< 1 Petrus 3 >
1 Gleicherweise ihr Weiber, seid euren eigenen Männern unterwürfig, auf daß, wenn auch etliche dem Worte nicht gehorchen, sie durch den Wandel der Weiber ohne Wort mögen gewonnen werden,
೧ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.
2 indem sie euren in Furcht keuschen Wandel angeschaut haben;
೨
3 deren Schmuck nicht der auswendige sei durch Flechten der Haare und Umhängen von Gold oder Anziehen von Kleidern,
೩ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.
4 sondern der verborgene Mensch des Herzens in dem unverweslichen Schmuck des sanften und stillen Geistes, welcher vor Gott sehr köstlich ist.
೪ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
5 Denn also schmückten sich auch einst die heiligen Weiber, die ihre Hoffnung auf Gott setzten, indem sie ihren eigenen Männern unterwürfig waren:
೫ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು.
6 wie Sara dem Abraham gehorchte und ihn Herr nannte, deren Kinder ihr geworden seid, wenn ihr Gutes tut und keinerlei Schrecken fürchtet.
೬ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ.
7 Ihr Männer gleicherweise, wohnet bei ihnen nach Erkenntnis, als bei einem schwächeren Gefäße, dem weiblichen, ihnen Ehre gebend, als die auch Miterben der Gnade des Lebens sind, auf daß eure Gebete nicht verhindert werden.
೭ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
8 Endlich aber seid alle gleichgesinnt, mitleidig, voll brüderlicher Liebe, barmherzig, demütig,
೮ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.
9 und vergeltet nicht Böses mit Bösem, oder Scheltwort mit Scheltwort, sondern im Gegenteil segnet, weil ihr dazu berufen worden seid, daß ihr Segen ererbet.
೯ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
10 “Denn wer das Leben lieben und gute Tage sehen will, der enthalte seine Zunge vom Bösen, und seine Lippen, daß sie nicht Trug reden;
೧೦ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ.
11 er wende sich ab vom Bösen und tue Gutes; er suche Frieden und jage ihm nach;
೧೧ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.
12 denn die Augen des Herrn sind gerichtet auf die Gerechten, und seine Ohren auf ihr Flehen; das Angesicht des Herrn aber ist wider die, welche Böses tun.”
೧೨ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”
13 Und wer ist, der euch Böses tun wird, wenn ihr Nachahmer des Guten geworden seid?
೧೩ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
14 Aber wenn ihr auch leiden solltet um der Gerechtigkeit willen, glückselig seid ihr! Fürchtet aber nicht ihre Furcht, noch seid bestürzt,
೧೪ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
15 sondern heiliget Christus, den Herrn, in euren Herzen. Seid aber jederzeit bereit zur Verantwortung gegen jeden, der Rechenschaft von euch fordert über die Hoffnung, die in euch ist, aber mit Sanftmut und Furcht;
೧೫ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
16 indem ihr ein gutes Gewissen habt, auf daß, worin sie sie wider euch als Übeltäter reden, die zu Schanden werden, welche euren guten Wandel in Christo verleumden.
೧೬ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.
17 Denn es ist besser, wenn der Wille Gottes es will, für Gutestun zu leiden, als für Bösestun.
೧೭ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.
18 Denn es hat ja Christus einmal für Sünden gelitten, der Gerechte für die Ungerechten, auf daß er uns zu Gott führe, getötet nach dem Fleische, aber lebendig gemacht nach dem Geiste,
೧೮ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.
19 in welchem er auch hinging und predigte den Geistern, die im Gefängnis sind,
೧೯ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
20 welche einst ungehorsam waren, als die Langmut Gottes harrte in den Tagen Noahs, während die Arche zugerichtet wurde, in welche wenige, daß ist acht Seelen, durch Wasser gerettet wurden,
೨೦ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
21 welches Gegenbild auch euch jetzt errettet, das ist die Taufe (nicht ein Ablegen der Unreinigkeit des Fleisches, sondern das Begehren eines guten Gewissens vor Gott), durch die Auferstehung Jesu Christi,
೨೧ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.
22 welcher, in den Himmel gegangen, zur Rechten Gottes ist, indem Engel und Gewalten und Mächte ihm unterworfen sind.
೨೨ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.