< Markus 9 >
1 Und er sprach zu ihnen: Wahrlich, ich sage euch, es sind etliche der hier Stehenden, die den Tod nicht schmecken werden, bis sie sehen die Gottesherrschaft gekommen in Kraft. -
೧ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
2 Und nach sechs Tagen nimmt Jesus mit sich Petrus und Jakobus und Johannes, und führt sie auf einen hohen Berg, besonders allein, und er ward vor ihnen verwandelt.
೨ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
3 Und seine Kleider wurden glänzend und sehr weiß, wie der Schnee, daß kein Bleicher auf Erden sie so weiß machen kann.
೩ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
4 Und es erschien ihnen Elias, mit Mose, und sie beredeten sich mit Jesus.
೪ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
5 Und Petrus antwortete, und spricht zu Jesus: Rabbi, es ist gut, daß wir hier sind; und wir wollen drei Hütten machen; dir eine, und Moses eine, und Elias eine.
೫ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
6 Denn er wußte nicht, was er redete, denn sie waren bestürzt.
೬ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
7 Und es kam eine Wolke, die überschattete sie, und es kam eine Stimme aus der Wolke: Dieser ist mein geliebter Sohn; ihn höret!
೭ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
8 Und auf einmal, da sie umherblickten, sahen sie niemand mehr, außer Jesus allein bei ihnen.
೮ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
9 Und als sie vom Berge herabstiegen, verbot er ihnen, daß sie niemand erzählen sollten, was sie gesehen, außer dann, wann der Menschensohn von den Toten auferstanden wäre.
೯ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
10 Und sie behielten das Wort bei sich, und befrugen sich untereinander: Was ist doch "das Auferstehen von den Toten?"
೧೦ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
11 Und frugen ihn, und sprachen: Wie sagen doch die Schriftgelehrten, daß Elias zuvor kommen müsse?
೧೧ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
12 Er aber antwortete, und sprach zu ihnen: Elias kommt zuerst, und stellt alles wieder her; und wie steht geschrieben von dem Menschensohn? Daß er viel leiden und für nichts geachtet werden muß.
೧೨ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
13 Aber ich sage euch: Elias ist auch gekommen, und sie haben ihm getan, was sie wollten, so wie von ihm geschrieben steht.
೧೩ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
14 Und er kam zu seinen Jüngern, und sah viel Volk um sie, und die Schriftgelehrten, die sich mit ihnen stritten.
೧೪ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
15 Und alsbald, da alles Volk ihn sah, waren sie erstaunt, liefen hinzu, und grüßten ihn.
೧೫ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
16 Und er frug sie: Was streitet ihr mit ihnen?
೧೬ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
17 Und es antwortete einer aus dem Volkshaufen: Lehrer, ich habe meinen Sohn zu dir gebracht, der einen sprachlosen Geist hat.
೧೭ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
18 Und wo er ihn packt, reißt er ihn; und er schäumt, und knirscht die Zähne, und verdorret. Und ich habe deinen Jüngern gesagt, daß sie ihn austreiben, und sie vermochten´s nicht.
೧೮ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
19 Er aber antwortete ihnen, und sagt: O ungläubiges Geschlecht! wie lange soll ich bei euch sein? wie lange soll ich euch ertragen? Bringet ihn zu mir!
೧೯ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
20 Und sie brachten ihn zu ihm. Und als er ihn sah, riß ihn der Geist alsbald, und er fiel auf die Erde, und wälzte sich, und schäumte.
೨೦ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
21 Und er frug seinem Vater: Wie lange Zeit ist es, daß ihm dies widerfahren ist? Er aber sprach: Von Kind auf.
೨೧ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
22 Und oftmals hat er ihn ins Feuer und ins Wasser geworfen, daß er ihn umbrächte. Kannst du aber etwas, so erbarme dich unser, und hilf uns.
೨೨ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
23 Jesus aber sprach zu ihm: Das (ist die Frage), ob du glauben kannst? Alles ist möglich für den, der da glaubt.
೨೩ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
24 Und alsbald schrie der Vater des Kindes mit Tränen, und sprach: Ich glaube, hilf meinem Unglauben!
೨೪ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
25 Da nun Jesus sah, daß das Volk zulief, bedrohte er den unsauberen Geist, und spricht zu ihm: Sprachloser und stummer Geist! ich gebiete dir, daß du ausfahrest von ihm, und nicht mehr in ihn fahrest!
