< Matthieu 12 >
1 En ce temps-là Jésus fit route le jour du sabbat à travers les champs de blé. Or ses disciples eurent faim, et ils se mirent à arracher des épis et à manger.
೧ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
2 Mais les pharisiens l'ayant vu lui dirent: « Voici, tes disciples font ce qu'il n'est pas permis de faire un jour de sabbat. »
೨ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
3 Mais il leur dit: « N'avez-vous pas lu ce que fit David, quand il eut faim, ainsi que ceux qui étaient avec lui?
೩ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?
4 Comment il entra dans la maison de Dieu, et comment ils mangèrent les pains de proposition qu'il ne lui était pas permis de manger, non plus qu'à ceux qui étaient avec lui, mais aux prêtres seuls?
೪ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.
5 Ou bien n'avez-vous pas lu dans la loi que, le jour du sabbat, les prêtres dans le temple profanent le sabbat sans se rendre coupables?
೫ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?
6 Or je vous déclare qu'il y a ici quelque chose de plus grand que le temple.
೬ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.
7 Mais si vous saviez ce que signifie: Je veux la miséricorde et non le sacrifice, vous n'auriez pas condamné ceux qui ne sont pas coupables;
೭‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.
8 car le fils de l'homme est maître du sabbat. »
೮ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.
9 Et, s'étant éloigné de là, il vint dans leur synagogue.
೯ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
10 Et voici, il s'y trouvait un homme qui avait une main sèche. Et ils lui demandèrent: « Est-il permis d'opérer une guérison le jour du sabbat? » C'était afin de pouvoir l'accuser.
೧೦ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.
11 Mais il leur dit: « Quel sera l'homme d'entre vous qui possédera une seule brebis, et si celle-ci vient à tomber le jour du sabbat dans un fossé, est-ce qu'il ne la saisira pas et ne l'en retirera pas?
೧೧ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?
12 Combien donc un homme ne vaut-il pas plus qu'une brebis! En sorte qu'il est permis de bien faire le jour du sabbat. »
೧೨ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.
13 Alors il dit à cet homme: « Étends ta main; » et il l'étendit, et elle redevint saine comme l'autre.
೧೩ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.
14 Or les pharisiens étant sortis tinrent conseil contre lui afin de le faire périr.
೧೪ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.
15 Mais Jésus l'ayant su s'éloigna de là, et beaucoup de gens le suivirent, et ils les guérit tous,
೧೫ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.
16 et il leur adressa des remontrances pour qu'ils ne le fissent pas connaître; —
೧೬ಅನೇಕರು ಆತನ ಹಿಂದೆ ಹೋದರು. ಆತನು ಅವರೆಲ್ಲರನ್ನು ಸ್ವಸ್ಥಮಾಡಿ ತನ್ನ ಬಗ್ಗೆ ಯಾರಿಗೂ ತಿಳಿಸಬಾರದೆಂದು ಅವರಿಗೆ ಖಂಡಿತವಾಗಿ ಹೇಳಿದನು.
17 afin que fût accompli ce dont il a été parlé par l'entremise d'Ésaïe le prophète lorsqu'il dit:
೧೭ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,
18 « Voici Mon serviteur que J'ai choisi, Mon bien-aimé en qui Mon âme a pris plaisir. Je mettrai Mon esprit sur lui, et il dénoncera le jugement aux nations.
೧೮“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.
19 Il ne contestera ni ne criera point, et personne n'entendra sa voix dans les rues.
೧೯ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.
20 Il ne brisera point le roseau froissé, et il n'éteindra point le lumignon fumant, jusques à ce qu'il ait fait triompher le jugement,
೨೦ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.
21 et les nations espéreront en son nom. »
೨೧ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”
22 Alors on lui amena un démoniaque aveugle et muet, et il le guérit, en sorte que ce muet parlait et voyait,
೨೨ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.
23 et toute la foule fut stupéfaite, et elle disait: « Cet homme n'est-il point le fils de David? »
೨೩ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.
24 Mais les pharisiens l'ayant entendu dirent: « Cet homme ne chasse les démons que grâce à Béézéboul, chef des démons. » Mais connaissant leurs pensées, il leur dit:
೨೪ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
25 « Tout royaume divisé contre lui-même est dévasté, et toute ville ou toute famille divisée contre elle-même ne subsistera pas.
೨೫ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.
26 Et si Satan chasse Satan, il a été divisé contre lui-même; comment donc son royaume subsistera-t-il?
೨೬ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?
27 Et si, moi, c'est grâce à Béézéboul que je chasse les démons, vos fils, grâce à qui les chassent ils? C'est pourquoi ce sont eux qui seront vos juges.
೨೭ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
28 Mais, si c'est grâce à l'esprit de Dieu que moi je chasse les démons, le royaume de Dieu est donc parvenu jusques à vous.
