< Philipper 3 >
1 Übrigens, meine Brüder, freuet euch in dem Herrn! Euch dasselbe zu schreiben, ist mir nicht verdrießlich, für euch aber ist es sicher.
೧ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.
2 Sehet auf die Hunde, sehet auf die bösen Arbeiter, sehet auf die Zerschneidung.
೨ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.
3 Denn wir sind die Beschneidung, die wir durch den Geist Gottes dienen und uns Christi Jesu rühmen und nicht auf Fleisch vertrauen;
೩ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
4 wiewohl ich auch auf Fleisch Vertrauen habe. Wenn irgend ein anderer sich dünkt, auf Fleisch zu vertrauen, ich noch mehr:
೪ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
5 Beschnitten am achten Tage, vom Geschlecht Israel, vom Stamme Benjamin, Hebräer von Hebräern; was das Gesetz betrifft, ein Pharisäer;
೫ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,
6 was den Eifer betrifft, ein Verfolger der Versammlung; was die Gerechtigkeit betrifft, die im Gesetz ist, tadellos erfunden.
೬ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.
7 Aber was irgend mir Gewinn war, habe ich um Christi willen für Verlust geachtet;
೭ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
8 ja, wahrlich, ich achte auch alles für Verlust wegen der Vortrefflichkeit der Erkenntnis Christi Jesu, meines Herrn, um dessentwillen ich alles eingebüßt habe und es für Dreck achte, auf daß ich Christum gewinne
೮ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.
9 und in ihm erfunden werde, indem ich nicht meine Gerechtigkeit habe, die aus dem Gesetz ist, sondern die durch den Glauben an Christum ist, die Gerechtigkeit aus Gott durch den Glauben;
೯ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
10 um ihn zu erkennen und die Kraft seiner Auferstehung und die Gemeinschaft seiner Leiden, indem ich seinem Tode gleichgestaltet werde,
೧೦ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
11 ob ich auf irgend eine Weise hingelangen möge zur Auferstehung aus den Toten.
೧೧ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.
12 Nicht daß ich es schon ergriffen habe oder schon vollendet sei; ich jage ihm aber nach, ob ich es auch ergreifen möge, indem ich auch von Christo [Jesu] ergriffen bin.
೧೨ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.
13 Brüder, ich halte mich selbst nicht dafür, es ergriffen zu haben;
೧೩ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,
14 eines aber tue ich: Vergessend was dahinten, und mich ausstreckend nach dem, was vorn ist, jage ich, das Ziel anschauend, hin zu dem Kampfpreis der Berufung Gottes nach oben in Christo Jesu.
೧೪ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
15 So viele nun vollkommen sind, laßt uns also gesinnt sein; und wenn ihr etwas anders gesinnt seid, so wird euch Gott auch dies offenbaren.
೧೫ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
16 Doch wozu wir gelangt sind, laßt uns in denselben Fußstapfen wandeln.
೧೬ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.
17 Seid zusammen meine Nachahmer, Brüder, und sehet hin auf die, welche also wandeln, wie ihr uns zum Vorbilde habt.
೧೭ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
18 Denn viele wandeln, von denen ich euch oft gesagt habe, nun aber auch mit Weinen sage, daß sie die Feinde des Kreuzes Christi sind:
೧೮ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
19 deren Ende Verderben, deren Gott der Bauch, und deren Ehre in ihrer Schande ist, die auf das Irdische sinnen.
೧೯ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
20 Denn unser Bürgertum ist in den Himmeln, von woher wir auch den Herrn Jesus Christus als Heiland erwarten,
೨೦ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
21 der unseren Leib der Niedrigkeit umgestalten wird zur Gleichförmigkeit mit seinem Leibe der Herrlichkeit, nach der wirksamen Kraft, mit der er vermag, auch alle Dinge sich zu unterwerfen.
೨೧ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.