< Actes 22 >
1 Hommes, mes frères et mes pères, écoutez ma défense que je vais entreprendre devant vous.
೧“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.
2 Quand ils entendirent qu’il leur parlait en langue hébraïque, il se fit encore un plus grand silence.
೨ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ;
3 Il dit donc: Je suis Juif, né à Tarse en Cilicie, élevé dans cette ville aux pieds de Gamaliel, instruit selon la vérité de la loi de nos pères, zélateur de cette loi, comme vous l’êtes vous tous aujourd’hui;
೩“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.
4 C’est moi qui ai poursuivi jusqu’à la mort ceux de cette voie, les chargeant de liens, hommes et femmes, et les jetant en prison,
೪ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.
5 Comme le prince des prêtres m’en est témoin ainsi que tous les anciens; et même, ayant reçu d’eux des lettres pour nos frères de Damas, j’y allais pour les amener enchaînés à Jérusalem, afin qu’ils fussent punis.
೫ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.
6 Or il arriva que lorsque j’étais en chemin, et que j’approchais de Damas au milieu du jour, soudain brilla du ciel autour de moi une abondante lumière;
೬“ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.
7 Et tombant par terre, j’entendis une voix qui me disait: Saul, Saul, pourquoi me persécutes-tu?
೭ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.
8 Et moi je répondis: Qui êtes-vous. Seigneur? Et il me dit: Je suis Jésus de Nazareth, que tu persécutes.
೮“‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.
9 Et ceux qui étaient avec moi virent la lumière, mais ils n’entendirent pas la voix de celui qui me parlait.
೯ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ.
10 Alors je demandai: Que ferai-je, Seigneur? Et le Seigneur me répondit: Lève-toi, va à Damas; et là on te dira tout ce qu’il faut que tu fasses.
೧೦“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.
11 Et comme je ne voyais point, à cause de l’éclat de cette lumière, conduit par la main de mes compagnons, je vins à Damas.
೧೧ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು.
12 Or un certain Ananie, homme selon la loi, ayant le témoignage de tous les Juifs qui habitaient dans cette ville,
೧೨“ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ
13 Venant à moi, et s’approchant, me dit: Saul, mon frère, regarde. Et moi, au même instant, je le regardai.
೧೩ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು.
14 Et lui reprit: Le Dieu de nos pères t’a préordonné pour connaître sa volonté, voir le Juste, et entendre la voix de sa bouche;
೧೪“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.
15 Parce que tu lui seras témoin devant tous les hommes, de ce que tu as vu et entendu.
೧೫ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.
16 Et maintenant, que tardes-tu? Lève-toi, reçois le baptême et lave tes péchés en invoquant son nom.
೧೬ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
17 Et il arriva qu’étant de retour à Jérusalem, et priant dans le temple, je tombai dans un ravissement d’esprit,
೧೭“ಅನಂತರದಲ್ಲಿ ನಾನು ಯೆರೂಸಲೇಮಿಗೆ ಹಿಂತಿರುಗಿ ಬಂದು ದೇವಾಲಯದೊಳಗೆ ಪ್ರಾರ್ಥನೆಮಾಡುತ್ತಿದ್ದಾಗ, ಧ್ಯಾನಪರವಶನಾಗಿ ಅವನನ್ನು ಕಂಡೆನು.
18 Et je vis le Seigneur qui me disait: Hâte-toi, et sors vite de Jérusalem; car ils ne recevront pas le témoignage que tu rends de moi.
೧೮ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.
19 Et moi je répondis: Seigneur, ils savent eux-mêmes que c’est moi qui enfermais en prison et déchirais de coups dans les synagogues ceux qui croyaient en vous;
೧೯“ಅದಕ್ಕೆ ನಾನು; ‘ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ, ನಿನ್ನ ಮೇಲೆ ನಂಬಿಕೆಯಿಟ್ಟವರನ್ನು, ನಾನು ಸೆರೆಮನೆಯಲ್ಲಿ ಹಾಕಿಸುತ್ತಾ, ಹೊಡಿಸುತ್ತಾ ಇದ್ದೆನೆಂಬುದನ್ನು,
20 Et que, lorsqu’on versait le sang d’Etienne, votre témoin, j’étais là, et j’y consentais, et je gardais les vêtements de ses meurtriers.
೨೦ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.
21 Et il me dit: Va, parce que je t’enverrai bien loin vers les nations.
೨೧ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.
22 Ils l’avaient écouté jusqu’à ce mot; mais alors ils élevèrent leur voix, disant: Ôte de la terre un pareil homme, car ce serait un crime de le laisser vivre.
೨೨ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
23 Eux donc, poussant de grands cris, jetant leurs vêtements, et lançant de la poussière en l’air,
೨೩ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,
24 Le tribun ordonna de le conduire dans le camp, de le déchirer de verges, et de le mettre à la question, afin de savoir pourquoi ils criaient ainsi contre lui.
೨೪ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
25 Mais lorsqu’ils l’eurent lié avec des courroies, Paul dit au centurion qui était près de lui: Vous est-il permis de flageller un citoyen romain non condamné?
೨೫ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
26 Ce qu’ayant entendu, le centurion se rendit auprès du tribun, et l’avertit, disant: Qu’allez-vous faire? car cet homme est citoyen romain.
೨೬ಶತಾಧಿಪತಿಯು ಆ ಮಾತನ್ನು ಕೇಳಿ ಸಹಸ್ರಾಧಿಪತಿಯ ಬಳಿಗೆ ಹೋಗಿ; “ನೀನು ಏನು ಮಾಡಬೇಕೆಂದಿದ್ದೀ? ಈ ಮನುಷ್ಯನು ರೋಮಾಪುರದ ಹಕ್ಕುದಾರನು” ಎಂದು ಹೇಳಲು,
27 Et le tribun venant à lui, demanda: Dis-moi, es-tu Romain? Et Paul répondit: Oui.
೨೭ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು.
28 Le tribun repartit: C’est avec beaucoup d’argent que j’ai acquis ce droit de cité. Et Paul répliqua: Moi, je suis né citoyen.
೨೮ಅದಕ್ಕೆ ಸಹಸ್ರಾಧಿಪತಿಯು; “ನಾನು ಬಹಳ ಹಣಕೊಟ್ಟು ಆ ಹಕ್ಕನ್ನು ಕೊಂಡುಕೊಂಡೆನು” ಅನ್ನಲು ಪೌಲನು; “ನಾನಾದರೋ ಹಕ್ಕುದಾರನಾಗಿ ಹುಟ್ಟಿದವನು” ಅಂದನು.
29 Aussitôt donc s’éloignèrent de lui ceux qui devaient lui donner la question; le tribun lui-même eut peur, après qu’il eut appris qu’il était citoyen romain, parce qu’il l’avait fait lier.
೨೯ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು.
30 Le lendemain, voulant savoir plus exactement de quoi il était accusé par les Juifs, il lui ôta ses liens, et ordonna aux prêtres, et à tout le conseil de s’assembler, puis il amena Paul, et le plaça au milieu d’eux.
೩೦ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.