< Kitetidayta Ootho 2 >
1 Phenxxaqonxxe geetettiza gaalas gakkanaas asay wurikka issi soon shiqii dishin,
೧ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.
2 Qohaaththaay bayinnida daroo miinno gotte caariko mala girethi asay diza keeththa kummides.
೨ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
3 Tama lacco malay asas betidi shakeeti shakeeti issi issi urra bolla uttides.
೩ಉರಿಯುವ ಬೆಂಕಿಯೂ ವಿಂಗಡಿಸಿಕೊಳ್ಳುವ ನಾಲಿಗೆಗಳ ಹಾಗೆ ಅವರಿಗೆ ಕಾಣಿಸಿ ಕೊಂಡು ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕುಳಿತುಕೊಂಡವು.
4 Amanizayti wuri Xiillo Ayanan kummiidi Ayanay isttas hasa7anas immidayssa keena hara qaalara hasa7a oykkida.
೪ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.
5 He wode salo guhaaththaanththon diza derepe yida Xoossas babiiza ayhudati Yerusalamen deetes.
೫ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.
6 He gireththa siyidi derey shiqides. Issi issi asay ba qaalara hasa7izaysa siyidi malaletides.
೬ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.
7 Malaletidinne gizazi dhayin hizgida “hayti hasa7izayti wurikka Galila asi dettenee?
೭ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
8 Histtin nuni nu yelletida nu dere qaalara isti hasa7ishin wossti siyizonii?
೮ಆದರೆ ನಾವು ಪ್ರತಿಯೊಬ್ಬರು ನಮ್ಮ ನಮ್ಮ ಮಾತೃಭಾಷೆಯಲ್ಲಿ ಇವರು ಮಾತನಾಡುವುದನ್ನು ಕೇಳುತ್ತಿದ್ದೇವಲ್ಲಾ, ಇದು ಹೇಗೆ?
9 Nuni Pharite asay Meede asay Eelame asay Mesphphoxxomiyan Yudan Qaphedoqqiyan phanxxosan Isiyan,
೯ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
10 Firgiyan, Phinhaaththailliyan Gibxen, Qaarena achchan diza Liibiyappenne Romeppe yida;
೧೦ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
11 Nuni Ayhudatine gede Ayhudatethan gellida Qaarxesa asane Araabe asata gidishin Xoossa wolqama oosoza hayti nu qaalara hasa7ishin nu siyoos.
೧೧ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವುದನ್ನು ಕೇಳುತ್ತಿದ್ದೇವಲ್ಲಾ” ಎಂದು ಅಂದುಕೊಂಡರು.
12 Wurikka kezi malaletidine gizazi dhayin ba giidon “Haysi azesha?” geetetida.
೧೨ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”
13 Bagga asay “Hayti daro woyne ush uyida” gidi istta qidhida.
೧೩ಆದರೆ ಬೇರೆ ಕೆಲವರು, “ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯ” ಮಾಡಿದರು.
14 Hessa wode Phixxirossay taammane issinistara eqqidine ne qaala dhoqqu histtidi deeras hizzgides “Inteno yuda asatto! Yerusalame dizayto inte wurikka hayssa issi mishsh erritenne ta gizaysa siyte.
೧೪ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
15 Ha7i gadey wonttin buroo hedzdzu saate gidida gish inte qoppiza mala hayti asati maththotibeytena.
೧೫ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.
16 Gido attiin haysi kasse nabe yu7ellen hizzgi yootetida qaalay polistanasko,
೧೬ಆದರೆ ಇದು ಪ್ರವಾದಿಯಾದ ಯೋವೇಲನ ಮೂಲಕವಾಗಿ ಹೇಳಿಸಿದ ಸಂಗತಿಯಾಗಿದೆ; ಅದೇನೆಂದರೆ,
17 “Xoossi hizzgees (wursetha gaalas ta ayana ashsho mayida wursio bolla ta guussana; inte macca naytine inte atumma nayti buroppe hananaysa beeyana, yelaga nayti ajjutta beeyana, Cimaati agumo agumeistana.
೧೭“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;
18 Hessa wode ta macca ashkarata bollanne ta atumma ashkarata bolla ta ayanappe ta guussana. Isttika buro hananaysa hassa7na.
೧೮ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.
19 Bolla salon malalisiza hanota ta beessana, garssa biittan malatata ta immana; suuththi, tammayinne tulaley hanana.
೧೯ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
20 Gitanne boncho gidida Goda gaalasay yanappe kassetidi awa ayhaaththaey dhummana, agiinnaykka suuththu milatana.
೨೦
21 Goda sunththu xeeyigizay wuri attana.
೨೧ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
22 Isra7eele nayto hayssa qaala siyte; inte inte baggara errizayssa mala inte garssan malatanne assi siyi erroontta miishshata iza kushshen ooththidi Xoossi naziirete Yesussas markkatides.
೨೨“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ; , ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
23 Xoossi kase ba qachchidayssa izas beni erratetha mala hayssade inte kushshen aaththi immides. Intekka iita asata kushshen kaaqqeti hayqqana mala ooththidista.
೨೩ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.
