< 1 Timotheus 3 >
1 Zutreffend ist das Wort: »Wer nach dem Vorsteheramt strebt, begehrt eine köstliche Wirksamkeit.«
ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
2 So muß denn der Vorsteher unbescholten sein, eines Weibes Mann, nüchtern, besonnen, ehrbar, gastfrei, ein tüchtiger Lehrer,
ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.
3 kein Trinker und kein Händelsucher, sondern freundlich, frei von Streitsucht und Geldgier,
ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.
4 ein Mann, der seinem eigenen Hause gut vorsteht, indem er seine Kinder in Zucht hält mit aller Würde;
ಪೂರ್ಣ ಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.
5 denn wenn jemand seinem eigenen Hause nicht vorzustehen weiß, wie sollte der für eine Gemeinde Gottes sorgen können?
ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು?
6 Er darf auch kein Neubekehrter sein, sonst könnte er leicht in Hochmut geraten und der Beurteilung des Verleumders anheimfallen.
ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.
7 Er muß sich aber auch bei denen, die draußen sind, eines guten Rufes erfreuen, damit er nicht in üble Nachrede gerät und in die Schlinge des Verleumders.
ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.
8 Ebenso müssen auch die Gehilfen ehrbare Männer sein, nicht doppelzüngig, nicht übermäßigem Weingenuß oder häßlicher Gewinnsucht ergeben;
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
9 Männer, die das Geheimnis des Glaubens in einem reinen Gewissen bewahren.
ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು.
10 Aber auch sie sollen zunächst einer Prüfung unterzogen werden und erst dann den Dienst ausüben, wenn sie unbescholten (erfunden) sind.
ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.
11 Ebenso müssen auch ihre Frauen ehrbar sein, nicht klatschsüchtig, nüchtern, zuverlässig in allen Beziehungen.
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
12 Die Gehilfen sollen jeder nur eines Weibes Mann sein und müssen die Leitung ihrer Kinder und ihres eigenen Hauswesens gut versehen;
ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
13 denn die, welche den Dienst als Gehilfen gut versehen haben, erwerben sich dadurch eine wertvolle Vertrauensstellung und das Recht, im Vertrauen auf Christus Jesus mit voller Zuversicht aufzutreten.
ಸಭಾ ಹಿರಿಯರಾಗಿ ಚೆನ್ನಾಗಿ ಸೇವೆ ಮಾಡಿದವರು ತಮಗೆ ಒಳ್ಳೆಯ ಸ್ಥಿತಿಯನ್ನೂ, ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸದಲ್ಲಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
14 Dies schreibe ich dir in der Hoffnung, recht bald zu dir kommen zu können;
ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
15 sollte sich mein Kommen jedoch verzögern, so sollst du dir klar darüber sein, wie man sich im Hause Gottes zu verhalten hat, das da ist die Gemeinde des lebendigen Gottes, die Säule und Grundfeste der Wahrheit.
ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.
16 Und etwas unbestreitbar Großes ist das Geheimnis der Gottseligkeit: »Er, der geoffenbart ist im Fleisch, als gerecht erwiesen im Geist, erschienen den Sendboten, verkündigt unter den Völkern, gläubig angenommen in der Welt, emporgehoben in die Herrlichkeit.«
ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”