< Luc 1 >
1 Cher Théophile, puisque plusieurs autres ont essayé de rédiger un récit des faits accomplis parmi nous,
೧ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.
2 tels que nous les ont transmis ceux qui en ont été, dès l’origine, témoins oculaires et qui sont devenus ministres de la Parole,
೨ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,
3 j’ai cru devoir, moi aussi, après m’être soigneusement informé de tout, depuis le commencement, t’en écrire une narration suivie,
೩ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.
4 pour que tu reconnaisses la solidité des enseignements que tu as reçus.
೪ನಿನಗೆ ಉಪದೇಶಿಸಿರುವ ವಿಷಯಗಳು ಸತ್ಯವಾದವುಗಳೆಂದು ಇದರಿಂದ ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬಹುದು.
5 Aux jours d'Hérode, roi de Judée, vivait un prêtre nommé Zaccharie. Il était de la classe d'Abia et sa femme était d'entre les filles d'Aaron. Son nom était Élisabeth.
೫ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.
6 Tous deux étaient justes devant Dieu, marchant irréprochables dans tous les commandements et toutes les ordonnances du Seigneur.
೬ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
7 Ils n'avaient point d'enfants; parce qu'Élisabeth était stérile; et tous deux étaient avancés en âge.
೭ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.
8 Or, le tour de sa classe étant venu de remplir devant Dieu les fonctions sacerdotales,
೮ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.
9 il lui échut par le sort (qui était le mode usité entre les prêtres) d'entrer dans le sanctuaire du Seigneur pour y offrir l'encens.
೯ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
10 Pendant cette heure de l'encens, la foule du peuple restait au dehors et priait.
೧೦ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,
11 Or, à la droite de l'autel de l'encens, apparut à Zaccharie un ange du Seigneur, debout devant lui.
೧೧ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.
12 A sa vue Zaccharie fut troublé, et la crainte le saisit.
೧೨ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು.
13 «Ne crains point, Zaccharie, lui dit l'ange; car ta prière a été exaucée et ta femme Élisabeth t'enfantera un fils; tu lui donneras le nom de Jean.
೧೩ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.
14 Il sera ta joie et ton allégresse, et beaucoup se réjouiront de sa naissance. Devant le Seigneur,
೧೪ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.
15 en effet, il sera grand; il ne devra jamais boire ni vin, ni cervoise; et, tout rempli de l'Esprit saint dès les entrailles de sa mère,
೧೫ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
16 il ramènera au Seigneur leur Dieu, de nombreux enfants d'Israël.
೧೬ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.
17 Lui-même, dans l'esprit et la vertu d'Élie, se mettra en marche devant le Seigneur, afin de faire revivre dans les enfants le coeur même des aïeux, de ramener les rebelles à la sagesse des justes, et de préparer au Seigneur un peuple bien disposé.» —
೧೭ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.
18 «A quoi reconnaîtrai-je cela, dit à l'ange Zaccharie, car je suis moi-même un vieillard, et ma femme est avancée en âge.»
೧೮ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.
19 L'ange lui répondit par ces paroles: «Je suis, Gabriel qui me tiens devant Dieu. Et j'ai été envoyé pour te parler et t'annoncer cette Bonne Nouvelle.
೧೯ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
20 Et à cause de ton manque de foi en mes paroles, qui s'accompliront en leur temps, voilà que tu seras muet et ne pourras parler jusqu'au jour où ces choses arriveront.»
೨೦ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.
21 Le peuple cependant attendait Zaccharie, et s'étonnait de le voir s'attarder dans le sanctuaire.
೨೧ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
22 Lorsqu'il sortit, il lui fut impossible de leur parler; on comprit qu'il avait eu une vision dans le sanctuaire. Lui-même le leur faisait entendre par signes. Zaccharie resta sourd-muet.
೨೨ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
23 Quand la période de ses fonctions fut terminée, il retourna en sa maison;
೨೩ಆತನ ಯಾಜಕವರ್ಗದ ಸೇವೆಯ ದಿನಗಳು ಮುಗಿದ ನಂತರ ಜಕರೀಯನು ತನ್ನ ಮನೆಗೆ ಹೋದನು.
24 ce fut alors que sa femme Élisabeth devint enceinte. Pendant cinq mois elle vécut dans le secret de sa demeure.
