< Galater 4 >
1 Ich sage aber so: so lange der Erbe unmündig ist, ist kein Unterschied zwischen ihm und einem Knechte, obwohl ihm alles gehört,
೧ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.
2 sondern er ist unter Vormündern und Verwaltern bis zu der vom Vater verordneten Zeit.
೨ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.
3 So ist es mit uns: so lange wir unmündig waren, waren wir geknechtet unter die Elemente der Welt.
೩ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.
4 Als aber die Erfüllung der Zeit kam, da sandte Gott seinen Sohn, geboren vom Weibe, unter das Gesetz gethan,
೪ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
5 damit er die unter dem Gesetze loskaufe, damit wir die Sohnschaft empfiengen.
೫
6 Weil ihr aber Söhne seid, hat Gott den Geist seines Sohnes ausgesandt in unsere Herzen, der da ruft: Abba, Vater.
೬ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
7 So bist du nun nicht mehr Knecht, sondern Sohn. Wenn aber Sohn, dann auch Erbe durch Gott.
೭ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.
8 Aber damals, da ihr Gott nicht kanntet, habt ihr den Göttern gedient, die es dem Wesen nach nicht sind.
೮ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.
9 Jetzt, da ihr Gott kennt, oder vielmehr von ihm erkannt seid, wie möget ihr wieder umkehren zu den unvermögenden armseligen Elementen, denen ihr wieder von vorne zu dienen Lust habt?
೯ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
10 Tage haltet ihr und Monate, Festzeiten und Jahre?
೧೦ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.
11 Ich fürchte, ich möchte umsonst an euch gearbeitet haben.
೧೧ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.
12 Werdet wie ich; ich bin was ihr seid; Brüder, ich bitte euch. Einst habt ihr mir nichts Leids gethan.
೧೨ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.
13 Vielmehr ihr wisset es, wie ich aus Anlaß leiblicher Schwachheit das erstemal bei euch das Evangelium verkündete,
೧೩ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.
14 da habt ihr die Prüfung, die euch durch mein Fleisch zu Teil ward, nicht mit Geringschätzung und Abscheu erwidert, sondern ihr habt mich wie einen Boten Gottes aufgenommen, wie Christus Jesus.
೧೪ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
15 Wo ist nun euer Seligkeitsrühmen? kann ich euch doch bezeugen, daß ihr womöglich euch die Augen ausgerissen hättet, sie mir zu geben.
೧೫ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
16 So bin ich wohl euer Feind geworden, weil ich wahr bin gegen euch?
೧೬ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?
17 O sie eifern nicht im guten um euch; nein, sie möchten euch hinausbannen, damit ihr für sie eifert.
೧೭ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.
18 Der Eifer im guten aber soll allezeit lebendig sein; er soll es nicht blos sein, wenn ich bei euch bin.
೧೮ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.
19 Meine Kinder, um die ich abermals Geburtsschmerzen leide, bis Christus möge in euch Gestalt gewinnen:
೧೯ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.
20 ich möchte wohl jetzt bei euch sein, und es in neuen Tönen versuchen; ich weiß nicht, wie ich es bei euch angreifen muß.
೨೦ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!
21 Sagt mir doch, die ihr unter dem Gesetze sein wollt, hört ihr denn das Gesetz nicht?
೨೧ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.
22 Es steht ja geschrieben: daß Abraham zwei Söhne hatte, einen von der Magd, und einen von der Freien.
೨೨ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.
23 Aber der von der Magd war fleischmäßig gezeugt, der von der Freien aber durch die Verheißung.
೨೩ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.
24 Das ist allegorisch gesagt. Es bedeutet die zwei Bündnisse, das eine vom Berge Sinai, das zur Knechtschaft zeugt, das ist Hagar;
೨೪ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
25 Hagar bedeutet den Berg Sinai in Arabien. Das entspricht dem jetzigen Jerusalem; denn dieses ist in Knechtschaft samt seinen Kindern.
೨೫ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.
26 Das obere Jerusalem aber ist frei, das ist unsere Mutter.
೨೬ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.
27 Denn es steht geschrieben: Freue dich, du unfruchtbare, die nicht gebiert; brich in Jubel aus, die nicht kreist; denn die einsame hat viele Kinder, mehr als die, die einen Mann hat.
೨೭“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.
28 Ihr aber, Brüder, seid nach Isaak Kinder der Verheißung.
೨೮ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.
29 Aber wie damals der nach dem Fleisch Gezeugte den nach dem Geist Gezeugten verfolgte, so auch jetzt.
೨೯ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.
30 Aber was sagt die Schrift? Wirf die Magd hinaus und ihren Sohn, denn der Sohn der Magd soll nicht erben mit dem Sohne der Freien.
೩೦ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.
31 Also, Brüder, wir sind nicht der Magd Kinder, sondern der Freien.
೩೧ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.