< Matthieu 16 >
1 Et les pharisiens et les sadducéens étant survenus, lui demandèrent, pour le mettre à l'épreuve, de leur montrer un signe qui vînt du ciel.
೧ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
2 Mais il leur répliqua: [« Quand le soir est venu, vous dites: Beau temps, car le ciel est rouge.
೨ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
3 Et, le lendemain: Aujourd'hui, de l'orage, car le ciel est d'un rouge sombre. Vous savez bien discerner l'aspect du ciel, mais vous ne pouvez pas discerner les signes des temps.]
೩ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
4 Une génération méchante et adultère demande un signe; et il ne lui sera point donné d'autre signe que le signe de Jonas. » Et les ayant quittés, il s'en alla.
೪ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
5 Et en passant sur l'autre rive les disciples oublièrent de prendre des pains.
೫ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
6 Or, Jésus leur dit: « Ayez soin de vous tenir en garde contre le levain des pharisiens et des sadducéens. »
೬ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
7 Mais ils réfléchissaient en eux-mêmes et se disaient: « C'est parce que nous n'avons pas pris de pains. »
೭ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
8 Mais Jésus s'en étant aperçu dit: « Pourquoi réfléchissez-vous en vous-mêmes, gens de peu de foi, sur ce que vous n'avez pas des pains?
೮ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
9 Ne comprenez-vous pas encore, et ne vous rappelez-vous plus les cinq pains des cinq mille, et combien de corbeilles vous emportâtes,
೯ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
10 ni les sept pains des quatre mille, et combien de paniers vous emportâtes?
೧೦ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
11 Comment ne comprenez-vous pas que ce n'est pas à propos de pains que je vous ai parlé? Mais tenez-vous en garde contre le levain des pharisiens et des sadducéens. »
೧೧ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
12 Alors ils comprirent qu'il ne leur avait pas dit de se tenir en garde contre le levain des pains, mais contre l'enseignement des sadducéens et des pharisiens.
೧೨ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
13 Or, lorsque Jésus fut arrivé sur le territoire de Césarée de Philippe, il interrogeait ses disciples, en disant: « Qui disent les gens qu'est le fils de l'homme? »
೧೩ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
14 Et ils lui dirent: « Ceux-ci, Jean le baptiste; ceux-là, Élie; et d'autres, Jérémie ou l'un des prophètes. »
೧೪ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
15 Il leur dit: « Mais vous, qui dites-vous que je suis? »
೧೫ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
16 Or Simon Pierre répliqua: « Tu es le Christ, le fils du Dieu vivant. »
೧೬ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
17 Et Jésus lui répliqua: «Heureux es-tu, Simon Barjona, car ce n'est pas la chair ni le sang qui te l'ont révélé, mais mon Père qui est dans les cieux.
೧೭ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
18 Pour moi, je te déclare de mon côté que tu es Pierre, et que sur ce roc-là je bâtirai mon église, et que les portes de l'enfer ne prévaudront point contre elle; (Hadēs )
೧೮ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs )
19 je te donnerai les clefs du royaume des cieux, et tout ce que tu auras lié sur la terre sera lié dans les cieux, et tout ce que tu auras délié sur la terre sera délié dans les cieux. »
೧೯ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
20 Alors il fit des remontrances aux disciples, afin qu'ils ne dissent à personne: « C'est lui qui est le Christ. »
೨೦ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
21 Dès lors Jésus-Christ commença à montrer à ses disciples qu'il lui fallait se rendre à Jérusalem, et beaucoup souffrir du fait des anciens et des grands prêtres et des scribes, et être mis à mort, et ressusciter le troisième jour.
೨೧ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
22 Et Pierre, l'ayant pris à part, lui dit en lui faisant des remontrances: « Miséricorde te soit faite, Seigneur, certainement cela ne t'arrivera point! »
೨೨ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
23 Mais lui s'étant retourné dit à Pierre: « Va-t-en arrière de moi, Satan, tu m'es une pierre d'achoppement, car tu ne penses pas aux choses de Dieu, mais à celles des hommes. »
೨೩ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
24 Alors Jésus dit à ses disciples: « Si quelqu'un veut venir après moi, qu'il renonce à lui-même et qu'il prenne sa croix, et qu'il me suive;
೨೪ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
25 car celui qui voudra sauver sa vie la perdra, mais celui qui aura perdu sa vie à cause de moi, la trouvera;
೨೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
26 en effet, que servira-t-il à un homme d'avoir gagné le monde entier, mais perdu sa vie?
೨೬ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
27 Ou bien que donnera un homme pour racheter sa vie? Car le fils de l'homme doit venir entouré de la gloire de son Père, avec ses anges, et c'est alors qu'il rendra à chacun selon sa conduite.
೨೭ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
28 En vérité je vous déclare qu'il y a quelques-uns de ceux qui sont ici présents qui ne goûteront certainement point la mort jusques à ce qu'ils aient vu le fils de l'homme venir avec son royaume. »
೨೮“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.