೨೫ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
26 Da schrie er, und riß ihn sehr, und fuhr aus, und er wurde wie tot, so daß viele sagten: er ist gestorben.
೨೬ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
27 Jesus aber ergriff ihn bei der Hand, und richtete ihn auf, und er stund auf.
೨೭ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
28 Und da er heim kam, frugen ihn seine Jünger besonders: Warum konnten wir ihn nicht austreiben?
೨೮ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
29 Und er sprach zu ihnen: Diese Art kann durch nichts sonst ausfahren, als durch Gebet.
೨೯ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
30 Und sie gingen von dannen hinweg, und zogen durch Galiläa, und er wollte nicht, daß es jemand wisse.
೩೦ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
31 Denn er lehrte seine Jünger, und sprach zu ihnen: Der Menschensohn wird überliefert werden in die Hände der Menschen, und sie werden ihn töten, und wenn er getötet ist, wird er am dritten Tage auferstehen.
೩೧ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
32 Sie aber verstanden die Rede nicht und fürchteten sich ihn zu fragen.
೩೨ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
33 Und er kam nach Kapernaum, und da sie zu Hause waren, frug er sie: Was habt ihr auf dem Weg miteinander gestritten?
೩೩ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
34 Sie aber schwiegen, denn sie hatten untereinander auf dem Weg verhandelt, wer der Größere wäre.
೩೪ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
35 Und er setzte sich, rief die Zwölfe, und spricht zu ihnen: Wenn jemand der Erste sein will, der sei der Letzte von allen und aller Diener.
೩೫ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
36 Und er nahm ein Kindlein, und stellte es in ihre Mitte, und indem er es in seine Arme schloß, sprach er zu ihnen:
೩೬ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
37 Wer ein solches Kindlein aufnimmt in meinem Namen, der nimmt mich auf; und wer mich aufnimmt, der nimmt nicht mich auf, sondern den, der mich gesandt hat.
೩೭“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
38 Johannes aber antwortete ihm, und sprach: Lehrer, wir sahen jemanden in deinem Namen Dämonen ausgetrieben, der uns nicht nachfolgt.
೩೮ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
39 Jesus aber sprach: Wehret ihm nicht! denn es ist niemand der eine Krafttat tut in meinem Namen, und könnte bald übel von mir reden.
೩೯ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
40 Denn wer nicht wider uns ist, der ist für uns.
೪೦ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
41 Denn wer euch einen Becher Wasser zu trinken gibt in meinem Namen, weil ihr des Messias seid, wahrlich, ich sage euch, daß er seinen Lohn nicht verlieren wird.
೪೧ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
42 Und wer Anstoß zum Falle eines der Kleinen gibt, die an mich glauben, dem wäre es viel besser, wenn ein Mühlstein um seinen Hals gehängt, und er in das Meer geworfen würde.
೪೨ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
43 Und wenn diene Hand dir Anstoß gibt, so haue sie ab, Es ist dir besser, verstümmelt ins Leben einzugehen, als mit zwei Händen ins Tal Hinnom abzugehen, in das unausgelöschte Feuer. (Geenna )
೪೩ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
45 Und wenn dein Fuß dir Anstoß gibt, so haue ihn ab; Es ist dir besser lahm ins Leben einzugehen, als mit zwei Füßen ins Tal Hinnom geworfen zu werden, in das unausgelöschte Feuer. (Geenna )
೪೫ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
47 Und wenn dein Auge dir Anstoß gibt, so reiß es aus; es ist dir besser einäugig in die Gottesherrschaft einzugehen, als mit zwei Augen ins Tal Hinnom geworfen zu werden, (Geenna )
೪೭ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna )
48 Wo ihr Wurm kein Ende nimmt und das Feuer nicht ausgelöscht wird.
೪೮ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
49 Denn jeder wird mit Feuer gesalzen werden, und jedes Opfer wird mit Salz gesalzen werden.
೪೯“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
50 Gut ist das Salz; wenn aber das Salz salzlos wird, womit wollt ihr es würzen? Habt Salz in euch, und habt Frieden untereinander!
೫೦ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”