< Proverbes 31 >

1 Paroles de Lamuel roi. Vision par laquelle l’a instruit sa mère.
ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು:
2 Que te dirai-je, mon bien aimé, que te dirai-je, bien aimé de mon sein, que te dirai-je, bien-aimé de mes vœux?
ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು!
3 Ne donne pas aux femmes ton bien, et tes richesses pour perdre des rois.
ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು.
4 Non aux rois, ô Lamuel, non aux rois, ne donne pas de vin, parce qu’il n’est nul secret où règne l’ivresse:
ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;
5 Et de peur qu’ils ne boivent et qu’ils n’oublient les jugements, et qu’ils ne changent la cause des fils du pauvre.
ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.
6 Donnez de la cervoise à ceux qui sont affligés, et du vin à ceux qui ont le cœur dans l’amertume;
ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.
7 Qu’ils boivent et qu’ils oublient leur détresse, et que de leur douleur ils ne se souviennent plus.
ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.
8 Ouvre ta bouche pour le muet, et pour les causes de tous les fils qui passent;
ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.
9 Ouvre ta bouche, décrète ce qui est juste, et juge l’homme qui est sans ressources, et le pauvre.
ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.
10 Une femme forte, qui la trouvera? au-dessus de ce qui vient de loin et des derniers confins du monde est son prix.
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.
11 Le cœur de son mari se confie en elle; et il ne manquera pas de dépouilles.
ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.
12 Elle lui rendra le bien et non le mal, tous les jours de sa vie.
ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು.
13 Elle a cherché la laine et le lin, et elle a travaillé par le conseil de ses mains.
ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.
14 Elle est devenue comme le vaisseau d’un marchand, portant de loin son pain.
ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.
15 Et de nuit elle s’est levée, et elle a donné de la nourriture aux personnes de sa maison, et des vivres à ses servantes.
ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.
16 Elle a considéré un champ et l’a acheté: du fruit de ses mains, elle a planté une vigne.
ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ. ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
17 Elle a ceint de force ses reins, et elle a affermi son bras.
ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.
18 Elle a goûté et elle a vu que son commerce est bon: pendant la nuit, sa lampe ne s’éteindra pas.
ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
19 Elle a mis sa main à des choses fortes; et ses doigts ont pris le fuseau.
ಅವಳು ರಾಟೆಯ ಮೇಲೆ ಕೈಹಾಕಿ, ಕದಿರನ್ನು ಹಿಡಿಯುತ್ತಾಳೆ.
20 Elle a ouvert sa main à l’homme sans ressources, et ses paumes, elles les a détendues vers le pauvre.
ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.
21 Elle ne craindra pas pour sa maison le froid de la neige, car toutes les personnes de sa maison ont un double vêtement.
ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.
22 Elle s’est fait une couverture: le fin lin et la pourpre forment son vêtement.
ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.
23 Illustre sera son mari aux portes de la ville, quand il siégera avec les sénateurs de la terre.
ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.
24 Elle a fait un fin tissu, et elle l’a vendu; et elle a livré une ceinture au Chananéen.
ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.
25 La force et la beauté sont son vêtement, et elle rira au jour dernier.
ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.
26 Elle a ouvert sa bouche à la sagesse, et la loi de la clémence est sur sa langue.
ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.
27 Elle a considéré les sentiers de sa maison, et elle n’a pas mangé de pain dans l’oisiveté.
ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.
28 Ses fils se sont levés et l’ont proclamée très heureuse; son mari s’est levé, et l’a louée.
ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,
29 Beaucoup de filles ont amassé des richesses: mais toi, tu les as toutes surpassées.
“ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು.
30 Trompeuse est la grâce, et vaine est la beauté: la femme qui craint le Seigneur est celle qui sera louée.
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
31 Donnez-lui le fruit de ses mains, et que ses œuvres la louent aux portes de la ville.
ಆಕೆಯ ಕೈಕೆಲಸಕ್ಕೆ ತಕ್ಕ ಪ್ರತಿಫಲವನ್ನು ಸಲ್ಲಿಸಿ ಗೌರವಿಸಿರಿ. ಪಟ್ಟಣದ ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.

< Proverbes 31 >