< Luc 18 >
1 Il leur raconta une parabole pour leur montrer qu'il faut prier toujours, et ne point se lasser:
೧ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
2 «Dans une certaine ville, dit-il, il y avait un juge qui n'avait ni crainte de Dieu, ni égards pour les hommes.
೨ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.
3 Or, dans cette même ville, il y avait une veuve qui venait à lui et lui disait: «Fais-moi justice de mon adversaire.»
೩ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
4 Pendant longtemps, il ne le voulut pas.» «Enfin il se dit à lui-même: «Bien que je n'aie ni crainte de Dieu, ni égards pour les hommes,
೪ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
5 comme il est certain que cette veuve-là m'est à charge, je lui ferai justice, de peur qu'elle ne finisse par se livrer à quelque violence.»
೫ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
6 Vous entendez, ajouta le Seigneur, ce que dit ce juge inique.
೬ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.
7 Et Dieu ne ferait point justice à ses élus qui crient à lui nuit et jour? Il tarderait à les secourir?
೭ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?
8 Il leur fera prompte justice, je vous le déclare; mais le Fils de l'homme, à son retour, trouvera-t-il la foi sur la terre?»
೮ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
9 Il raconta aussi la parabole suivante à quelques-uns très convaincus, à part eux, qu'ils étaient justes, et qui méprisaient les autres:
೯ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
10 «Deux hommes montèrent au Temple pour prier; l'un Pharisien et l'autre publicain.
೧೦ಅದೇನೆಂದರೆ, “ಪ್ರಾರ್ಥನೆಮಾಡಬೇಕೆಂದು ಇಬ್ಬರು ಮನುಷ್ಯರು ದೇವಾಲಯಕ್ಕೆ ಹೋದರು. ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕದವನು.
11 Le Pharisien, debout, priait ainsi en lui-même: «O Dieu, je te rends grâces de ce que je ne suis pas comme le reste des hommes, gens rapaces, iniques, adultères, de ce que je ne suis pas comme ce publicain-là.
೧೧ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.
12 Je jeûne deux fois par semaine; je donne la dîme de tout ce que j'acquiers.»
೧೨ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.
13 Quant au publicain, il se tenait à distance, il n'osait pas même lever les yeux vers le ciel, mais il se frappait la poitrine en disant: «Dieu, aie pitié de moi qui suis un pécheur!»
೧೩ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.
14 Celui-ci, je vous le déclare, rentra dans sa maison justifié, plutôt que l'autre; car quiconque s'élève lui-même sera abaissé, et quiconque s'abaisse lui-même sera élevé.»
೧೪ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
15 On lui apportait même les tout petits enfants pour qu'il les touchât. Voyant cela, les disciples blâmèrent ceux qui les lui apportaient.
೧೫ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
16 Mais Jésus appela ces enfants: «Laissez, leur dit-il, les enfants venir à moi, et ne les en empêchez pas, car c'est à ceux qui leur ressemblent qu'appartient le Royaume de Dieu.
೧೬ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
17 En vérité, je vous le dis, qui ne recevra pas, comme un enfant, le Royaume de Dieu, n'y entrera pas.»
೧೭ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
18 Un chef de synagogue lui posa une question: «Bon maître, lui dit-il, que dois-je faire pour acquérir la vie éternelle?» (aiōnios )
೧೮ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, (aiōnios )
19 Jésus lui dit: «Pourquoi m'appelles-tu bon? Nul n'est bon que Dieu seul!
೧೯ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ.
20 Tu connais les commandements: «Tu ne seras point adultère; tu ne seras point meurtrier; tu ne seras point voleur; tu ne rendras point de faux témoignages; honore ton père et ta mère.»
೨೦‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
21 Il répondit: «Tout cela je l'ai observé dès ma jeunesse.»
೨೧ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.
22 Sur cette réponse, Jésus reprit: «Une chose te manque encore; vends tout ce que tu as; distribues-en le prix à des pauvres; tu auras alors un trésor dans les cieux; viens ensuite et suis-moi.»
