< Jeremia 39 >
1 Und es geschah, daß Jerusalem eingenommen wurde. Im neunten Jahre Zedekias, des Königs von Juda, im zehnten Monat, war der babylonische König Nebukadnezar mit seinem ganzen Heer gen Jerusalem gekommen und hatte die Belagerung begonnen;
೧ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
2 und im elften Jahre Zedekias, am neunten Tage des vierten Monats, brach man in die Stadt ein.
೨ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
3 Da kamen alle Fürsten des Königs von Babel und setzten sich beim mittlern Tore fest, nämlich Nergal-Sarezer, Samgar-Nebo, Sarsekim, der Oberkämmerer, Nergal-Sarezer, der Obermagier, samt allen übrigen Fürsten des babylonischen Königs.
೩ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
4 Als aber Zedekia, der König von Juda, und alle Kriegsleute sie sahen, flohen sie und verließen die Stadt bei Nacht auf dem Wege nach dem Königsgarten, durch das Tor zwischen den beiden Mauern, und wandten sich der Jordanebene zu.
೪ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
5 Aber das Heer der Chaldäer jagte ihnen nach und holte Zedekia in der Ebene von Jericho ein; und sie ergriffen ihn und führten ihn zu Nebukadnezar, dem König von Babel, nach Ribla im Lande Hamat; der sprach das Urteil über ihn.
೫ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
6 Und der König von Babel ließ die Söhne Zedekias in Ribla vor seinen Augen niedermetzeln, dazu den ganzen jüdischen Adel;
೬ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
7 Zedekia aber ließ er die Augen blenden und ihn mit zwei ehernen Ketten binden, um ihn nach Babel zu bringen.
೭ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
8 Und die Chaldäer verbrannten den königlichen Palast und die Häuser des Volkes mit Feuer und rissen die Mauern Jerusalems nieder.
೮ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
9 Den Rest des Volkes aber, sowohl die, welche in der Stadt übriggeblieben, als auch die Überläufer, welche zu den Chaldäern übergegangen waren, den Rest des übrigen Volkes, führte Nebusaradan, der Oberste der Leibwache, gefangen nach Babel.
೯ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
10 Von dem geringen Volk aber, das gar nichts besaß, ließ Nebusaradan, der Oberste der Leibwache, etliche im Lande Juda zurück und gab ihnen Weinberge und Äcker zu jener Zeit.
೧೦ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
11 Und Nebukadnezar, der König von Babel, erließ in betreff Jeremias einen Befehl zu Handen Nebusaradans, des Obersten der Leibwache, und sprach:
೧೧ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
12 Nimm ihn und trage Sorge für ihn und tue ihm ja nichts zuleide, sondern verfahre mit ihm so, wie er dir sagen wird.
೧೨“ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
13 Da ließen Nebusaradan, der Oberste der Leibwache, und Nebuschasban, der Oberkämmerer, und Nergal-Sarezer, der Obermagier, und alle Obersten des babylonischen Königs den Jeremia aus dem Wachthofe holen;
೧೩ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
14 und sie übergaben ihn Gedalja, dem Sohne Saphans, damit er ihn nach Hause bringe; und er wohnte unter dem Volk.
೧೪ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
15 Zu Jeremia aber war das Wort des HERRN ergangen, als er noch im Wachthof eingeschlossen war:
೧೫ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
16 Gehe und sage zu dem Mohren Ebed-Melech: So spricht der HERR der Heerscharen, der Gott Israels: Siehe, ich lasse meine Worte über diese Stadt kommen zum Unglück und nicht zum Guten, und sie werden an jenem Tage vor deinen Augen in Erfüllung gehen;
೧೬“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
17 aber dich will ich an jenem Tage erretten, spricht der HERR, und du sollst nicht den Leuten in die Hände fallen, vor welchen du dich fürchtest,
೧೭ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
18 sondern ich will dich entrinnen lassen, und du sollst nicht durchs Schwert fallen, sondern deine Seele als Beute davontragen, weil du mir vertraut hast, spricht der HERR!
೧೮ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.