೨೪ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.
25 «Voilà, disait-elle, ce qu'a fait pour moi le Seigneur en ces jours où il m'a regardée pour mettre fin à mon opprobre parmi les hommes.»
೨೫“ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.
26 Le sixième mois, Dieu envoya l'ange Gabriel dans une ville de Galilée, appelée Nazareth,
೨೬ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;
27 vers une vierge, fiancée à un homme de la famille de David, nommé Joseph. Le nom de la vierge était Marie.
೨೭ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.
28 L'ange, étant entré où elle était, lui dit: «Salut! une grâce, t'a été faite; le Seigneur est avec toi!»
೨೮ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.
29 A ces paroles, Marie fut toute troublée; et elle se demandait ce que pouvait être une semblable salutation.
೨೯ಆಕೆಯು ಆ ಮಾತಿಗೆ ತಬ್ಬಿಬ್ಬಾಗಿ, ಇದೆಂಥ ಆಶೀರ್ವಾದ ಎಂದು ಯೋಚನೆಮಾಡುತ್ತಿದ್ದಳು.
30 «Ne crains point, Marie, reprit l'ange, car tu as trouvé grâce près de Dieu.
೩೦ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.
31 Sache que tu vas concevoir en ton sein et enfanter un fils auquel tu donneras le nom de Jésus.
೩೧ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
32 Il sera grand; on l'appellera: Fils du Très-Haut; à lui le Seigneur Dieu donnera le trône de David son père;
೩೨ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
33 il régnera à jamais sur la maison de Jacob et son règne n'aura point de fin.» (aiōn )
೩೩ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇರದು” ಎಂದು ಹೇಳಿದನು. (aiōn )
34 Alors Marie dit à l'ange: «Comment cela se fera-t-il, puisque je ne connais point, d’homme?»
೩೪ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.
35 Et l'ange lui répondit par ces paroles: «L'Esprit saint viendra sur toi, et une puissance du Très-Haut t'enveloppera de son ombre. C'est pourquoi l'Être saint qui doit naître sera appelé Fils de Dieu!
೩೫ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
36 Sache également qu'en sa vieillesse, ta parente Élisabeth, elle aussi, a conçu un fils, et que celle que l'on appelait stérile en est déjà à son sixième mois.
೩೬ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.
37 Rien n'est impossible à Dieu.»
೩೭ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.
38 Alors Marie dit: «Voici la servante du Seigneur. Qu'il me soit fait suivant ta parole.» Et l'ange la quitta.
೩೮ಆಗ ಮರಿಯಳು “ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ” ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
39 En ces jours-là, Marie se hâta de partir, se dirigeant vers le pays des montagnes. Elle alla dans une ville de Juda.
೩೯ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.
40 En entrant dans la maison de Zaccharie elle salua Élisabeth.
೪೦ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು.
41 Et dès qu'Élisabeth eut entendu la salutation de Marie, l'enfant qu'elle portait tressaillit, et elle-même fut remplie d'Esprit saint.
೪೧ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.
42 «Tu es bénie entre les femmes, s'écria-t-elle en élevant la voix, et le fruit de tes entrailles est béni!
೪೨ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.
43 D'où me vient que la mère de mon Seigneur vienne me visiter?
೪೩ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?
44 Aussitôt que ta voix, quand tu m'as saluée, a frappé mon oreille, l'enfant a tressailli de joie dans mon sein.
೪೪ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು.
45 Bienheureuse celle qui a cru à l'accomplissement de ce qui lui a été dit de la part du Seigneur!»
೪೫ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”
46 Et Marie dit: «Mon âme magnifie le Seigneur,
೪೬ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,
47 Et mon esprit est transporté de joie en Dieu mon Sauveur,
೪೭ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ.
48 Parce qu'il a abaissé son regard sur l'humilité de sa servante. Voilà que désormais toutes les générations m'appelleront la bienheureuse,
೪೮ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,
49 Parce que le Tout-Puissant m'a fait de grandes choses! Son nom est saint,
೪೯ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.
50 Sa miséricorde se répand de génération en génération Sur ceux qui le craignent.
೫೦ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.
51 Il a déployé la force de son bras, Il a dissipé les pensées des coeurs des superbes,
೫೧ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.