೨೨ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 A ces mots, l'autre devint tout triste, car il était fort riche.
೨೩ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.
24 Voyant sa tristesse, Jésus dit: «Combien difficilement entreront dans le Royaume de Dieu ceux qui ont des richesses!
೨೪ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.
25 Il est plus facile à un chameau de passer par l'ouverture d'une aiguille qu'à un riche d'entrer dans le Royaume de Dieu.»
೨೫ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು.
26 «Qui donc pourra être sauvé?» dirent-ils en l'entendant.
೨೬ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು,
27 Jésus répondit: «Ce qui est impossible aux hommes, est possible à Dieu.» —
೨೭ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.
28 «Et nous, dit Pierre, c'est après avoir laissé tous nos biens, que nous t'avons suivi!»
೨೮ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,
29 Il leur répondit: «Je vous le dis en vérité: personne, à cause du Royaume de Dieu, ne quittera une maison, une femme, des frères, des parents, des enfants,
೨೯ಆತನು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನು ದೇವರ ರಾಜ್ಯಕ್ಕಾಗಿ ಮನೆಯನ್ನಾಗಲಿ, ಹೆಂಡತಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಗಳನ್ನಾಗಲಿ, ಮಕ್ಕಳನ್ನಾಗಲಿ ತ್ಯಜಿಸುತ್ತಾನೋ,
30 qu'il ne reçoive dès le temps présent bien davantage, et dans le siècle à venir la vie éternelle.» (aiōn , aiōnios )
೩೦ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು. (aiōn , aiōnios )
31 Prenant à part les douze, il leur dit: «Voilà que nous montons à Jérusalem et tout ce que les prophètes ont écrit du Fils de l'homme va s'accomplir:
೩೧ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
32 il sera livré aux païens, bafoué, outragé, couvert de crachats;
೩೨ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,
33 après l'avoir flagellé, ils le tueront, et le troisième jour il ressuscitera.»
೩೩ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.
34 A cela les disciples ne comprirent rien; le sens de ces paroles leur était caché; ils ne saisissaient pas ce qui leur était dit.
೩೪ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
35 Il approchait de Jéricho. Un aveugle, assis au bord du chemin, mendiait.
೩೫ಆತನು ಯೆರಿಕೋವಿನ ಸಮೀಪಕ್ಕೆ ಬಂದಾಗ ದಾರಿಯ ಬಳಿಯಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದ ಒಬ್ಬ ಕುರುಡನು,
36 Entendant le bruit d'une foule en marche, il demanda ce que c'était.
೩೬ಗುಂಪಾಗಿ ಹೋಗುತ್ತಿದ್ದ ಜನರ ಶಬ್ದವನ್ನು ಕೇಳಿ ಇದೇನು ಎಂದು ವಿಚಾರಿಸಿದನು.
37 On lui répondit: «C'est Jésus de Nazareth qui passe.»
೩೭ಅವರು ಅವನಿಗೆ, ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ತಿಳಿಸಿದಾಗ,
38 Alors il s'écria: «Jésus, Fils de David, aie pitié de moi!»
೩೮ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.
39 Ceux qui étaient en avant le menaçaient pour le faire taire, mais lui n'en criait que plus fort: «Fils de David, aie pitié de moi!»
೩೯ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
40 Jésus s'arrêta et donna l'ordre de le lui amener. Quand l'homme fut près de lui, il lui demanda:
೪೦ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,
41 «Que veux-tu que je fasse pour toi?» — «Seigneur, que j'y voie!» répondit l'aveugle.
೪೧ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
42 Alors Jésus lui dit: «Vois! ta foi t'a sauvé!»
೪೨ಯೇಸು ಅವನಿಗೆ, “ನಿನಗೆ ಕಣ್ಣುಕಾಣುವಂತಾಗಲಿ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿದೆ” ಎಂದು ಹೇಳಿದನು.
43 Immédiatement il vit, et il suivit Jésus en glorifiant Dieu. Tout le peuple, à ce spectacle, célébra les louanges de Dieu.
೪೩ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.