< Apostelgeschichte 4 >

1 Während sie aber zum Volk redeten, traten die Priester und der Hauptmann des Tempels und die Sadduzäer auf sie zu.
ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.
2 Die verdroß es, daß sie das Volk lehrten und in Jesus die Auferstehung von den Toten verkündigten.
ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.
3 Und sie legten Hand an sie und setzten sie ins Gefängnis bis zum folgenden Morgen, denn es war schon Abend.
ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.
4 Viele aber von denen, die das Wort gehört hatten, wurden gläubig. Und die Zahl der Männer stieg auf etwa fünftausend.
ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.
5 Es geschah aber am folgenden Morgen, daß sich ihre Obersten und Ältesten und Schriftgelehrten in Jerusalem versammelten,
ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.
6 auch Hannas, der Hohepriester, und Kajaphas und Johannes und Alexander und alle, die aus hohepriesterlichem Geschlechte waren.
ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು.
7 Und sie stellten sie in ihre Mitte und fragten sie: Aus welcher Macht oder in welchem Namen habt ihr das getan?
ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.
8 Da sprach Petrus, vom heiligen Geist erfüllt, zu ihnen: Ihr Obersten des Volkes und ihr Ältesten von Israel,
ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ!
9 wenn wir heute wegen der Wohltat an einem kranken Menschen verhört [und gefragt] werden, durch wen ihm geholfen worden sei,
ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.
10 so sei euch allen und dem ganzen Volke Israel kund, daß durch den Namen Jesu Christi, des Nazareners, den ihr gekreuzigt, den Gott von den Toten auferweckt hat, daß durch ihn dieser gesund vor euch steht.
ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.
11 Das ist der Stein, der von euch, den Bauleuten, verschmäht wurde, der zum Eckstein geworden ist.
ಪವಿತ್ರ ವೇದದಲ್ಲಿ, “‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.
12 Und es ist in keinem andern das Heil; denn es ist auch kein anderer Name unter dem Himmel den Menschen gegeben, in welchem wir sollen gerettet werden!
ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.
13 Als sie aber die Freimütigkeit des Petrus und Johannes sahen und erfuhren, daß sie ungelehrte Leute und Laien seien, verwunderten sie sich und erkannten sie, daß sie mit Jesus gewesen waren.
ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.
14 Da sie aber den Menschen bei ihnen stehen sahen, der geheilt worden war, konnten sie nichts dagegen sagen.
ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.
15 Da hießen sie sie aus dem Hohen Rate abtreten und beratschlagten miteinander und sprachen:
ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,
16 Was wollen wir diesen Menschen tun? Denn daß ein offenkundiges Zeichen durch sie geschehen ist, das ist allen Bewohnern von Jerusalem bekannt, und wir können es nicht leugnen.
“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.
17 Aber damit es sich nicht weiter unter dem Volk verbreite, wollen wir ihnen ernstlich drohen, damit sie hinfort mit keinem Menschen mehr von diesem Namen reden.
ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು.
18 Und sie ließen sie rufen und geboten ihnen, durchaus nicht mehr in dem Namen Jesu zu reden noch zu lehren.
ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು.
19 Petrus aber und Johannes antworteten ihnen und sprachen: Entscheidet ihr selbst, ob es vor Gott recht ist, euch mehr zu gehorchen als Gott;
ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.
20 denn es ist uns unmöglich, nicht von dem zu reden, was wir gesehen und gehört haben.
ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.
21 Sie aber drohten ihnen noch weiter und ließen sie frei, weil sie keinen Weg fanden, sie zu bestrafen, wegen des Volkes; denn alle priesen Gott über dem, was geschehen war;
ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.
22 denn der Mensch war über vierzig Jahre alt, an welchem dieses Zeichen der Heilung geschehen war.
ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.
23 Als sie aber freigelassen waren, kamen sie zu den Ihrigen und verkündigten alles, was die Hohenpriester und die Ältesten zu ihnen gesagt hatten.
ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.
24 Sie aber, da sie es hörten, erhoben einmütig ihre Stimme zu Gott und sprachen: Herr, du bist der Gott, der den Himmel und die Erde und das Meer und alles, was darinnen ist, gemacht hat;
ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.
25 der du durch den Mund unsres Vaters David, deines Knechtes, gesagt hast: «Warum toben die Heiden und nehmen sich die Völker vor, was umsonst ist?
ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?
26 Die Könige der Erde treten zusammen, und die Fürsten versammeln sich miteinander wider den Herrn und wider seinen Gesalbten.»
ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’
27 Ja wahrlich, es haben sich versammelt in dieser Stadt wider deinen heiligen Sohn Jesus, welchen du gesalbt hast, Herodes und Pontius Pilatus mit den Heiden und dem Volke Israel,
ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.
28 zu tun, was deine Hand und dein Rat zuvor beschlossen hatte, daß es geschehen sollte.
ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.
29 Und nun, Herr, siehe an ihre Drohungen und verleihe deinen Knechten, mit aller Freimütigkeit dein Wort zu reden;
ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.
30 indem du deine Hand ausstreckst zur Heilung, und daß Zeichen und Wunder geschehen durch den Namen deines heiligen Sohnes Jesus!
ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”
31 Und als sie gebetet hatten, erbebte die Stätte, wo sie versammelt waren, und sie wurden alle mit dem heiligen Geist erfüllt und redeten das Wort Gottes mit Freimütigkeit.
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
32 Die Menge der Gläubigen aber war ein Herz und eine Seele; und auch nicht einer sagte, daß etwas von seinen Gütern sein eigen sei, sondern alles war ihnen gemeinsam.
ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.
33 Und mit großer Kraft legten die Apostel das Zeugnis ab von der Auferstehung des Herrn Jesus, und große Gnade war auf ihnen allen.
ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.
34 Es litt auch niemand unter ihnen Mangel; denn die, welche Besitzer von Äckern oder Häusern waren, verkauften sie und brachten den Erlös des Verkauften
ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,
35 und legten ihn den Aposteln zu Füßen; und man teilte einem jeglichen aus, je nachdem einer es bedurfte.
ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.
36 Joses aber, von den Aposteln zubenannt Barnabas (das heißt übersetzt: «Sohn des Trostes»), ein Levit, aus Cypern gebürtig,
ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.
37 der einen Acker hatte, verkaufte ihn, brachte das Geld und legte es den Aposteln zu Füßen.
ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

< Apostelgeschichte 4 >