52 Il a jeté bas de leurs trônes les puissants, Et il a exalté les humbles;
೫೨ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.
53 Il a comblé de biens les affamés, Et il a renvoyé les riches à vide;
೫೩ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.
54 Il a secouru Israël son serviteur, Il s'est souvenu de sa miséricorde,
೫೪ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. (aiōn )
55 Ainsi qu'il l'avait dit à nos pères, à Abraham et à sa postérité pour toujours.» (aiōn )
೫೫
56 Marie séjourna environ trois mois avec Élisabeth, et retourna ensuite en sa maison.
೫೬ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.
57 Parvenue au terme de sa grossesse, Élisabeth enfanta un fils.
೫೭ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು.
58 Ayant appris que le Seigneur faisait ainsi éclater par elle sa miséricorde, ses voisins et ses parents partagèrent sa joie.
೫೮ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
59 Le huitième jour, ils vinrent pour la circoncision de l'enfant. Ils lui donnaient le nom de Zaccharie, celui de son père,
೫೯ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
60 quand sa mère prit la parole: «Non, dit-elle, il se nommera Jean.» —
೬೦ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,
61 «Mais, lui dirent les autres, personne dans ta famille ne porte ce nom.»
೬೧ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.
62 Et l'on demanda au père, par signes, comment il voulait le nommer.
೬೨ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.
63 Alors, se faisant apporter des tablettes, Zaccharie écrivit ceci: «Jean est son nom.» Tout le monde fut surpris.
೬೩ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
64 Aussitôt la banche de Zaccharie s'ouvrit, sa langue se délia et il se mit à parler et à bénir Dieu.
೬೪ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.
65 Chacun dans le voisinage fut saisi de crainte et, dans la région des montagnes de Judée, il ne fut bruit que de toutes ces choses.
೬೫ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.
66 Chacun en les apprenant les recueillait dans son coeur et disait: «Que sera donc cet enfant?» En effet, la main du Seigneur était avec lui.
೬೬ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.
67 Quant à Zaccharie, son père, il fut rempli d'Esprit saint et il prophétisa en ces termes:
೬೭ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,
68 «Béni soit le Seigneur, le Dieu d'Israël! Car il a visité son peuple et opéré sa rédemption;
೬೮“ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;
69 Il nous a suscité un Sauveur puissant, De la maison de David, son serviteur.
೬೯ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
70 (Ainsi qu'il l'avait annoncé par la bouche de ses saints prophètes qui jadis ont vécu.) (aiōn )
೭೦ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, (aiōn )
71 Il nous délivre de nos ennemis, Et de la main de tous ceux qui nous haïssent;
೭೧ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.
72 Il montre sa miséricorde envers nos pères; Il se souvient de sa sainte alliance;
೭೨ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.
73 Du serment par lui juré à notre père Abraham; Il nous donne enfin à nous,
೭೩
74 délivrés de la main de nos ennemis, De le servir sans crainte, [de notre vie;
೭೪ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.
75 De marcher devant lui dans la sainteté et la justice tous les jours
೭೫
76 Et toi, enfant, tu seras appelé Prophète du Très-Haut; Car tu iras devant le Seigneur; Tu marcheras devant lui pour lui préparer les voies;
೭೬ಮಗುವೇ, ನೀನಾದರೋ ಪರಾತ್ಪರನಾದ ದೇವರ ಪ್ರವಾದಿಯೆನಿಸಿಕೊಳ್ಳುವಿ. ನೀನು ಕರ್ತನ ಮುಂದೆ ಹೋಗಿ ಆತನ ಹಾದಿಗಳನ್ನು ಸಿದ್ಧಮಾಡುವವನಾಗಿಯೂ,
77 Tu donneras à son peuple la science du salut, Tu lui diras que ses péchés lui sont remis;
೭೭ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,
78 Que notre Dieu a des entrailles de miséricorde, Qu'il nous a regardés du haut des cieux, Que le soleil d'Orient se lève;
೭೮
79 Qu'il illuminera ceux qui sont assis dans les ténèbres et l'ombre de la mort; Qu'il dirigera nos pas dans un chemin de paix.»
೭೯ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”
80 L'enfant grandissait et son esprit se fortifiait, et jusqu'au jour de sa manifestation à Israël, les déserts furent sa demeure.
೮೦ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.