< Apostelgeschichte 14 >
1 Es geschah aber, daß sie in Ikonium zusammen in die Synagoge der Juden giengen und derart redeten, daß eine große Menge von Juden sowohl als auch von Griechen gläubig wurden.
೧ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.
2 Die Juden aber, die sich nicht anschlossen, reizten und erbitterten die Heiden gegen die Brüder.
೨ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.
3 So verweilten sie längere Zeit in offenem Auftreten für den Herrn, der sein Zeugnis gab für das Wort seiner Gnade, indem er Zeichen und Wunder durch ihre Hände geschehen ließ.
೩ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.
4 Die Bevölkerung der Stadt aber spaltete sich, und die einen hielten es mit den Juden, die anderen aber mit den Aposteln.
೪ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
5 Wie aber die Heiden und die Juden mit ihren Oberen den Anlauf nahmen, sie zu mißhandeln und zu steinigen,
೫ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
6 flohen sie, da sie es merkten, in die Städte von Lykaonia: Lystra und Derbe, und die Umgegend.
೬ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
7 Und daselbst lebten sie der Verkündigung der frohen Botschaft.
೭ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
8 Und In Lystra saß ein Mann, der ohne Kraft in den Füßen war, lahm von Mutterleib her, er hatte nie gehen können.
೮ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
9 Dieser hörte der Rede des Paulus zu, der aber blickte ihn an, und da er sah, daß er Glauben für seine Herstellung hatte,
೯ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
10 sprach er mit lauter Stimme: stehe aufrecht hin auf deine Füße. Und er sprang auf und gieng herum.
೧೦“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
11 Die Massen aber, da sie sahen was Paulus gethan hatte, riefen sie auf Lykaonisch laut: die Götter sind den Menschen gleich geworden, und zu uns herabgestiegen.
೧೧ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.
12 Und sie nannten den Barnabas Zeus, den Paulus aber Hermes, weil er der Wortführer war.
೧೨ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.
13 und der Priester des Zeus vor der Stadt brachte Stiere und Kränze zur Vorhalle, und schickte sich samt den Massen an zu opfern.
೧೩ಊರ ಮುಂದಿದ್ದ ದ್ಯೌಸ್ ದೇವರ ಗುಡಿಯ ಪೂಜಾರಿಯು ಎತ್ತುಗಳನ್ನೂ, ಹೂವಿನ ಹಾರಗಳನ್ನೂ ಊರಬಾಗಿಲಿನ ಹತ್ತಿರಕ್ಕೆ ತಂದು ಜನರೊಂದಿಗೆ ಅವರಿಗೆ ಬಲಿಕೊಡಬೇಕೆಂದಿದ್ದನು.
14 Da es aber die Apostel Barnabas und Paulus hörten, zerrissen sie ihre Kleider, sprangen unter das Volk
೧೪ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;
15 und riefen: Männer, was macht ihr da? Auch wir sind Menschen, schwach wie ihr, und bringen euch die frohe Botschaft euch zu bekehren von diesen nichtigen zu dem lebendigen Gott, der den Himmel und die Erde und das Meer und alles was darinnen ist gemacht hat,
೧೫“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.
16 der in den vergangenen Zeitaltern alle Völker ließ ihre Wege wandeln,
೧೬ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.
17 doch hat er sich nicht unbezeugt gelassen als Wohlthäter, da er euch vom Himmel Regengüsse gab und fruchtbare Zeiten, und erfüllte eure Herzen mit Nahrung und Freude.
೧೭ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
18 Und indem sie so sprachen, gelang es ihnen mit Mühe die Massen zu beschwichtigen, daß sie ihnen nicht opferten.
೧೮ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು.
19 Es kamen aber Juden herbei von Antiochia und Ikonium, und gewannen die Massen, warfen den Paulus mit Steinen und schleiften ihn zur Stadt hinaus, in der Meinung er sei tot.
೧೯ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
20 Da aber die Jünger ihn umringten, stand er auf und gieng in die Stadt hinein.
೨೦ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು.
21 Und am folgenden Tage zog er mit Barnabas aus nach Derbe. Und sie verkündeten dieser Stadt die frohe Botschaft, und nachdem sie zahlreiche Jünger gewonnen, kehrten sie zurück nach Lystra und Ikonium und Antiochia,
೨೧ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.
22 und befestigten die Seelen der Jünger, indem sie ihnen zusprachen, im Glauben zu beharren, und daß wir durch viele Drangsale müssen in das Reich Gottes eingehen.
೨೨ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.
23 Sie wählten ihnen aber in jeder Gemeinde Aelteste, und stellten dieselben mit Beten unter Fasten dem Herrn dar, an welchen sie glauben gelernt hatten.
೨೩ಇದಲ್ಲದೆ ಪ್ರತಿ ಕ್ರೈಸ್ತ ಸಭೆಗೂ ಹಿರಿಯರನ್ನು ನೇಮಿಸಿದರು. ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನಿಗೆ ಅವರನ್ನು ಒಪ್ಪಿಸಿದರು.
24 Und nachdem sie Pisidia durchzogen, giengen sie nach Pamphylia.
೨೪ತರುವಾಯ ಪಿಸಿದ್ಯ ಸೀಮೆಯನ್ನು ಹಾದು ಪಂಫುಲ್ಯ ಸೀಮೆಗೆ ಬಂದು,
25 Und nachdem sie das Wort in Perge verkündet hatten, giengen sie hinab nach Attalia,
೨೫ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.
26 und von da schifften sie nach Antiochia, von woher sie der Gnade Gottes waren anvertraut worden zu dem Werke, das sie vollbracht.
೨೬ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
27 Nach ihrer Ankunft aber beriefen sie die Gemeinde zusammen und berichteten, wie viel Gott mit ihnen gethan, und wie er den Heiden eine Glaubensthüre geöffnet.
೨೭ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
28 Sie verweilten aber eine geraume Zeit bei den Jüngern.
೨೮ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.