24 Gido attin Xoossi iza bollafe hayqqo wolqa diggidi hayqqope denththides. Hayqqoykka iza oykki ashshanas dandda7ibeyna.
೨೪ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
25 Dawiteykka iza gish hizzgides “Tanni Goda wurso wode ta sinththan beeyayis, izi ta oshachchan dees, mulekka hirigike.
೨೫ಆತನ ವಿಷಯದಲ್ಲಿ ದಾವೀದನು; , “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
26 Hessa gish ta wozinay uhaaththaa7etes, ta dunaykka galates, ta ashshoy uhaaththaayssan dees.
೨೬ಆದಕಾರಣ ನನ್ನ ಹೃದಯವು ಹರ್ಷಿಸಿತು; ನನ್ನ ನಾಲಿಗೆಯು ಉಲ್ಲಾಸಧ್ವನಿಯನ್ನು ಮಾಡಿತು, ನನ್ನ ಶರೀರವೂ ನಿರೀಕ್ಷೆಯಿಂದ ನೆಲೆಯಾಗಿರುವುದು;
27 Ne ta shemmipiyo dufoon agaakka, ne na geshshaza wooqana mala agaagaaka. (Hadēs )
೨೭ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ, ನಿನ್ನ ಪವಿತ್ರನಿಗೆ ಕೊಳೆಯಲು ಬಿಡಲಾರೆ. (Hadēs )
28 Ne deyoo ogge ta errana mala ooththadasa, ne tanara diza gish ta uhaaththaayssay kumeth.”
೨೮ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.
29 Ta ishshato beni aawatappe Dawitey hayqqi moggetiddayssane iza dufooy hach gakkanaas nu achchan dizayssa babontta ta intes yootana dandda7ays.
೨೯“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.
30 Izi nabe gidida gish Xoossi iza zeerethafe issade iza kawootetha aliigga bolla wothanayssa kase caaqo qaalan yootidayssa errides.
೩೦ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
31 Hessa kasetidi errida gishine iza ashshoy wooqqi duufon atoontta doretida kirstosa denththa gish hassa7ides. (Hadēs )
೩೧ಕ್ರಿಸ್ತನ ಪುನರುತ್ಥಾನವನ್ನೇ ಕುರಿತು, ಆತನು ಪಾತಾಳದಲ್ಲಿ ಬಿಡಲ್ಪಡಲಿಲ್ಲವೆಂತಲೂ, ಆತನ ಶರೀರವು ಕೊಳೆಯುವ ಅವಸ್ಥೆಯನ್ನು ಅನುಭವಿಸುವುದಿಲ್ಲವೆಂತಲೂ ಹೇಳಿದನು. (Hadēs )
32 He Yesussa Xoossi hayqqope denththidees. Nukka wuri hayssas markkata.
೩೨ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.
33 Hessa gish izi Xoossa ushshachchan dhoqqu dhoqqu giddape guye xiillo Ayana uhaaththaayssa ba aawappe ekkidi ha7i inte beeyzayssane siyzayssa duge guussides.
೩೩ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.
34 Dawitey pude salo kezibbeyna, izi ba dunnan hizzgides (Goday ta Godas; “ta ne morketa ne to garssan yeedhissana gakkanaas ta oshshachchan utta.” )
೩೪ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
36 Hessa gish Xoossi inte kaqqida Yesussa Godane Kiristtossa hisitidayssa Isiraele asay wuri lo7ethi erro.
೩೬“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
37 Deerey hessa siyda mala wozinay bochetides, Phixxirossane hanko yesussay kittidayta “nu ishshato histtin nu ay ooththino? gida.
೩೭ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;
38 Phixxirossayka hizzgides marotethan gellite; inte nagaray maristana mala intefe issi issi urray Yesuss Kiristtossa sunththan xammaqetite, izi immiza Xiillo Ayana inte ekkana.
೩೮ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
39 Izi uhaaththaayssa qaalay intesine inte naytasa, qassekka Godaa Xoossay beeko xeeygiza hahon dizaytasara wursosiko.
೩೯ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.
40 Hara daroo qaalara isttas markkatishe “hayssa geella yeletethafe intena ashshite” gidi istta qofisides.
೪೦ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.
41 He gaalas qaala ekkidaytine xaammaqetidayti hedzdzu shiya mala asay kaseyta bolla gujjetides.
೪೧ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
42 Isttika kittetidayta timmiritenn, isife qumma mussaninne wossan minnida.
೪೨ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
43 Kittetidayta kushshen daroo malatati ooththetida gish asi wuri isttas babiides.
೪೩ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.
44 Ammanidayti wurikka isife deyida; bees dizazkka wursii issi bolla go7etida.
೪೪ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
45 Bees diza mishshene mehe bayzi bayzi ba garssan koshshida mala gishechida.
೪೫ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.
46 Gaalas gaalas xoossa keeththan isife shiiqetes, ba keeththankka qumma isife uhaaththaayssanine suure wozinara meetes.
೪೬ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.
47 Istti Xoossa galatishe dere sinththan bonchetida, Godaykka istta bolla gaalas gaalas orathth ammanizata gujjidees.
೪೭ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.