೨೮ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?
29 Ou bien, comment quelqu'un peut-il entrer dans la maison de l'homme fort et piller ses biens, s'il n'a pas premièrement garrotté l'homme fort, et alors il pillera sa maison?
೨೯ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.
30 Celui qui n'est pas avec moi est contre moi, et celui qui ne rassemble pas avec moi disperse.
೩೦ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.
31 C'est pourquoi je vous le déclare: tout péché et tout blasphème vous sera pardonné à vous autres hommes, mais le blasphème contre l'esprit ne sera point pardonné.
೩೧ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
32 Et celui qui aura parlé contre le fils de l'homme, il lui sera pardonné, mais celui qui aura parlé contre l'esprit saint, il ne lui sera certainement pas pardonné, ni dans ce temps-ci, ni dans le temps à venir. (aiōn )
೩೨ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ. (aiōn )
33 Ou bien admettez que l'arbre est bon et que son fruit est bon, ou bien admettez que l'arbre est pourri et que son fruit est pourri; car c'est au fruit que se connaît l'arbre.
೩೩“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
34 Engeance de vipères, comment pouvez-vous, méchants comme vous êtes, dire de bonnes choses? Car c'est par ce qui déborde du cœur, que la bouche parle.
೩೪ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
35 L'homme bon tire de son bon trésor de bonnes choses, et l'homme mauvais tire de son mauvais trésor de mauvaises choses.
೩೫ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
36 Mais je vous déclare que toute parole oiseuse que diront les hommes, ils en rendront compte au jour du jugement;
೩೬ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
37 car par tes paroles tu seras justifié, et par tes paroles tu seras condamné. »
೩೭ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
38 Alors quelques-uns des scribes s'adressèrent à lui, en disant: « Maître, nous voulons voir un signe dont tu sois l'auteur. »
೩೮ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,
39 Mais il leur répliqua: « Une génération méchante et adultère réclame un signe, et il ne lui sera donné d'autre signe que le signe de Jonas le prophète.
೩೯“ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.
40 Car de même que Jonas fut dans le ventre de la baleine trois jours et trois nuits, de même le fils de l'homme sera dans le cœur de la terre trois jours et trois nuits.
೪೦ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
41 Les hommes de Ninive ressusciteront lors du jugement avec cette génération, et ils la condamneront, car ils se repentirent à la prédication de Jonas; et voici, il y a ici plus que Jonas.
೪೧ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.
42 La reine du Midi ressuscitera lors du jugement avec cette génération, et elle la condamnera, car elle vint des extrémités de la terre pour entendre la sagesse de Salomon; et voici, il y a ici plus que Salomon.
೪೨ದಕ್ಷಿಣ ದೇಶದ ರಾಣಿಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತ ಹೆಚ್ಚಿನವನಿದ್ದಾನೆ. ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವಳು.
43 Mais, quand l'esprit impur est sorti de l'homme, il parcourt les lieux arides, cherchant du repos, et il n'en trouve point.
೪೩“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.
44 Alors il dit: « Je retournerai dans ma maison d'où je suis sorti. » Et y revenant, il la trouve en paix, balayée et ornée.
೪೪ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು ಆ ಮನೆ ಒಕ್ಕಲಿಲ್ಲದ್ದೂ, ಗುಡಿಸಿ, ಅಲಂಕರಿಸಿರುವುದನ್ನು ಕಂಡು,
45 Alors il va et prend avec lui sept autres esprits plus méchants que lui-même, et, après être entrés, ils y habitent; et la nouvelle condition de cet homme devient pire que la première. Il en sera aussi de même pour cette méchante génération. »
೪೫ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.
46 Pendant qu'il parlait encore à la foule, voici, sa mère et ses frères se tenaient dehors, cherchant à lui parler.
೪೬ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.
47 [Or, quelqu'un lui dit: voici, ta mère et tes frères sont là dehors qui cherchent à te parler.]
೪೭ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು.
48 Mais Jésus répliqua à celui qui le lui disait: « Qui est ma mère, et qui sont mes frères? »
೪೮ಅದಕ್ಕಾತನು ಆ ಮಾತು ಹೇಳಿದವನಿಗೆ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ
49 Et ayant étendu la main vers ses disciples, il dit: « Voilà ma mère et mes frères!
೪೯ಶಿಷ್ಯರ ಕಡೆಗೆ ಕೈ ಚಾಚಿ, “ಇಗೋ ನನ್ನ ತಾಯಿ, ನನ್ನ ಸಹೋದರರು.
50 Car quiconque aura fait la volonté de mon Père qui est dans les cieux, c'est lui qui est mon frère, et ma sœur, et ma mère. »
೫೦ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.