< Matthieu 14 >

1 En ce temps-là Hérode le tétrarque ouït parler de la renommée de Jésus,
ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
2 et il dit à ses serviteurs: « Cet homme est Jean le baptiste; il est ressuscité des morts, et c'est pourquoi les miracles s'opèrent par lui. »
ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
3 Hérode, en effet, après avoir fait dans le temps arrêter Jean, l'avait fait enchaîner et mettre en prison, à cause d'Hérodias, femme de Philippe son frère;
ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
4 car Jean lui disait: « Il ne t'est pas permis de la posséder. »
ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
5 Et quoiqu'il eût désiré le faire mourir, il avait craint la foule, car on le regardait comme un prophète.
ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
6 Mais lors de la fête anniversaire de la naissance d'Hérode, la fille d'Hérodias dansa devant tout le monde, et elle plut à Hérode,
ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
7 en sorte qu'il s'engagea par serment à lui donner quoi que ce fût qu'elle demanderait.
ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
8 Or, ayant été endoctrinée par sa mère: « Donne-moi, » dit-elle, « ici, sur un plat, la tête de Jean le baptiste. »
ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
9 Et le roi attristé ordonna, à cause de son serment et des convives, qu'on la donnât,
ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
10 et il envoya décapiter Jean dans la prison.
೧೦ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
11 Et sa tête fut apportée sur un plat, et donnée à la jeune fille, et elle la porta à sa mère.
೧೧ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
12 Et ses disciples vinrent enlever le cadavre, et ils l'enterrèrent, et ils allèrent en informer Jésus.
೧೨ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
13 Or, Jésus l'ayant appris, partit de là sur une barque, pour se retirer à l'écart dans un lieu désert, et la foule l'ayant su le suivit à pied des différentes villes.
೧೩ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
14 Et étant sorti, il vit une foule nombreuse, et il fut ému de compassion envers elle, et il guérit leurs malades.
೧೪ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
15 Mais, le soir étant venu, les disciples s'approchèrent de lui en disant: « Ce lieu est désert, et l'heure est déjà avancée, renvoie la foule, afin qu'elle se rende dans les villages pour s'y acheter des vivres, »
೧೫ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
16 Or Jésus leur dit: « Ils n'ont pas besoin de s'en aller, donnez-leur vous-mêmes à manger. »
೧೬ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
17 Mais ils lui disent: « Nous n'avons ici que cinq pains et deux poissons. »
೧೭ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,
18 Et il dit: « Apportez-les-moi ici,
೧೮ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.
19 et ordonnez à la foule de s'asseoir sur l'herbe. » Après avoir pris les cinq pains et les deux poissons, il prononça, en levant les yeux vers le ciel, une bénédiction; et après les avoir rompus, il donna les pains à ses disciples et les disciples à la foule.
೧೯ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
20 Et tous mangèrent et furent rassasiés; et on emporta le surplus des morceaux dans douze corbeilles pleines.
೨೦ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
21 Or, ceux qui mangèrent étaient environ cinq mille hommes, sans compter les femmes et les petits enfants.
೨೧ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
22 Et aussitôt il contraignit ses disciples à monter dans une barque et à passer avant lui sur l'autre rive, jusques à ce qu'il eût renvoyé la foule.
೨೨ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
23 Et, après avoir renvoyé la foule, il monta sur la montagne pour prier à l'écart. Mais, le soir étant venu, il se trouva seul en cet endroit.
೨೩ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
24 Or, la barque était déjà éloignée de plusieurs stades de la terre, et elle était battue par les flots, car le vent était contraire.
೨೪ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
25 Mais à la quatrième veille de la nuit, il vint vers eux en marchant sur la mer.
೨೫ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
26 Or les disciples, en le voyant marcher sur la mer, furent tout troublés, et ils se disaient: « C'est un fantôme, » et dans leur peur ils se mirent à crier.
೨೬ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
27 Mais Jésus leur parla aussitôt, en disant: « Courage, c'est moi; n'ayez pas peur. »
೨೭ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
28 Et Pierre lui répliqua: « Seigneur, si c'est toi, ordonne-moi de venir vers toi sur les eaux. »
೨೮ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
29 Et il lui dit: « Viens. » Et Pierre, étant descendu de la barque, marcha sur les eaux et vint vers Jésus;
೨೯ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
30 mais en voyant la violence du vent, il eut peur, et ayant commencé à s'enfoncer, il s'écria: « Seigneur, sauve-moi. »
೩೦ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
31 Et aussitôt Jésus ayant étendu la main le saisit et lui dit: « Homme de peu de foi, pourquoi as-tu douté? »
೩೧ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
32 Et lorsqu'ils furent montés dans la barque, le vent tomba.
೩೨ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
33 Mais ceux qui étaient dans la barque l'adorèrent, en disant: « Tu es vraiment le fils de Dieu. »
೩೩ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
34 Et ayant achevé leur traversée, ils touchèrent terre à Gennèsaret,
೩೪ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
35 et les gens de ce lieu-là l'ayant reconnu envoyèrent dans tout le pays circonvoisin, et on lui amena tous les malades,
೩೫ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
36 et ils le suppliaient de les laisser toucher seulement la frange de son manteau, et tous ceux qui la touchèrent furent guéris.
೩೬ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

< Matthieu 14 >