< 1 Timotheus 5 >
1 Einen alten Mann sollst du nicht anfahren, sondern ihm zusprechen, wie einem Vater; den jungen wie Brüdern;
೧ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ,
2 den alten unter den Frauen wie Müttern, den jungen wie Schwestern, in aller Sittsamkeit.
೨ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.
3 Als Witwen ehre, die wirklich Witwen sind.
೩ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
4 Hat aber eine Witwe Kinder oder Enkel, die sollen zuerst lernen, dem eigenen Haus fromm dienen und den Eltern Empfangenes heimgeben; denn das ist vor Gott genehm.
೪
5 Die wirkliche vereinsamte Witwe aber hat ihre Hoffnung auf Gott und hält an im Gebet und Flehen Tag und Nacht.
೫ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
6 Die aber üppig lebt, ist lebendig tot.
೬ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.
7 Dieses Gebot sollst du verkünden, damit sie ohne Tadel seien.
೭ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.
8 Wer nicht sorgt für seine Angehörigen und namentlich für die im Haus, der hat den Glauben verleugnet, und ist schlimmer als ein Ungläubiger.
೮ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
9 Unter die Witwen soll man nur solche aufnehmen, die wenigstens sechzig Jahre alt sind und Eines Mannes Frau,
೯ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,
10 wohlbezeugt in guten Werken, wenn sie Kinder auferzogen, Gastfreundschaft geübt, den Heiligen die Füße gewaschen, den Bedrängten ausgeholfen hat, jedem guten Werke nachgegangen ist.
೧೦ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.
11 Jüngere Witwen aber nimm nicht an. Denn wenn sie trotz Christus in Begierde fallen, gehen sie auf das Heiraten aus
೧೧ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.
12 und haben den Vorwurf auf sich, daß sie die erste Treue gebrochen.
೧೨ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.
13 Müßig sind sie auch, und bringen es darin zu etwas, beim Herumlaufen in den Häusern; aber nicht nur im Müßiggang, sondern auch im Schwatzen, Vorwitz, unziemlichen Reden.
೧೩ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.
14 Darum ist mein Wille: die jüngeren sollen heiraten, Kinder zeugen, dem Haushalt vorstehen, dem Widersacher keinen Anlaß geben Lästerung halber.
೧೪ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
15 Denn schon sind etliche abgewichen dem Satan nach.
೧೫ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ.
16 Wenn eine Gläubige Witwen hat, soll sie dieselben versorgen und die Gemeinde nicht belastet werden, damit sie die wirklichen Witwen versorgen kann.
೧೬ನಂಬುವವಳಾದ ಸ್ತ್ರೀಯ ಬಂಧುಭಾಂಧವರಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.
17 Die Aeltesten, die sich als Vorsteher tüchtig bewiesen, soll man zwiefacher Ehre wert achten, namentlich die, welche mit Wort und Lehre arbeiten.
೧೭ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
18 Denn die Schrift sagt: dem Ochsen, der drischt, sollst du das Maul nicht stopfen, und: der Arbeiter ist seines Lohnes wert.
೧೮“ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.
19 Gegen einen Aeltesten nimm keine Klage an, es sei denn, daß zwei oder drei zeugen gegen ihn auftreten.
೧೯ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
20 Die sich vergehen, weise in Gegenwart aller zurecht, damit auch die übrigen Furcht bekommen.
೨೦ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.
21 Ich beschwöre dich vor Gott und Christus Jesus und den auserwählten Engeln, daß du solches haltest ohne Vorurteil, und nichts nach Gunst thuest.
೨೧ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.
22 Lege keinem so schnell die Hände auf, und mache nicht gemeinsame Sache mit fremden Sünden. Halte dich selbst rein.
೨೨ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ, ನೀನು ಶುದ್ಧನಾಗಿರುವ ಹಾಗೆ ನೋಡಿಕೋ.
23 Trinke nicht mehr bloß Wasser, sondern nimm etwas Wein um deines Magens willen und deiner häufigen Krankheiten.
೨೩ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.
24 Bei manchem Menschen sind die Sünden früh am Tage, dem Gericht voraus; bei andern erst hinterdrein.
೨೪ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಯಲಾಗುತ್ತವೆ, ಬೇರೆ ಕೆಲವರ ಪಾಪಕೃತ್ಯಗಳು ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ.
25 Ebenso sind die guten Werke vorher zu sehen; und wo es anders ist, bleibt es auch nicht verborgen.
೨೫ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು.