< 4 Mose 15 >
1 Und der Herr redete also mit Moses:
೧ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2 "Sprich zu den Söhnen Israels und sag zu ihnen: Kommt ihr in eurer Siedlungen Land, das ich euch gebe,
೨“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
3 und wollt ihr ein Mahl für den Herrn bereiten, Brand- oder Schlachtopfer, um ein Gelübde zu erfüllen oder als freie Gabe oder bei euren Festen, um von den Rindern oder Schafen dem Herrn einen süßen Duft zu bereiten,
೩ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
4 dann bringe der, der dem Herrn seine Opfergabe bringt, als Speiseopfer ein Zehntel feines Mehl dar, mit einem Viertel Krug Öl zubereitet!
೪ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
5 Einen Viertelkrug Wein sollst du zum Trankopfer bei Brand- und Schlachtopfer für je ein Lamm herrichten!
೫ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
6 Für einen Widder richte als Speiseopfer her zwei Zehntel feines Mehl, mit einem Drittel Krug Öl zubereitet,
೬“‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
7 an Wein zum Trankopfer einen Drittelkrug! So kannst du dem Herrn einen süßen Duft darbringen.
೭ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
8 Willst du einen jungen Stier als Brand- oder als Schlachtopfer herrichten, um ein Gelübde zu erfüllen oder als ein Dankopfer für den Herrn,
೮“‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
9 dann bringe man zu dem jungen Rind als Speiseopfer drei Zehntel Feinmehl dar und mache es mit einem halben Krug Öl an!
೯ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
10 An Wein sollst du zum Trankopfer einen halben Krug bringen, als ein Mahl süßen Duftes für den Herrn!
೧೦ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
11 Bei jedem Rinde oder Widder oder jedem Lamme von Schafen oder Ziegen tue man also!
೧೧“‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
12 Entsprechend der Zahl, die ihr herrichtet, sollt ihr bei jedem einzelnen also tun!
೧೨ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
13 Jeder Eingeborene soll diese so bereiten, will er dem Herrn ein Mahl süßen Duftes darbringen!
೧೩ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
14 Weilt ein Fremdling bei euch, oder wer bei euch sei in euren Geschlechtern, und will er dem Herrn ein Mahl süßen Duftes bereiten, so soll er so tun, wie ihr tut!
೧೪ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
15 Für euch wie für den Fremdling gelte eine Gemeindesatzung! Auch euren Nachkommen gelte diese ewige Satzung. Wie ihr, so soll auch der Fremdling vor dem Herrn sein!
೧೫ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
16 Ein Gesetz und eine Ordnung sollen für euch und für den Fremdling, der bei euch weilt, gelten!'"
೧೬ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
17 Und der Herr sprach also zu Moses:
೧೭ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
18 "Sprich zu den Söhnen Israels und sag zu ihnen: Kommt ihr in dieses Land, in das ich euch bringe,
೧೮“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
19 und eßt ihr von dem Korne des Landes, dann sollt ihr eine Weihegabe dem Herrn darbringen!
೧೯ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
20 Von eures Teiges erstem Abhub sollt ihr einen Kuchen als Gabe abgeben. Wie eine Tennengabe sollt ihr sie darbringen!
೨೦ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
21 Von eures Teiges erstem Abhub sollt ihr dem Herrn eine Abgabe machen von Geschlecht zu Geschlecht!
೨೧“‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
22 Vergeht ihr euch ohne Vorsatz und erfüllt ihr eines der Gebote nicht, die der Herr dem Moses gegeben,
೨೨ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
23 irgend etwas von dem, was durch Moses der Herr euch geboten, von dem Tage an, da der Herr Gebote gegeben, und weiterhin, für die Geschlechter,
೨೩ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
24 so sei es: Ist das Versehen von seiten der Gemeinde erfolgt, dann bereite die Gesamtgemeinde einen jungen Stier zum Brandopfer, zu süßem Dufte für den Herrn, und nach Gebühr sein Speise- und Trankopfer und einen Ziegenbock zum Sündopfer!
೨೪ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
25 So schaffe der Priester der ganzen israelitischen Gemeinde Sühne! Dann wird ihnen vergeben werden. Ein Versehen ist es, und sie sollen ihre Opfergabe als Mahl für den Herrn darbringen und wegen des Versehens vor dem Herrn ihr Sündopfer!
೨೫ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
26 So werde der ganzen israelitischen Gemeinde vergeben sowie dem Fremdling in ihrer Mitte; denn er gehört zu dem Volk im Falle einer Irrung!
೨೬ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
27 Sündigt aber eine einzelne Person unvorsätzlich, so bringe sie eine noch nicht jährige Ziege als Sündopfer dar!
೨೭“‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
28 Und der Priester schaffe Sühne der Person, die sich durch ein Versehen unvorsätzlich vor dem Herrn vergeht, durch Vollzug der Sühnegebräuche! So werde ihr vergeben!
೨೮ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
29 Für den Eingeborenen Israeliten und den Fremdling in eurer Mitte gilt ein Gesetz für euch, wenn jemand unvorsätzlich handelt.
೨೯ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
30 Die Person aber, die vorsätzlich sündigt, eingeboren oder fremd, lästert den Herrn. Diese Person soll aus ihrem Volke gestrichen werden!
೩೦ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
31 Denn sie hat das Wort des Herrn verspottet und sein Gebot zerrissen. Diese Person werde unerbittlich gestrichen! Ihre Schuld komme auf sie!'"
೩೧ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
32 Als die Israeliten in der Wüste waren, ertappten sie einen Mann, der am Sabbattage Holz las.
೩೨ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
33 Da brachten ihn die Leute, die ihn beim Holzlesen ertappt, zu Moses und Aaron und zu der ganzen Gemeinde.
೩೩ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
34 Und sie legten ihn in Gewahrsam, weil noch nicht entschieden war, was ihm zu tun sei.
೩೪ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
35 Da sprach der Herr zu Moses: "Der Mann soll den Tod erleiden! Die Gesamtgemeinde steinige ihn außerhalb des Lagers!"
೩೫ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
36 Da führte ihn die ganze Gemeinde vor das Lager, und sie steinigten ihn zu Tode, wie der Herr dem Moses befohlen hatte.
೩೬ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
37 Und der Herr sprach zu Moses:
೩೭ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
38 "Sprich zu den Söhnen Israels! Sag zu ihnen: Sie sollen sich Quasten an ihre Kleiderzipfel machen, sie und ihre Nachkommen, und sollen eine blaue Purpurschnur an jeder Zipfelquaste anbringen!
೩೮“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
39 So sollt ihr also Quasten haben! Seht ihr sie an, dann denkt an all die Gebote des Herrn und tut sie! Ihr sollt nicht eurem Herzen und eurem Auge nachgeben, daß ihr durch sie die Treue brechet!
೩೯ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
40 Dadurch bleibt eingedenk all meiner Gebote und tut sie und seid heilig eurem Gott!
೪೦ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
41 Nur ich, der Herr, bin euer Gott, der aus Ägypterland euch geführt, um euch zum Gott zu sein. Nur ich, der Herr, bin euer Gott.'"
೪೧ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”