< 2 Korinther 9 >
1 Denn von solcher Steuer, die den Heiligen geschieht, ist mir nicht not, euch zu schreiben.
೧ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.
2 Denn ich weiß euren guten Willen, davon ich rühme bei denen aus Mazedonien und sage: Achaja ist schon voriges Jahr bereit gewesen; und euer Beispiel hat viele gereizt.
೨ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
3 Ich habe aber diese Brüder darum gesandt, daß nicht unser Rühmen von euch zunichte würde in dem Stücke, und daß ihr bereit seid, gleichwie ich von euch gesagt habe;
೩ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
4 auf daß nicht, so die aus Mazedonien mit mir kämen und euch unbereit fänden, wir (will nicht sagen: ihr) zu Schanden würden mit solchem Rühmen.
೪ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
5 So habe ich es nun für nötig angesehen, die Brüder zu ermahnen, daß sie voranzögen zu euch, fertigzumachen diesen zuvor verheißenen Segen, daß er bereit sei, also daß es sei ein Segen und nicht ein Geiz.
೫ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.
6 Ich meine aber das: Wer da kärglich sät, der wird auch kärglich ernten; und wer da sät im Segen, der wird auch ernten im Segen.
೬ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
7 Ein jeglicher nach seiner Willkür, nicht mit Unwillen oder aus Zwang; denn einen fröhlichen Geber hat Gott lieb.
೭ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
8 Gott aber kann machen, daß allerlei Gnade unter euch reichlich sei, daß ihr in allen Dingen volle Genüge habt und reich seid zu allerlei guten Werken;
೮ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
9 wie geschrieben steht: “Er hat ausgestreut und gegeben den Armen; seine Gerechtigkeit bleibt in Ewigkeit.” (aiōn )
೯“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.” (aiōn )
10 Der aber Samen reicht dem Säemann, der wird auch das Brot reichen zur Speise und wird vermehren euren Samen und wachsen lassen das Gewächs eurer Gerechtigkeit,
೧೦ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
11 daß ihr reich seid in allen Dingen mit aller Einfalt, welche wirkt durch uns Danksagung Gott.
೧೧ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
12 Denn die Handreichung dieser Steuer erfüllt nicht allein den Mangel der Heiligen, sondern ist auch überschwenglich darin, daß viele Gott danken für diesen unsern treuen Dienst
೧೨ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.
13 und preisen Gott über euer untertäniges Bekenntnis des Evangeliums Christi und über eure einfältige Steuer an sie und an alle,
೧೩ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.
14 indem auch sie nach euch verlangt im Gebet für euch um der überschwenglichen Gnade Gottes willen in euch.
೧೪ಇದಲ್ಲದೆ ನಿಮಗೋಸ್ಕರ ವಿಜ್ಞಾಪನೆ ಮಾಡಿ ದೇವರ ಅತಿಶಯವಾದ ಕೃಪೆಯು ನಿಮಗೆ ದೊರೆತಿರುವುದರಿಂದ ಅವರು ನಿಮ್ಮನ್ನು ನೋಡಲು ಬಯಸಿರುವರಲ್ಲದೆ ನಿಮಗಾಗಿ ಪ್ರಾರ್ಥಿಸುವರು.
15 Gott aber sei Dank für seine unaussprechliche Gabe!
೧೫ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.