< Jesaja 48 >
1 Höre dieses, du Haus Jakob, die ihr mit dem Namen Israel benannt werdet und aus den Wassern Judas entsprungen seid; die ihr bei dem Namen des HERRN schwöret und euch zu dem Gott Israels bekennet, aber nicht in Wahrheit noch in Gerechtigkeit!
೧ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
2 Denn sie nennen sich nach der heiligen Stadt und verlassen sich auf den Gott Israels, dessen Name HERR der Heerscharen ist.
೨ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.
3 Das Frühere habe ich vorlängst verkündigt; aus meinem Munde ist es hervorgegangen, und ich habe es kundgetan. Plötzlich habe ich es ausgeführt, und es ist eingetroffen.
೩ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.
4 Weil ich wußte, daß du hart bist und dein Nacken eine eiserne Sehne und deine Stirne ehern ist,
೪ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.
5 so habe ich es dir damals angekündigt; ehe es geschah, habe ich es dir zu wissen getan, daß du nicht sagen könntest: Mein Götze hat es gemacht, und mein geschnitztes oder gegossenes Bild hat es befohlen.
೫ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು.
6 Du hast alles gehört, was du nun siehst. Wollt ihr es nun nicht eingestehen? Von nun an lasse ich dich Neues hören und Verborgenes, was du nicht wußtest.
೬ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
7 Jetzt erst ist es geschaffen worden und nicht vorlängst; und vor dem heutigen Tag hast du nichts davon gehört, damit du nicht sagen könntest: Siehe, ich habe es gewußt!
೭ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.
8 Du hast es weder gehört noch gewußt, noch war damals dein Ohr geöffnet; denn ich wußte, daß du gar treulos bist und von Mutterleib an ein Übertreter genannt wurdest.
೮ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
9 Um meines Namens willen bin ich langmütig, und um meiner Ehre willen halte ich an mich dir zugute, um dich nicht auszurotten.
೯ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
10 Siehe, ich habe dich geläutert, aber nicht als Silber. Ich habe dich geprüft im Ofen des Elends.
೧೦ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
11 Um meinetwillen, um meinetwillen tue ich's! Denn wie würde sonst gelästert! Und ich will meine Ehre keinem andern geben.
೧೧ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.
12 Höre auf mich, Jakob, und du Israel, mein Berufener! Ich bin derselbe! Ich bin der Erste, und ich bin auch der Letzte!
೧೨ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ
13 Ja, meine Hand hat die Erde gegründet und meine Rechte die Himmel ausgespannt. Sobald ich ihnen rief, standen sie allzumal da.
೧೩ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.
14 Versammelt euch, ihr alle, und höret! Welcher unter ihnen hat solches verkündigt: Er, den der HERR liebhat, der wird seinen Willen an Babel vollstrecken und die Chaldäer seinen Arm fühlen lassen?
೧೪ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.
15 Ich, ich habe es gesagt, ich habe ihn auch berufen und ihn hergebracht, und sein Weg wird gelingen.
೧೫ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
16 Nahet zu mir und höret solches! Nicht im Verborgenen habe ich von Anfang an geredet. Seitdem es geschehen ist, bin ich da; und nun hat mich Gott, der HERR, und sein Geist gesandt.
೧೬ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
17 So spricht der HERR, dein Erlöser, der Heilige Israels: Ich bin der HERR, dein Gott, der dich lehrt, was nützlich ist, und dich den Weg leitet, den du wandeln sollst.
೧೭ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.
18 O daß du auf meine Gebote merktest! So würde dein Friede sein wie ein Wasserstrom und deine Gerechtigkeit wie Meereswellen.
೧೮ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
19 Dein Same würde sein wie der Sand und die Sprößlinge deines Leibes wie seine Körnlein. Sein Name würde vor meinem Angesicht weder ausgerottet noch vertilgt.
೧೯ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.
20 Gehet aus von Babel, fliehet von den Chaldäern! Verkündiget es mit jubelnder Stimme! Lasset solches hören! Breitet es aus bis an der Welt Ende und saget: Der HERR hat seinen Knecht Jakob erlöst!
೨೦ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.
21 Sie litten keinen Durst, als er sie durch die Wüsten führte, Wasser ließ er ihnen aus den Felsen rinnen; er spaltete den Fels, da floß Wasser heraus!
೨೧ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
22 Keinen Frieden, spricht der HERR, gibt es für die Gottlosen!
೨೨“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.