< 2 Mose 29 >
1 Das ist's auch, das du ihnen tun sollst, daß sie mir zu Priestern geweihet werden: Nimm einen jungen Farren und zween Widder ohne Wandel,
೧ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.
2 ungesäuert Brot und ungesäuerte Kuchen, mit Öl gemenget, und ungesäuerte Fladen, mit Öl gesalbet. Von Weizenmehl sollst du solches alles machen;
೨ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,
3 und sollst es in einen Korb legen und in dem Korbe herzubringen samt dem Farren und den zween Widdern.
೩ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.
4 Und sollst Aaron und seine Söhne vor die Tür der Hütte des Stifts führen und mit Wasser waschen;
೪ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.
5 und die Kleider nehmen und Aaron anziehen den engen Rock und den Seidenrock und den Leibrock und das Schildlein zu dem Leibrock; und sollst ihn gürten außen auf den Leibrock
೫ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ,
6 und den Hut auf sein Haupt setzen und die heilige Krone an den Hut.
೬ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,
7 Und sollst nehmen das Salböl und auf sein Haupt schütten und ihn salben.
೭ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.
8 Und seine Söhne sollst du auch herzu führen und den engen Rock ihnen anziehen;
೮ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ
9 und beide Aaron und auch sie mit Gürteln gürten und ihnen die Hauben aufbinden, daß sie das Priestertum haben zu ewiger Weise. Und sollst Aaron und seinen Söhnen die Hände füllen
೯ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.
10 und den Farren herzuführen vor die Hütte des Stifts; und Aaron samt seinen Söhnen sollen ihre Hände auf des Farren Haupt legen.
೧೦ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.
11 Und sollst den Farren schlachten vor dem HERRN, vor der Tür der Hütte des Stifts.
೧೧ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.
12 Und sollst seines Bluts nehmen und auf des Altars Hörner tun mit deinem Finger und alles andere Blut an des Altars Boden schütten.
೧೨ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.
13 Und sollst alles Fett nehmen am Eingeweide und das Netz über der Leber und die zwo Nieren mit dem Fett, das drüber liegt, und sollst es auf dem Altar anzünden.
೧೩ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.
14 Aber des Farren Fleisch, Fell und Mist sollst du außen vor dem Lager mit Feuer verbrennen, denn es ist ein Sündopfer.
೧೪ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.
15 Aber den einen Widder sollst du nehmen, und Aaron samt seinen Söhnen sollen ihre Hände auf sein Haupt legen.
೧೫ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
16 Dann sollst du ihn schlachten und seines Bluts nehmen und auf den Altar sprengen ringsherum.
೧೬ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.
17 Aber den Widder sollst du zerlegen in Stücke und sein Eingeweide waschen und Schenkel; und sollst es auf seine Stücke und Haupt legen
೧೭ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.
18 und den ganzen Widder anzünden auf dem Altar; denn es ist dem HERRN ein Brandopfer, ein süßer Geruch, ein Feuer des HERRN.
೧೮ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
19 Den andern Widder aber sollst du nehmen und Aaron samt seinen Söhnen sollen ihre Hände auf sein Haupt legen.
೧೯ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
20 Und sollst ihn schlachten und seines Bluts nehmen und Aaron und seinen Söhnen auf den rechten Ohrknorpel tun und auf den Daumen ihrer rechten Hand und auf den großen Zehen ihres rechten Fußes; und sollst das Blut auf den Altar sprengen ringsherum.
೨೦ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.
21 Und sollst das Blut auf dem Altar nehmen und Salböl und Aaron und seine Kleider, seine Söhne und ihre Kleider besprengen, so wird er und seine Kleider, seine Söhne und ihre Kleider geweihet.
೨೧ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.
22 Danach sollst du nehmen das Fett von dem Widder, den Schwanz und das Fett am Eingeweide, das Netz über der Leber und die zwo Nieren mit dem Fett drüber und die rechte Schulter (denn es ist ein Widder der Fülle)
೨೨ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,
23 und ein Brot und einen Ölkuchen und einen Fladen aus dem Korbe des ungesäuerten Brots, der vor dem HERRN stehet.
