< 2 Korinther 1 >
1 Paulus, Apostel Christus Jesus', durch Gottes Willen, und Timotheus der Bruder an die Gemeinde in Korinth samt allen Heiligen in ganz Achaia.
೧ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,
2 Gnade euch und Friede von Gott unserem Vater und dem Herrn Jesus Christus.
೨ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ.
3 Gepriesen sei Gott der Vater unseres Herrn Jesus Christus, der Vater der Barmherzigkeit und Gott alles Trostes,
೩ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು,
4 der uns tröstet bei all unserer Trübsal, so daß wir zu trösten vermögen, die da sind in irgendwelcher Trübsal, mit dem Troste, mit dem wir selbst von Gott getröstet werden.
೪ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
5 Denn wie wir Christus' Leiden reichlich erfahren, so erfahren wir auch reichlich Trost durch Christus.
೫ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.
6 Leiden wir, so geschieht es zu Trost und Heil für euch; haben wir Trost, so geschieht es euch zum wirksamen Trost im Dulden der gleichen Leiden, wie sie uns treffen,
೬ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.
7 und wir haben feste Hoffnung für euch, in dem Gedanken, daß ihr wie am Leiden, so auch am Troste Anteil habet.
೭ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
8 So möchten wir denn euch nicht ohne Kunde lassen, Brüder, von der Trübsal, die uns in Asia betroffen hat: sie kam so schwer über uns, weit über Kräfte, so daß wir selbst am Leben verzweifelten.
೮ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.
9 Ja, von uns aus mußten wir uns das Todesurteil sprechen: auf daß wir nicht auf uns selbst unser Vertrauen hätten, sondern auf den Gott, der die Toten auferweckt.
೯ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
10 Er hat uns aus solchem Tod erlöst, und wird uns erlösen; auf ihn haben wir unsere Hoffnung gesetzt, daß er uns auch weiter erlösen werde.
೧೦ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
11 Dabei helft auch ihr mit Beten für uns, auf daß bei persönlicher Anteilnahme so vieler die auf uns kommende Gnadengabe auch die Dankesweihe von vielen erhalte für uns.
೧೧
12 Wenn wir uns denn rühmen, so handelt es sich um das Zeugnis unseres Gewissens, daß wir in Heiligkeit und Lauterkeit Gottes, nicht in fleischlicher Weisheit, sondern in Gottes Gnade uns bewegt haben, wie in der Welt überhaupt, so ganz besonders gegenüber von euch.
೧೨ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
13 Denn es ist nichts damit, daß in unseren Briefen etwas anderes stecke - als was ihr leset, und was ihr auch versteht, ja ich hoffe noch völlig verstehen werdet,
೧೩ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ.
14 sowie ihr uns doch schon teilweise verstanden habt, nämlich das: daß wir euer Ruhm sind, so gut als ihr der unsrige auf den Tag unseres Herrn Jesus.
೧೪ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.
15 Und in diesem Vertrauen beabsichtigte ich, zuerst zu euch zu kommen, damit ihr zweimal die Freude hättet;
೧೫ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.
16 über euch wollte ich dann nach Makedonia gehen, von da wieder zu euch zurück, und mir von euch das Geleite nach Judäa geben lassen.
೧೬ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.
17 Bin ich nun bei dieser Absicht leichtfertig verfahren? Oder sind meine Plane überhaupt Plane nach dem Fleische, so daß bei mir das Ja Ja auch Nein Nein heißt?
೧೭ಹೀಗೆ ಯೋಚಿಸಿದ್ದರಿಂದ ನಾನು ಚಂಚಲಚಿತ್ತನಾಗಿದ್ದೇನೋ? ಕೇವಲ ಪ್ರಾಪಂಚಿಕ ಗುಣಮಟ್ಟಕ್ಕೆ ಯೋಚಿಸಿ ಈ ಕ್ಷಣ “ಹೌದು” ಮರು ಕ್ಷಣ “ಇಲ್ಲ” ಎಂದು ಹೇಳುವವನಂತಿದ್ದೇನೋ? ಎಂದಿಗೂ ಇಲ್ಲ.
18 Gott ist gut dafür, daß unser Wort zu euch nicht ein Ja- und Nein-Wort ist.
೧೮ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.
19 Denn der Sohn Gottes Christus Jesus, der unter euch durch uns verkündet ward, durch mich, Silvanus und Timotheus, war nicht Ja und Nein, sondern in ihm ist das Ja.
೧೯ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ.
20 Zu allen Verheißungen Gottes ist in ihm das Ja, und durch ihn das Amen, Gott zum Preise durch uns.
೨೦ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.
21 Der aber, der uns samt euch festmacht für Christus, ist Gott, der uns auch gesalbt hat,
೨೧ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ.
22 der uns auch versiegelt, und das Pfand des Geistes in unsere Herzen gegeben hat.
೨೨ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.
23 Ich aber rufe Gott zum Zeugen an auf meine Seele, daß ich aus Schonung gegen euch nicht wieder nach Korinth gekommen bin.
೨೩ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.
24 (Nicht daß wir über euren Glauben herrschen: sondern wir arbeiten mit an eurer Freude; ihr steht ja im Glauben).
೨೪ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.