< Psaumes 79 >
೧ಆಸಾಫನ ಕೀರ್ತನೆ. ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
2 Elles ont donné les corps morts de vos serviteurs en pâture aux volatiles du ciel; et les chairs de vos saints, aux bêtes de la terre.
೨ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.
3 Elles ont répandu leur sang comme l’eau autour de Jérusalem; et il n’y avait personne qui les ensevelît.
೩ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.
4 Nous sommes devenus l’opprobre de nos voisins, la moquerie et le jouet de ceux qui sont autour de nous.
೪ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.
5 Jusques à quand, Seigneur, serez-vous entièrement irrité? jusques à quand votre zèle s’allumera-t-il comme un feu?
೫ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?
6 Répandez votre colère sur des nations qui ne vous connaissent point, et sur des royaumes qui n’invoquent pas votre nom;
೬ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.
7 Parce qu’ils ont dévoré Jacob et désolé son lieu.
೭ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.
8 Ne vous souvenez pas de nos iniquités anciennes; que promptement nous préviennent vos miséricordes; parce que nous sommes devenus pauvres à l’excès.
೮ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.
9 Aidez-nous, ô Dieu notre Sauveur, et pour la gloire de votre nom, Seigneur, délivrez-nous, et pardonnez nos péchés à cause de votre nom;
೯ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.
10 De peur que, par hasard, l’on ne dise parmi les peuples: Où est leur Dieu? Faites donc connaître parmi les nations, devant nos yeux,
೧೦ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.
11 Qu’il vienne en votre présence, le gémissement de ceux qui sont dans les fers.
೧೧ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
12 Rendez à nos voisins, et versez dans leur sein le septuple: rendez -leur l’opprobre dont ils ont prétendu vous couvrir, ô Seigneur.
೧೨ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.
13 Pour nous, votre peuple, et les brebis de votre pâturage, nous vous louerons pour toujours;
೧೩ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.