< Lukas 20 >
1 Und es geschah eines Tages, da er das Volk lehrte im Tempel und das Evangelium verkündete, traten die Priester und die Schriftgelehrten mit den Aeltesten hinzu,
೧ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
2 und sprachen zu ihm: sage uns: in welcher Vollmacht du dies thust, oder wer es ist, der dir diese Vollmacht gegeben?
೨“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
3 Er antwortete aber und sagte zu ihnen: ich will euch auch ein Wort fragen; sagt mir:
೩ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
4 war die Taufe des Johannes vom Himmel oder von Menschen?
೪ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
5 Sie aber berechneten bei sich selbst: sagen wir: vom Himmel, so wird er sagen: warum habt ihr ihm nicht geglaubt?
೫ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
6 sagen wir aber: von Menschen, so wird uns das ganze Volk steinigen; denn es ist überzeugt, daß Johannes ein Prophet war.
೬ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
7 Und sie antworteten ihm: sie wissen nicht, woher.
೭ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
8 Und Jesus sagte zu ihnen: so sage ich euch auch nicht, in welcher Vollmacht ich dieses thue.
೮ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
9 Er fieng aber an zu dem Volke das folgende Gleichnis zu sagen: ein Mensch pflanzte einen Weinberg und verdingte ihn an Weingärtner und zog außer Lands auf lange Zeit.
೯ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
10 Und zur Zeit schickte er an die Weingärtner einen Knecht, damit sie ihm vom Ertrag des Weinberges gäben: die Weingärtner aber schlugen ihn und sandten ihn leer zurück.
೧೦ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11 Und er fuhr fort und schickte einen anderen Knecht; sie aber schlugen und beschimpften auch diesen und sandten ihn leer zurück.
೧೧ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
12 Und er fuhr fort und schickte einen dritten; sie aber verwundeten auch diesen und warfen ihn hinaus.
೧೨ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
13 Der Herr aber des Weinbergs sprach: was soll ich thun? ich will ihnen meinen geliebten Sohn schicken; vielleicht scheuen sie sich vor diesem.
೧೩ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
14 Als aber die Weingärtner ihn sahen, überlegten sie mit einander und sprachen: das ist der Erbe; lasset uns ihn töten, damit das Erbe uns zufällt.
೧೪ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
15 Und sie warfen ihn hinaus aus dem Weinberg und töteten ihn. Was wird nun der Herr des Weinbergs mit ihnen thun?
೧೫ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
16 Er wird kommen und diese Weingärtner umbringen, und den Weinberg anderen geben. Als sie es aber hörten, sagten sie: das sei ferne.
೧೬ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
17 Er aber sahe sie an und sagte: was ist es denn mit dem, was geschrieben steht: Der Stein, den die Bauleute verwarfen, ist zum Eckstein geworden?
೧೭ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
18 Jeder, der auf diesen Stein fällt, wird zerschellen; auf wen aber er fällt, den wird er zermalmen.
೧೮“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
19 Und die Schriftgelehrten und Hohenpriester trachteten Hand an ihn zu legen in derselben Stunde, - und fürchteten das Volk denn sie erkannten, daß er dieses Gleichnis auf sie gesagt.
೧೯ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
20 Und sie lauerten ihm auf und schickten Aufpasser, die sich als Gerechte anstellen mußten, zu ihm, ihn bei einem Worte zu fassen, so daß sie ihn der Obrigkeit und der Gewalt des Statthalters ausliefern könnten.
೨೦ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
21 Und sie befragten ihn: Meister, wir wissen, daß du recht redest und lehrst, und siehst nicht die Person an, sondern lehrst nach der Wahrheit den Weg Gottes.
೨೧ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
22 Ist es uns erlaubt, dem Kaiser Steuer zu geben oder nicht?
೨೨ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
23 Er aber, da er ihre Arglist wahrnahm, sagte zu ihnen:
೨೩ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
24 zeigt mir einen Denar. Wessen Bild und Aufschrift trägt er? Sie aber sagten: des Kaisers.
೨೪ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
25 Er aber sagte zu ihnen: folglich gebt dem Kaiser, was des Kaisers ist, und Gott was Gottes ist.
೨೫ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
26 Und sie vermochten ihn nicht bei dem Worte zu fassen angesichts des Volks, und verwunderten sich über die Antwort und schwiegen.
೨೬ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
27 Es kamen aber einige von den Sadducäern herbei, die da einwenden, es gebe keine Auferstehung, und fragten ihn:
೨೭ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
28 Meister, Moses hat uns vorgeschrieben, wenn einem sein Bruder stirbt, der eine Frau hat, und dabei kinderlos ist, so soll sein Bruder die Frau nehmen und seinem Bruder Samen erwecken.
೨೮“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
29 Nun waren sieben Brüder, und der erste nahm eine Frau und starb kinderlos;
೨೯ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
30 und der zweite nahm sie
೩೦ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
31 und der dritte, desgleichen alle sieben starben, ohne Kinder zu hinterlassen.
೩೧
32 Zuletzt starb auch die Frau.
೩೨ಕಡೆಯಲ್ಲಿ ಆ ಹೆಂಗಸೂ ಸತ್ತಳು.
33 Welchem von ihnen gehört nun die Frau in der Auferstehung? Haben sie doch alle sieben zur Frau gehabt.
೩೩ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
34 Und Jesus sagte zu ihnen: die Söhne dieser Welt freien und lassen sich freien. (aiōn )
೩೪ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn )
35 Die aber gewürdigt sind zu jener Welt zu gelangen und zu der Auferstehung von den Toten, freien weder noch lassen sie sich freien; (aiōn )
೩೫ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn )
36 können sie doch auch nicht mehr sterben, denn sie sind Engeln gleich und sind Gottes Söhne, da sie Söhne der Auferstehung sind.
೩೬ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
37 Daß aber die Toten auferweckt werden, hat auch Moses bei dem Dornbusch angedeutet, wie er den Herrn den Gott Abrahams und Gott Isaaks und Gott Jakobs nennt.
೩೭ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
38 Gott aber ist er nicht von Toten, sondern von Lebendigen, denn alle leben ihm.
೩೮ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
39 Es antworteten aber einige der Schriftgelehrten: Meister, du hast gut geredet.
೩೯ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
40 Denn sie wagten nicht mehr, ihn über etwas zu fragen.
೪೦ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
41 Er aber sprach zu ihnen: wie kann man sagen, daß der Christus Davids Sohn sei?
೪೧ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
42 David selbst sagt ja im Psalmbuch: Es sprach der Herr zu meinem Herrn: setze dich zu meiner Rechten,
೪೨“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
43 bis ich lege deine Feinde unter deine Füße.
೪೩
44 So nennt ihn also David Herr, wie soll er sein Sohn sein?
೪೪“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
45 Als aber das ganze Volk zuhörte, sagte er zu den Jüngern:
೪೫ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
46 hütet euch vor den Schriftgelehrten, welche gern im Talar herumgehen, und auf die Begrüßungen an den öffentlichen Plätzen aus sind, und auf die Vordersitze in den Synagogen und die ersten Plätze bei den Gastmählern,
೪೬“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
47 welche die Häuser der Witwen aussaugen, und verrichten lange Gebete zum Schein; die werden nur um so schwerer ins Gericht kommen.
೪೭ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.