೨೩ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,
24 Und lege es alles auf die Hände Aarons und seiner Söhne und webe es dem HERRN.
೨೪ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.
25 Danach nimm's von ihren Händen und zünde es an auf dem Altar zum Brandopfer, zum süßen Geruch vor dem HERRN; denn das ist ein Feuer des HERRN.
೨೫ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.
26 Und sollst die Brust nehmen vom Widder der Fülle Aarons und sollst es vor dem HERRN weben. Das soll dein Teil sein.
೨೬ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.
27 Und sollst also heiligen die Webebrust und die Hebeschulter, die gewebet und gehebet sind von dem Widder der Fülle Aarons und seiner Söhne.
೨೭ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.
28 Und soll Aarons und seiner Söhne sein ewiger Weise von den Kindern Israel; denn es ist ein Hebopfer. Und die Hebopfer sollen des HERRN sein von den Kindern Israel an ihren Dankopfern und Hebopfern.
೨೮ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.
29 Aber die heiligen Kleider Aarons sollen seine Söhne haben nach ihm, daß sie darinnen gesalbet und ihre Hände gefüllet werden.
೨೯ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.
30 Welcher unter seinen Söhnen an seiner Statt Priester wird, der soll sie sieben Tage anziehen, daß er gehe in die Hütte des Stifts, zu dienen im Heiligen.
೩೦ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.
31 Du sollst aber nehmen den Widder der Füllung und sein Fleisch an einem heiligen Ort kochen.
೩೧ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.
32 Und Aaron mit seinen Söhnen soll desselben Widders Fleisch essen samt dem Brot im Korbe vor der Tür der Hütte des Stifts.
೩೨ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.
33 Denn es ist Versöhnung damit geschehen, zu füllen ihre Hände, daß sie geweihet werden. Kein anderer soll es essen, denn es ist heilig.
೩೩ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.
34 Wo aber etwas überbleibet von dem Fleisch der Füllung und von dem Brot bis an den Morgen, das sollst du mit Feuer verbrennen und nicht essen lassen; denn es ist heilig.
೩೪ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.
35 Und sollst also mit Aaron und seinen Söhnen tun alles, was ich dir geboten habe. Sieben Tage sollst du ihre Hände füllen
೩೫ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
36 und täglich einen Farren zum Sündopfer schlachten zur Versöhnung. Und sollst den Altar entsündigen, wenn du ihn versöhnest, und sollst ihn salben, daß er geweihet werde.
೩೬ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
37 Sieben Tage sollst du den Altar versöhnen und ihn weihen, daß er sei ein Altar, das Allerheiligste. Wer den Altar anrühren will, der soll geweihet sein.
೩೭ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
38 Und das sollst du mit dem Altar tun. Zwei jährige Lämmer sollst du allewege des Tages drauf opfern,
೩೮ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
39 ein Lamm des Morgens, das andere zwischen Abends.
೩೯ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.
40 Und zu einem Lamm ein Zehnten Semmelmehls, gemenget mit einem Vierteil von einem Hin gestoßenen Öls und einem Vierteil vom Hin Weins zum Trankopfer.
೪೦ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.
41 Mit dem andern Lamm zwischen Abends sollst du tun wie mit dem Speisopfer und Trankopfer des Morgens, zu süßem Geruch, ein Feuer dem HERRN.
೪೧ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.
42 Das ist das tägliche Brandopfer bei euren Nachkommen vor der Tür der Hütte des Stifts, vor dem HERRN, da ich euch zeugen und mit dir reden will.
೪೨ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.
43 Daselbst will ich den Kindern Israel erkannt und geheiliget werden in meiner HERRLIchkeit.
೪೩ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.
44 Und will die Hütte des Stifts mit dem Altar heiligen und Aaron und seine Söhne mir zu Priestern weihen.
೪೪ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.
45 Und will unter den Kindern Israel wohnen und ihr Gott sein,
೪೫ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.
46 daß sie wissen sollen, ich sei der HERR, ihr Gott, der sie aus Ägyptenland führete, daß ich unter ihnen wohne, ich, der HERR, ihr Gott.
೪೬ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.