< Offenbarung 12 >

1 Es erschien dann ein großes Zeichen im Himmel: ein Weib, das mit der Sonne umkleidet war; der Mond war unter ihren Füßen und ein Kranz von zwölf Sternen auf ihrem Haupt;
ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
2 sie war guter Hoffnung und schrie in ihren Geburtsschmerzen und Kindesnöten.
ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.
3 Dann erschien plötzlich noch ein anderes Zeichen im Himmel: ein großer, feuerroter Drache mit sieben Köpfen und zehn Hörnern und mit sieben Königskronen auf seinen Köpfen;
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.
4 sein Schweif fegte den dritten Teil der Sterne des Himmels weg und schleuderte sie auf die Erde. Der Drache stellte sich dann vor das Weib, die in Wehen lag, um ihr Kind sofort nach der Geburt zu verschlingen.
ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
5 Und sie gebar einen Sohn, einen Knaben, der »alle Völker mit eisernem Stabe weiden soll«, und ihr Kind wurde zu Gott und zu seinem Thron entrückt.
ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
6 Da floh das Weib in die Wüste, wo sie eine von Gott bereitete Stätte hat, um sich dort zwölfhundertsechzig Tage lang ernähren zu lassen.
ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.
7 Es erhob sich dann ein Kampf im Himmel: Michael und seine Engel kämpften mit dem Drachen; auch der Drache und seine Engel kämpften,
ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
8 doch gewannen sie den Sieg nicht, und ihres Bleibens war nicht länger im Himmel.
ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.
9 So wurde denn der große Drache, die alte Schlange, die da ›Teufel‹ und ›Satan‹ heißt, der Verführer des ganzen Erdkreises, auf die Erde hinabgestürzt, und seine Engel wurden mit ihm hinabgestürzt.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
10 Da hörte ich eine laute Stimme im Himmel rufen: »Jetzt ist das Heil, die Macht und die Königsherrschaft an unsern Gott gekommen und die Herrschergewalt an seinen Gesalbten! Denn hinabgestürzt ist der Ankläger unserer Brüder, der sie vor unserm Gott verklagt hat bei Tag und bei Nacht.
೧೦ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
11 Diese haben ihn um des Blutes des Lammes und um des Wortes ihres Zeugnisses willen überwunden und haben ihr Leben nicht geliebt bis zum Tode.
೧೧ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.
12 Darum freuet euch, ihr Himmel und die ihr in ihnen wohnt! Wehe aber der Erde und dem Meer! Denn der Teufel ist nun zu euch hinabgekommen und hegt gewaltige Wut, weil er weiß, daß seine Zeit nur noch kurz bemessen ist.«
೧೨ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.
13 Als nun der Drache sich auf die Erde hinabgestürzt sah, verfolgte er das Weib, das den Knaben geboren hatte.
೧೩ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
14 Da wurden dem Weibe die beiden Flügel des großen Adlers gegeben, damit sie in die Wüste an ihre Stätte flöge, wo sie fern vom Anblick der Schlange »eine Zeit und (zwei) Zeiten und eine halbe Zeit lang« ernährt wird.
೧೪ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
15 Da spie die Schlange aus ihrem Rachen Wasser hinter dem Weibe her wie einen Strom, um sie durch die Flut wegzuschwemmen;
೧೫ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.
16 doch die Erde kam dem Weibe zu Hilfe, indem sie ihren Mund auftat und den Strom verschluckte, den der Drache aus seinem Rachen ausgespien hatte.
೧೬ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.
17 Da geriet der Drache in Wut gegen das Weib und ging hin, um Krieg mit den übrigen ihres Samens zu führen, (nämlich mit denen) die Gottes Gebote beobachten und das Zeugnis Jesu haben.
೧೭ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,

< Offenbarung 12 >