< Johannes 9 >

1 Im Vorübergehen sah er alsdann einen Mann, der von Geburt an blind war.
ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
2 Da fragten ihn seine Jünger: »Rabbi, wer hat gesündigt, dieser Mann oder seine Eltern, daß er als Blinder geboren worden ist?«
ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
3 Jesus antwortete: »Weder dieser hat gesündigt noch seine Eltern; sondern (dazu ist es geschehen) damit das Wirken Gottes an ihm offenbar würde.
ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
4 Wir müssen die Werke dessen wirken, der mich gesandt hat, solange es Tag ist; es kommt die Nacht, in der niemand wirken kann.
ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
5 Solange ich in der Welt bin, bin ich das Licht der Welt.«
ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
6 Nach diesen Worten spie er auf den Boden, stellte mit dem Speichel einen Teig her, legte dem Blinden den Teig auf die Augen
ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
7 und sagte zu ihm: »Gehe hin, wasche dich im Teiche Siloah!« – Das heißt übersetzt ›Abgesandter‹. – Da ging er hin, wusch sich und kam sehend zurück.
ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8 Nun sagten die Nachbarn und die Leute, die ihn früher als Bettler gesehen hatten: »Ist dieser nicht der Mann, der früher dasaß und bettelte?«
ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
9 Die einen sagten: »Ja, er ist’s«; andere meinten: »Nein, er sieht ihm nur ähnlich«; er selbst aber sagte: »Ja, ich bin’s.«
ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
10 Da fragten sie ihn: »Auf welche Weise sind dir denn die Augen aufgetan worden?«
೧೦ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
11 Er antwortete: »Der Mann, der Jesus heißt, stellte einen Teig her, strich ihn mir auf die Augen und sagte zu mir: ›Gehe hin an den Siloahteich und wasche dich dort!‹ Da ging ich hin, wusch mich und konnte sehen.«
೧೧ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
12 Sie fragten ihn nun: »Wo ist der Mann?« Er antwortete: »Das weiß ich nicht.«
೧೨ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
13 Man führte ihn nun zu den Pharisäern, ihn, den ehemals Blinden.
೧೩ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
14 Es war aber (gerade) Sabbat an dem Tage gewesen, an dem Jesus den Teig hergestellt und ihm die Augen aufgetan hatte.
೧೪ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
15 Da fragten ihn nochmals auch die Pharisäer, wie er sehend geworden sei, und er antwortete ihnen: »Er hat mir einen Teig auf die Augen gelegt, ich habe mich dann gewaschen und kann nun sehen.«
೧೫ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16 Da sagten einige von den Pharisäern: »Der betreffende Mensch ist nicht von Gott her, weil er den Sabbat nicht hält«; andere dagegen meinten: »Wie könnte ein sündiger Mensch derartige Wunderzeichen tun?« So bestand eine Meinungsverschiedenheit unter ihnen.
೧೬ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
17 Sie fragten also den Blindgeborenen aufs neue: »Was sagst du denn von ihm? Dir hat er doch die Augen aufgetan.« Jener antwortete: »Er ist ein Prophet.«
೧೭ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18 Die Juden wollten nun von ihm nicht glauben, daß er blind gewesen und sehend geworden sei, bis sie schließlich die Eltern des Sehendgewordenen riefen
೧೮ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
19 und sie fragten: »Ist dies euer Sohn, der, wie ihr behauptet, blind geboren worden ist? Wie kommt es denn, daß er jetzt sehen kann?«
೧೯ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
20 Da antworteten seine Eltern: »Wir wissen, daß dies unser Sohn ist und daß er als Blinder geboren worden ist;
೨೦ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
21 wie es aber kommt, daß er jetzt sehen kann, das wissen wir nicht, und wer ihm die Augen geöffnet hat, wissen wir auch nicht. Befragt ihn selbst darüber: er ist alt genug; er wird selbst Auskunft über sich geben.«
೨೧ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
22 Das sagten seine Eltern, weil sie sich vor den Juden fürchteten; denn die Juden hatten bereits miteinander abgemacht, daß, wenn jemand Jesus als den Messias anerkenne, er in den Bann getan werden solle.
೨೨ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
23 Aus diesem Grunde sagten seine Eltern: »Er ist alt genug: fragt ihn selbst!«
೨೩“ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
24 So ließen sie denn den Mann, der blind gewesen war, zum zweitenmal rufen und sagten zu ihm: »Gib Gott die Ehre! Wir wissen, daß dieser Mensch ein Sünder ist.«
೨೪ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
25 Da antwortete jener: »Ob er ein Sünder ist, weiß ich nicht; eins aber weiß ich, daß ich blind gewesen bin und jetzt sehen kann.«
೨೫ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
26 Da fragten sie ihn noch einmal: »Was hat er mit dir vorgenommen? Auf welche Weise hat er dir die Augen aufgetan?«
೨೬ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
27 Er antwortete ihnen: »Ich habe es euch schon einmal gesagt, doch ihr habt nicht darauf gehört; warum wollt ihr es noch einmal hören? Wollt etwa auch ihr seine Jünger werden?«
೨೭ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
28 Da schmähten sie ihn und sagten: »Du bist ein Jünger von ihm, wir aber sind Jünger von Mose.
೨೮ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
29 Wir wissen, daß Gott zu Mose geredet hat; von diesem aber wissen wir nicht, woher er stammt.«
೨೯ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
30 Der Mann gab ihnen zur Antwort: »Darin liegt eben das Verwunderliche, daß ihr nicht wißt, woher er stammt, und mir hat er doch die Augen aufgetan.
೩೦ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
31 Wir wissen, daß Gott Sünder nicht erhört, sondern nur wenn jemand gottesfürchtig ist und seinen Willen tut, den erhört er.
೩೧ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
32 Von der Weltzeit an hat man noch nicht vernommen, daß jemand einem Blindgeborenen die Augen aufgetan hat. (aiōn g165)
೩೨ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ. (aiōn g165)
33 Wenn dieser Mann nicht von Gott her wäre, so vermöchte er nichts zu tun.«
೩೩ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
34 Sie antworteten ihm: »Du bist ganz in Sünden geboren, und du willst uns Lehren geben?« Und sie stießen ihn (aus der Gemeinde der Gesetzesfrommen) aus.
೩೪ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35 Jesus erfuhr von seiner Ausstoßung und sagte zu ihm, als er ihn antraf: »Glaubst du an den Sohn Gottes?«
೩೫ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
36 Jener gab zur Antwort: »Herr, wer ist denn das? Ich möchte gern an ihn glauben.«
೩೬ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
37 Jesus antwortete ihm: »Du hast ihn gesehen, und der mit dir redet, der ist es!«
೩೭ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
38 Jener sagte: »Ich glaube, Herr!« und warf sich vor ihm nieder.
೩೮ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
39 Nun sagte Jesus: »Zu einer Scheidung bin ich in diese Welt gekommen: die Nichtsehenden sollen sehen können und die Sehenden blind werden.«
೩೯ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
40 Dies hörten einige von den Pharisäern, die sich in seiner Nähe befanden, und fragten ihn: »Sind wir etwa auch blind?«
೪೦ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
41 Jesus antwortete ihnen: »Wäret ihr blind, so hättet ihr keine Sünde; nun ihr aber behauptet: ›Wir sind sehend‹, so bleibt eure Sünde!«
೪೧ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

< Johannes 9 >