< Jean 10 >
1 «En vérité, en vérité, je vous le dis, celui qui n'entre pas par la porte dans le bercail des brebis, mais y monte de quelque autre côté, est un voleur et un brigand.
೧“ನಿಮಗೆನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.
2 Celui qui entre par la porte est berger des brebis.
೨ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.
3 A celui-ci le portier ouvre, et les brebis entendent sa voix. Il appelle par leur nom les brebis qui lui appartiennent et les fait sortir.
೩ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.
4 Quand il a fait sortir toutes les siennes, il marche devant elles et ses brebis le suivent parce qu'elles connaissent sa voix.
೪ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
5 Elles ne suivront point un étranger; au contraire, elles fuiront loin de lui, car elles ne connaissent point la voix des étrangers.»
೫ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.
6 Telle est la parabole que leur dit Jésus; mais eux, ils ne comprirent pas de quoi il leur parlait.
೬ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ.
7 Jésus reprit donc: «En vérité, en vérité, je vous le dis, je suis la porte des brebis.
೭ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,
8 Tous ceux qui sont venus avant moi sont des voleurs et des brigands, mais les brebis ne les ont pas écoutés.
೮ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9 C'est moi qui suis la porte; si quelqu'un entre par moi, il sera sauvé. Il entrera, il sortira, il trouvera sa pâture.
೯ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
10 Le voleur ne vient que pour dérober, égorger et détruire. Moi, je suis venu afin que les brebis aient la vis et qu'elles aient l'abondance.»
೧೦ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
11 «Je suis le bon berger. Le bon berger donne sa vie pour les brebis.
೧೧“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
12 Quant au mercenaire, quant à celui qui n'est pas berger, à qui les brebis n'appartiennent pas, s'il voit venir le loup, il abandonne les brebis et prend la fuite; alors le loup les ravit et les disperse.
೧೨ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.
13 Il agit ainsi parce qu'il est mercenaire et qu'il n'a nul soin des brebis.
೧೩ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.
14 C'est moi qui suis le bon berger. Je connais mes brebis et mes brebis me connaissent,
೧೪ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.
15 de la même façon que le Père me connaît et que, moi, je connais le Père; et je donne ma vie pour les brebis.»
೧೫ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
16 «J'ai d'autres brebis, qui ne sont pas de ce bercail. Celles-là aussi il faut que je les amène. Elles entendront ma voix, et il y aura un seul troupeau, un seul berger.
೧೬ಇದಲ್ಲದೆಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.
17 Voici pourquoi le Père m'aime: il m'aime parce que je donne ma vie pour la reprendre de nouveau.
೧೭ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.
18 Personne ne me l'ôte, mais c'est moi qui la donne de moi-même; j'ai le pouvoir de la donner; j'ai le pouvoir de la reprendre; tel est l'ordre que j'ai reçu de mon Père.»
೧೮ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.
19 Ces paroles furent l'occasion de nouvelles divisions entre les Juifs.
೧೯ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.
20 «C'est un possédé, disaient-ils pour la plupart, c'est un fou; pourquoi l'écoutez-vous?»
೨೦ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.
21 D'autres disaient: «Ce ne sont pas les paroles d'un possédé; est-ce qu'un démon peut rendre ta vue aux aveugles?».
೨೧ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.
22 C'était l'hiver et l'on célébrait à Jérusalem la fête de la Dédicace!
೨೨ಆನಂತರ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವು ನಡೆಯಿತು. ಅದು ಚಳಿಗಾಲವಾಗಿತ್ತು.
23 Dans le Temple, sous le portique de Salomon, Jésus se promenait!
೨೩ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,
24 Les Juifs firent cercle autour de lui et lui dirent: «Jusqu'à quand nous tiendras-tu l'esprit en suspens? Si tu es le Christ, dis-le-nous franchement.»
೨೪ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
25 «Je vous l'ai dit, et vous ne croyez pas, répondit Jésus. Les oeuvres que je fais au nom de mon Père, rendent témoignage de moi,
೨೫ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.
26 mais vous ne croyez pas parce que vous n'êtes pas de mes brebis.
೨೬ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.
27 Mes brebis à moi entendent ma voix; je les connais, et elles me suivent.
೨೭ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
28 Je leur donne la vie éternelle; elles ne périront jamais, et nul ne les ravira de nia main. (aiōn , aiōnios )
೨೮ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. (aiōn , aiōnios )
29 Mon Père qui me les a données est plus grand que tous les hommes, et nul ne peut ravir ce qui est dans la main du Père.
೨೯ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.
30 Moi et le Père nous sommes uns.»
೩೦ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.
31 De nouveau les Juifs apportèrent des pierres pour le lapider.
೩೧ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,
32 Jésus leur dit: «J'ai fait devant vous, de par le Père, beaucoup d'oeuvres excellentes; pour laquelle de ces oeuvres me lapidez vous?» —
೩೨ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,
33 «Ce n'est pour aucune oeuvre excellente que nous te lapidons, répliquèrent les Juifs, mais parce que tu blasphèmes, et que, toi qui n'es qu'un homme, tu te fais Dieu.»
೩೩ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.
34 Jésus leur répondit: «N'est-il pas écrit dans votre Loi: «Moi, j'ai dit: vous êtes dieux.»
೩೪ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?
35 «Eh bien, votre Loi a appelé «dieux» ceux auxquels s'adressait la parole de Dieu (et l'Écriture est indiscutable),
೩೫ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ
36 et moi que le Père a consacré et a envoyé dans le monde, vous m'accusez de blasphème, parce que j'ai dit: je suis Fils de Dieu!»
೩೬ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’
37 «Si je ne fais pas les oeuvres de mon Père, ne me croyez point.
೩೭ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ
38 Mais si je les fais (quand même vous n'auriez aucune foi en mes paroles), croyez du moins à mes oeuvres; qu'elles vous fassent savoir, qu'elles vous fassent reconnaître que le Père est en moi, et que moi je suis dans le Père.»
೩೮ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.
39 (Encore une fois ils s'efforcèrent de mettre la main sur lui, mais il leur échappa
೩೯ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.
40 et retourna sur l'autre rive du Jourdain, à l'endroit où Jean avait baptisé tout d'abord, et il y séjourna.
೪೦ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.
41 Des multitudes vinrent à lui et l'on disait: «Jean, il est vrai, n'a fait aucun miracle; mais tout ce qu'il a dit de celui-ci était vrai.»
೪೧ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.
42 Là, un grand nombre eurent foi en lui.
೪೨ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.