< 2 Timotheus 1 >
1 Paulus, durch Gottes Willen zum Apostel Christi Jesu bestellt, um das Leben zu verkündigen, das in der Gemeinschaft mit Christus Jesus zu finden ist,
೧ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,
2 entbietet seinem geliebten Kind Timotheus seinen Gruß. Gnade, Erbarmen und Friede werde dir zuteil von Gott dem Vater und unserem Herrn Christus Jesus!
೨ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.
3 Ich danke Gott, dem ich nach meiner Ahnen Vorbild mit reinem Gewissen diene, sooft ich fort und fort bei Tag und Nacht in meinen Gebeten dein gedenke.
೩ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.
4 Ich vergesse nicht deiner Tränen, und mich verlangt nach einem Wiedersehen mit dir. Das wäre der Gipfel meiner Freude.
೪ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.
5 Dabei ist mir dein ungeheuchelter Glaube stets im Gedächtnis. Ein solcher Glaube hat auch schon gewohnt in deiner Großmutter Lois und in deiner Mutter Eunike. Nun wohnt er, wie ich fest vertraue, auch in dir.
೫ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
6 Darum rufe ich dir mahnend zu: Fach an zu neuer Glut die Gnadengabe Gottes, die in dir ist durch meine Handauflegung!
೬ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.
7 Denn Gott hat uns nicht einen Geist gegeben, der Verzagtheit wirkt, sondern einen Geist, der uns erfüllt mit Kraft, mit Liebe und mit nüchterner Besonnenheit.
೭ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
8 Darum schäme dich nicht, von unserem Herrn Zeugnis abzulegen! Schäme dich auch mein nicht, der ich um seinetwillen in Ketten liege! Sondern im Dienst der Heilsbotschaft sei ebenso wie ich bereit zu leiden! Dazu gibt Gott die Kraft.
೮ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
9 Er hat uns ja errettet und mit heiligem Ruf berufen — nicht wegen unserer Werke, sondern nach seinem freien Ratschluß —, um uns seine Gnade mitzuteilen. Die hat er uns in Christus Jesus schon seit ewigen Zeiten zum Besitz bestimmt. (aiōnios )
೯ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, (aiōnios )
10 Doch jetzt erst ist sie offenbar geworden durch die Erscheinung unseres Retters Jesus Christus. Der hat des Todes Macht vernichtet und Leben und Unsterblichkeit ans Licht gebracht durch seine Frohe Botschaft.
೧೦ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.
11 Ich bin dazu eingesetzt worden, sie als Apostel und als Lehrer mit lautem Heroldsruf zu verkündigen.
೧೧ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.
12 Darum habe ich jetzt auch (Gefangenschaft) zu leiden. Aber ich lasse den Mut nicht sinken. Denn ich weiß, auf wen ich mein Vertrauen setze, und bin gewiß, er hat's in seiner Macht, das mir anvertraute Gut bis auf "jenen Tag" zu bewahren.
೧೨ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
13 Was du von mir gehört, das halte fest als Vorbild für gesunde Lehre in jenem Glauben und in jener Liebe, die sich in Christus Jesus finden!
೧೩ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.
14 Bewahre das dir anvertraute köstliche Gut durch die Kraft des Heiligen Geistes, der in uns wohnt!
೧೪ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.
15 Du weißt, daß alle Kleinasiaten, darunter Phygelus und Hermogenes, sich von mir abgewandt haben.
೧೫ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
16 Der Herr schenke Barmherzigkeit dem Haus des Onesiphorus! Denn er hat mich oft erquickt und sich meiner Ketten nicht geschämt.
೧೬ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,
17 Vielmehr hat er bei seinem Aufenthalt in Rom eifrig nach mir gesucht und mich auch aufgefunden.
೧೭ರೋಮಾಪುರಕ್ಕೆ ಬಂದಕೂಡಲೆ ಬಹು ಆಸಕ್ತಿಯಿಂದ ವಿಚಾರಿಸಿ ನನ್ನನ್ನು ಹುಡುಕಿ ಕಂಡುಕೊಂಡನು.
18 Der Herr lasse ihn dafür Erbarmen finden bei dem Herrn an jenem Tag! Und welche Dienste er in Ephesus geleistet hat, das weißt du selbst am besten.
೧೮ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.