< Luc 11 >

1 Et il advint, pendant qu'il était lui-même en prière en quelque endroit, que, lorsqu'il eut fini, l'un de ses disciples lui dit: « Seigneur, enseigne-nous à prier, comme Jean aussi l'a enseigné à ses disciples. »
ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.
2 Or il leur dit: « Quand vous priez, dites: « Père, que Ton nom soit sanctifié; que Ton royaume vienne;
ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.
3 donne-nous chaque jour le pain de notre subsistance,
ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.
4 et remets-nous nos péchés, car nous aussi nous remettons à tous ceux qui nous doivent; et ne nous expose pas à la tentation. »
ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.
5 Et il leur dit: « Lequel de vous, ayant un ami et s'étant rendu auprès de lui sur le minuit pour lui dire: « Ami, prête-moi trois pains,
ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.
6 parce qu'un mien ami venant de voyage est arrivé chez moi, et je n'ai rien à lui offrir;
ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,
7 et l'autre lui ayant répondu de l'intérieur: « Ne me dérange pas, ma porte est déjà fermée, et mes petits enfants sont au lit avec moi, je ne puis pas me lever pour t'en donner… »
ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
8 Je vous déclare que, quoiqu'il ne se lève pas pour lui en donner comme étant son ami, du moins à cause de son indiscrétion il se lèvera pour lui en donner autant qu'il en demande.
ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
9 Eh bien, moi je vous dis, demandez et on vous donnera; cherchez et vous trouverez; heurtez et on vous ouvrira;
ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
10 car quiconque demande reçoit, et qui cherche trouve, et à celui qui heurte, on ouvre.
೧೦ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
11 Quel est parmi vous le père auquel son fils demandera un poisson, et qui, à la place d'un poisson, lui donnera un serpent?
೧೧ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
12 Ou encore, qui, s'il lui demande un œuf, lui donnera un scorpion?
೧೨ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?
13 Si donc vous, tout méchants que vous êtes, savez donner de bons présents à vos enfants, à combien plus forte raison le Père céleste donnera-t-Il l'Esprit saint à ceux qui le Lui demandent? »
೧೩ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
14 Et il chassait un démon muet; or il advint, lorsque le démon fut sorti, que le muet parla; et la foule fut émerveillée.
೧೪ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
15 Mais quelques-uns d'entre eux dirent: « C'est grâce à Béézéboul, le chef des démons, qu'il chasse les démons. »
೧೫ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.
16 Mais d'autres, pour le mettre à l'épreuve, lui demandaient un signe qui vînt du ciel.
೧೬ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು.
17 Mais lui, connaissant leurs pensées, leur dit: « Tout royaume divisé contre lui-même est dévasté, et on y voit tomber maison sur maison;
೧೭ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.
18 or si Satan aussi s'est divisé contre lui-même, comment son royaume subsistera-t-il? Car vous dites que c'est grâce à Béézéboul que je chasse les démons;
೧೮ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
19 mais si moi c'est grâce à Béézéboul que je chasse les démons, vos fils, grâce à qui les chassent-ils? C'est pourquoi ce sont eux qui seront vos juges.
೧೯ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
20 Mais si c'est par le doigt de Dieu que moi je chasse les démons, le royaume de Dieu est donc parvenu jusqu'à vous.
೨೦ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.
21 Lorsque l'homme fort, bien armé, garde sa propre cour, ce qu'il possède est en sûreté;
೨೧“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;
22 mais s'il arrive qu'un plus fort que lui survienne et le vainque, il s'empare de toutes les armes auxquelles il se confiait, et il distribue ses dépouilles.
೨೨ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.
23 Celui qui n'est pas avec moi est contre moi, et celui qui ne rassemble pas avec moi disperse.
೨೩ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.
24 Quand l'esprit impur est sorti de l'homme, il parcourt les lieux arides, cherchant du repos, et n'en trouvant pas, il dit alors: « Je retournerai dans ma maison, d'où je suis sorti. »
೨೪“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,
25 Et y revenant, il la trouve en paix, balayée et ornée.
೨೫ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,
26 Alors il va et prend sept autres esprits plus méchants que lui-même, et après être entrés, ils y habitent; et la nouvelle condition de cet homme devient pire que la première. »
೨೬ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
27 Or il advint, pendant qu'il disait ces choses, qu'une femme, élevant sa voix du milieu de la foule, lui dit: « Heureux le sein qui t'a porté et les mamelles qui t'ont allaité! »
೨೭ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
28 Mais il dit: « Heureux bien plutôt ceux qui écoutent la parole de Dieu et qui l'observent! »
೨೮ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
29 Or comme la foule grossissait, il se mit à dire: « Cette génération est méchante; elle réclame un signe, et il ne lui sera donné d'autre signe que le signe de Jonas;
೨೯ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.
