< Offenbarung 16 >
1 Und ich hörte eine laute Stimme aus dem Tempel zu den sieben Engeln sagen: Gehet hin und gießet die sieben Schalen des Grimmes Gottes aus auf die Erde.
೧ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.
2 Und der erste ging hin und goß seine Schale aus auf die Erde; und es kam ein böses und schlimmes Geschwür an die Menschen, welche das Malzeichen des Tieres hatten und die sein Bild anbeteten.
೨ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.
3 Und der zweite goß seine Schale aus auf das Meer; und es wurde zu Blut, wie von einem Toten, und jede lebendige Seele starb, alles was in dem Meere war.
೩ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.
4 Und der dritte goß seine Schale aus auf die Ströme und [auf] die Wasserquellen, und sie wurden zu Blut.
೪ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.
5 Und ich hörte den Engel der Wasser sagen: Du bist gerecht, der da ist und der da war, der Heilige, daß du also gerichtet hast.
೫ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.
6 Denn Blut von Heiligen und Propheten haben sie vergossen, und Blut hast du ihnen zu trinken gegeben; sie sind es wert.
೬ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
7 Und ich hörte den Altar sagen: Ja, Herr, Gott, Allmächtiger, wahrhaftig und gerecht sind deine Gerichte.
೭ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.
8 Und der vierte goß seine Schale aus auf die Sonne; und es wurde ihr gegeben, die Menschen mit Feuer zu versengen.
೮ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.
9 Und die Menschen wurden von großer Hitze versengt und lästerten den Namen Gottes, der über diese Plagen Gewalt hat, und taten nicht Buße, ihm Ehre zu geben.
೯ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
10 Und der fünfte goß seine Schale aus auf den Thron des Tieres; und sein Reich wurde verfinstert; und sie zerbissen ihre Zungen vor Pein
೧೦ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,
11 und lästerten den Gott des Himmels wegen ihrer Pein und wegen ihrer Geschwüre, und taten nicht Buße von ihren Werken.
೧೧ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.
12 Und der sechste goß seine Schale aus auf den großen Strom Euphrat; und sein Wasser vertrocknete, auf daß der Weg der Könige bereitet würde, die von Sonnenaufgang herkommen.
೧೨ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.
13 Und ich sah aus dem Munde des Drachen und aus dem Munde des Tieres und aus dem Munde des falschen Propheten drei unreine Geister kommen, wie Frösche;
೧೩ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
14 denn es sind Geister von Dämonen, die Zeichen tun, welche zu den Königen des ganzen Erdkreises ausgehen, sie zu versammeln zu dem Kriege [jenes] großen Tages Gottes, des Allmächtigen.
೧೪ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
15 (Siehe, ich komme wie ein Dieb. Glückselig, der da wacht und seine Kleider bewahrt, auf daß er nicht nackt wandle und man seine Schande sehe!)
೧೫“ಇಗೋಕಳ್ಳನು ಬರುವಂತೆ ಬರುತ್ತೇನೆ. ತಾನುಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
16 Und er versammelte sie an den Ort, der auf hebräisch Armagedon heißt.
೧೬ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.
17 Und der siebte goß seine Schale aus in die Luft; und es ging eine laute Stimme aus von dem Tempel [des Himmels], von dem Throne, welche sprach:
೧೭ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
18 Es ist geschehen. Und es geschahen Blitze und Stimmen und Donner; und ein großes Erdbeben geschah, desgleichen nicht geschehen ist, seitdem die Menschen auf der Erde waren, solch ein Erdbeben, so groß.
೧೮ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.
19 Und die große Stadt wurde in drei Teile geteilt, und die Städte der Nationen fielen, und die große Babylon kam ins Gedächtnis vor Gott, ihr den Kelch des Weines des Grimmes seines Zornes zu geben.
೧೯ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.
20 Und jede Insel entfloh, und Berge wurden nicht gefunden.
೨೦ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು.
21 Und große Hagelsteine, wie ein Talent schwer, fallen aus dem Himmel auf die Menschen hernieder; und die Menschen lästerten Gott wegen der Plage des Hagels, denn seine Plage ist sehr groß.
೨೧ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.