಳ್ಳುವ ಮಾತು ಇನ್ನು ಮೇಲೆ ನಿನ್ನ ಕಿವಿಗೆ ಬೀಳುವುದು.
21 Et tu diras en ton cœur: Qui me les a engendrés? car j'étais sans enfants et stérile, chassée et répudiée! et ceux-ci, qui les a élevés? Voici, j'étais restée seule! ceux-ci, où étaient-ils? –
೨೧ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.
22 Ainsi parle le Seigneur, l'Éternel: Voici, je lèverai ma main en signe aux nations, et pour les peuples je dresserai mon étendard, afin qu'ils rapportent tes fils sur leurs bras, et que sur leurs épaules ils ramènent tes filles.
೨೨ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.
23 Et des rois seront tes nourriciers, et leurs princesses tes nourrices; la face contre terre ils tomberont devant toi, et baiseront la poussière de tes pieds, et tu reconnaîtras que je suis l'Éternel, qui ne confonds point ceux qui se confient en moi.
೨೩ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.
24 « Au puissant, arracherait-on une proie, et les captifs d'un juste échapperaient-ils? »
೨೪ಶೂರನಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯಾದವರನ್ನು ಬಿಡಿಸಬಹುದೋ?
25 Oui, dit l'Éternel, même les captifs du puissant seront arrachés, et la proie d'un furieux, échappera, et avec tes ennemis j'engagerai le combat, et je délivrerai tes fils.
೨೫ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.
26 Et je ferai à tes oppresseurs manger leur propre chair, et comme de vin ils s'enivreront de leur sang, et toute chair reconnaîtra que je suis l'Éternel, ton sauveur et ton rédempteur, le héros de Jacob.
೨೬ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.