< 2 Mose 18 >

1 Und Jethro, der Priester von Midian, der Schwiegervater Moses, hörte alles, was Gott an Mose und an Israel, seinem Volke, getan, daß Jehova Israel aus Ägypten herausgeführt hatte.
ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.
2 Und Jethro, der Schwiegervater Moses, nahm Zippora, das Weib Moses, nach ihrer Heimsendung,
ಆಗ ಮೋಶೆಯ ಮಾವನಾದ ಇತ್ರೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು.
3 und ihre zwei Söhne, von denen der Name des einen Gersom war, denn er sprach: Ein Fremdling bin ich geworden in fremdem Lande, [S. Kap. 2,22]
ಆ ಪುತ್ರರಲ್ಲಿ ಒಬ್ಬನಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು.
4 und der Name des anderen Elieser: [Mein Gott ist Hülfe] denn der Gott meines Vaters ist meine Hülfe gewesen und hat mich errettet vom Schwerte des Pharao;
ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು.
5 und Jethro, der Schwiegervater Moses, und seine Söhne und sein Weib kamen zu Mose in die Wüste, wo er gelagert war am Berge Gottes.
ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನು, ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.
6 Und er ließ Mose sagen: Ich, dein Schwiegervater Jethro, bin zu dir gekommen, und dein Weib und ihre beiden Söhne mit ihr.
ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು.
7 Da ging Mose hinaus, seinem Schwiegervater entgegen, und beugte sich nieder und küßte ihn; und sie fragten einer den anderen nach ihrem Wohlergehen und gingen ins Zelt.
ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.
8 Und Mose erzählte seinem Schwiegervater alles, was Jehova an dem Pharao und an den Ägyptern getan hatte um Israels willen, all die Mühsal, die sie auf dem Wege getroffen, und daß Jehova sie errettet habe.
ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.
9 Und Jethro freute sich über all das Gute, das Jehova an Israel getan, daß er es errettet hatte aus der Hand der Ägypter.
ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.
10 Und Jethro sprach: Gepriesen sei Jehova, der euch errettet hat aus der Hand der Ägypter und aus der Hand des Pharao, der das Volk errettet hat unter der Hand der Ägypter hinweg!
೧೦ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.
11 Nun weiß ich, daß Jehova größer ist als alle Götter; denn in der Sache, worin sie in Übermut handelten, war er über ihnen.
೧೧ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
12 Und Jethro, der Schwiegervater Moses, nahm ein Brandopfer und Schlachtopfer für Gott; und Aaron und alle Ältesten Israels kamen, um mit dem Schwiegervater Moses zu essen vor dem Angesicht Gottes.
೧೨ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.
13 Und es geschah am anderen Tage, da setzte sich Mose, um das Volk zu richten; und das Volk stand bei Mose vom Morgen bis zum Abend.
೧೩ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.
14 Und der Schwiegervater Moses sah alles, was er mit dem Volke tat, und er sprach: Was ist das, das du mit dem Volke tust? warum sitzest du allein, und alles Volk steht bei dir vom Morgen bis zum Abend?
೧೪ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು.
15 Und Mose sprach zu seinem Schwiegervater: Weil das Volk zu mir kommt, um Gott zu befragen.
೧೫ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.
16 Wenn sie eine Sache haben, so kommt es zu mir, und ich richte zwischen dem einen und dem anderen und tue ihnen die Satzungen Gottes und seine Gesetze kund.
೧೬ಹಾಗೆಯೇ ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ” ಎಂದು ಹೇಳಿದನು.
17 Da sprach der Schwiegervater Moses zu ihm: Die Sache ist nicht gut, die du tust;
೧೭ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, “ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.
18 du wirst ganz erschlaffen, sowohl du, als auch dieses Volk, das bei dir ist; denn die Sache ist zu schwer für dich, du kannst sie nicht allein ausrichten.
೧೮ಈ ಕೆಲಸ ಬಹಳ ಕಷ್ಟವಾದದ್ದು. ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನು ನಿನ್ನ ಸಂಗಡ ಇರುವ ಈ ಜನರೂ ನಿಶ್ಚಯವಾಗಿ ಬಳಲಿಹೋಗುವಿರಿ.
19 Höre nun auf meine Stimme, ich will dir raten, und Gott wird mit dir sein: [O. sei mit dir] Sei du für das Volk vor Gott, und bringe du die Sachen zu Gott;
೧೯ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.
20 und erläutere ihnen die Satzungen und die Gesetze, und tue ihnen kund den Weg, auf dem sie wandeln, und das Werk, das sie tun sollen.
೨೦ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.
21 Du aber ersieh dir aus dem ganzen Volke tüchtige, gottesfürchtige Männer, Männer der Wahrheit, die den ungerechten Gewinn hassen, und setze sie über sie: Oberste über tausend, Oberste über hundert, Oberste über fünfzig und Oberste über zehn,
೨೧ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
22 daß sie das Volk richten zu aller Zeit; und es geschehe, daß sie jede große Sache vor dich bringen und daß sie jede kleine Sache selbst richten; so erleichtere es dir, und sie mögen mit dir tragen.
೨೨ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.
23 Wenn du dieses tust und Gott es dir gebietet, so wirst du bestehen können, und auch dieses ganze Volk wird in Frieden an seinen Ort kommen.
೨೩ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.
24 Und Mose hörte auf die Stimme seines Schwiegervaters und tat alles, was er gesagt hatte.
೨೪ಮೋಶೆ ತನ್ನ ಮಾವನ ಮಾತಿಗೆ ಒಪ್ಪಿಕೊಂಡು ಅವನು ಹೇಳಿದಂತೆಯೇ ಎಲ್ಲವನ್ನು ಮಾಡಿದನು.
25 Und Mose wählte tüchtige Männer aus ganz Israel und setzte sie zu Häuptern über das Volk: Oberste über tausend, Oberste über hundert, Oberste über fünfzig und Oberste über zehn.
೨೫ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
26 Und sie richteten das Volk zu aller Zeit: die schwierige Sache brachten sie vor Mose, und jede kleine Sache richteten sie selbst.
೨೬ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
27 Und Mose ließ seinen Schwiegervater ziehen, und er zog hin in sein Land.
೨೭ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು.

< 2 Mose 18 >