30 car, de même que Jonas fut un signe pour les Ninévites, de même le fils de l'homme en sera aussi un pour cette génération.
೩೦ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.
31 La reine du Midi ressuscitera lors du jugement avec les hommes de cette génération, et elle les condamnera; car elle vint des extrémités de la terre pour entendre la sagesse de Salomon, et voici, il y a ici plus que Salomon.
೩೧ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
32 Les hommes de Ninive ressusciteront lors du jugement avec cette génération, et ils la condamneront; car ils se sont repentis à la prédication de Jonas, et voici, il y a ici plus que Jonas,
೩೨ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
33 Personne, après avoir allumé une lampe, ne la place dans un souterrain, ni sous le boisseau, mais sur son support, afin que ceux qui entrent en voient la lumière.
೩೩“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
34 Ton œil est la lampe du corps; quand ton œil est sain, tout ton corps aussi est illuminé, mais quand il est malade, ton corps aussi est ténébreux.
೩೪ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.
35 Prends donc garde que la lumière qui est en toi ne soit ténèbres.
೩೫ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.
36 Si donc tout ton corps est illuminé, n'ayant rien de ténébreux, il sera entièrement illuminé, comme lorsque la lampe t'éclaire par son rayonnement. »
೩೬ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.
37 Or, pendant qu'il parlait, un pharisien le sollicite de faire collation chez lui; et y étant entré il se mit à table.
೩೭ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
38 Ce que le pharisien ayant vu, il fut étonné de ce qu'il ne s'était pas d'abord lavé avant la collation.
೩೮ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.
39 Mais le seigneur lui dit: « Maintenant vous autres pharisiens vous nettoyez le dehors de la coupe et du plat, mais votre dedans est rempli de rapine et de méchanceté.
೩೯ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
40 Insensés! Est-ce que Celui qui a fait le dehors n'a pas fait aussi le dedans?
೪೦ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.
41 Eh bien, donnez-en le contenu en aumônes, et voici, tout est net pour vous.
೪೧ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
42 Mais malheur à vous, pharisiens, car vous payez la dîme de la menthe, et de la rue, et de toutes les plantes potagères, et vous méprisez le jugement et l'amour de Dieu. Mais ce sont ces choses-ci qu'il fallait pratiquer, sans toutefois négliger celles-là.
೪೨“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
43 Malheur à vous, pharisiens, car vous aimez le premier siège dans les synagogues et les salutations dans les places publiques.
೪೩“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.
44 Malheur à vous, car vous êtes comme les sépulcres masqués, et les hommes en marchant dessus ne s'en doutent pas. »
೪೪ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು.
45 Or un des légistes prenant la parole, lui dit: « Maître, en parlant de la sorte tu nous insultes aussi. »
೪೫ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
46 Mais il dit: « Malheur aussi à vous autres légistes, car vous chargez les hommes de fardeaux intolérables, et vous-mêmes vous ne touchez pas ces fardeaux d'un seul de vos doigts.
೪೬ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
47 Malheur à vous, car vous bâtissez les tombeaux des prophètes, et ce sont vos pères qui les ont fait mourir!
೪೭ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.
48 Vous donnez donc votre témoignage et votre approbation aux œuvres de vos pères, car, tandis que de leur côté ils les ont fait mourir, du vôtre vous bâtissez!
೪೮ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
49 C'est pourquoi aussi la sagesse de Dieu a dit: Je leur enverrai des prophètes et des apôtres, dont ils tueront les uns et poursuivront les autres,
೪೯ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
50 afin qu'on redemande compte à cette génération du sang de tous les prophètes, versé dès la fondation du monde,
೫೦ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
51 depuis le sang d'Abel jusques au sang de Zacharie qui fut mis à mort entre l'autel et la maison. Oui, je vous le déclare, on en demandera compte à cette génération.
೫೧
52 Malheur à vous légistes, car vous avez enlevé la clef de la connaissance; vous-mêmes n'êtes pas entrés et vous avez empêché ceux qui voulaient entrer. »
೫೨ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.
53 Et après qu'il fut sorti de là, les scribes et les pharisiens se mirent à l'obséder d'une manière terrible, et à le presser de questions,
೫೩ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
54 en lui dressant des pièges, pour attraper quelque parole sortie de sa bouche.
೫೪ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

< Luc 11 >