< Lukas 9 >
1 Er rief aber die Zwölf zusammen und gab ihnen Kraft und Vollmacht über alle Dämonen und um Krankheiten zu heilen;
೧ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,
2 und er sandte sie aus, das Reich Gottes zu predigen, und zu heilen.
೨ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
3 Und er sprach zu ihnen: Nehmet nichts auf den Weg, weder Stab noch Tasche, noch Brot noch Geld; auch soll einer nicht zwei Anzüge haben.
೩ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
4 Und wo ihr in ein Haus eintretet, da bleibet, und von da ziehet weiter.
೪ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.
5 Und wo man euch nicht aufnehmen wird, da gehet fort aus jener Stadt und schüttelt auch den Staub von euren Füßen, zum Zeugnis wider sie.
೫ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.
6 Und sie gingen aus und durchzogen die Dörfer, predigten das Evangelium und heilten allenthalben.
೬ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.
7 Es hörte aber der Vierfürst Herodes alles, was geschah; und er geriet in Verlegenheit, weil von etlichen gesagt wurde, Johannes sei von den Toten auferstanden,
೭ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ,
8 von etlichen aber, Elia sei erschienen, und von andern, einer der alten Propheten sei auferstanden.
೮ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.
9 Herodes aber sprach: Johannes habe ich enthauptet; wer ist aber der, von welchem ich solches höre? Und er verlangte, ihn zu sehen.
೯ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.
10 Und die Apostel kehrten zurück und erzählten ihm alles, was sie getan hatten. Und er nahm sie zu sich und zog sich zurück an einen einsamen Ort bei der Stadt, die Bethsaida heißt.
೧೦ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.
11 Als aber das Volk es erfuhr, folgten sie ihm nach; und er nahm sie auf und redete zu ihnen vom Reiche Gottes, und die der Heilung bedurften, machte er gesund.
೧೧ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
12 Aber der Tag fing an, sich zu neigen; und die Zwölf traten herzu und sprachen zu ihm: Entlaß das Volk, damit sie in die umliegenden Dörfer und Höfe gehen und einkehren und Speise finden; denn hier sind wir an einem öden Ort.
೧೨ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,
13 Er aber sprach zu ihnen: Gebt ihr ihnen zu essen! Sie sprachen: Wir haben nicht mehr als fünf Brote und zwei Fische; oder sollen wir hingehen und für dieses ganze Volk Speise kaufen?
೧೩ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.
14 Denn es waren etwa fünftausend Männer. Er sprach aber zu seinen Jüngern: Machet, daß sie sich gruppenweise setzen, je fünfzig und fünfzig.
೧೪ಅಲ್ಲಿ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿಯಿದ್ದರು. ಆಗ ಯೇಸುವು ತನ್ನ ಶಿಷ್ಯರಿಗೆ, “ಇವರನ್ನು ಒಂದೊಂದು ಪಂಕ್ತಿಗೆ ಹೆಚ್ಚುಕಡಿಮೆ ಐವತ್ತೈವತ್ತರಂತೆ ಕೂರಿಸಿರಿ” ಎಂದು ಹೇಳಲು,
15 Und sie taten so und ließen alle sich setzen.
೧೫ಅವರು ಅದರಂತೆ ಮಾಡಿ ಎಲ್ಲರನ್ನೂ ಕುಳ್ಳಿರಿಸಿದರು.
16 Und er nahm die fünf Brote und die zwei Fische, blickte zum Himmel auf und segnete sie, brach und gab sie den Jüngern, damit sie sie dem Volke vorlegten.
೧೬ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.
17 Und sie aßen und wurden alle satt; und es wurde aufgehoben, was ihnen von den Stücken übrigblieb, zwölf Körbe [voll].
೧೭ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
18 Und es begab sich, als er in der Einsamkeit betete und die Jünger bei ihm waren, fragte er sie und sprach: Für wen halten mich die Leute?
೧೮ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,
19 Sie antworteten und sprachen: Für Johannes den Täufer; andere für Elia; andere aber [sagen], einer der alten Propheten sei auferstanden.
೧೯ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.
20 Da sprach er zu ihnen: Ihr aber, für wen haltet ihr mich? Da antwortete Petrus und sprach: Für den Gesalbten Gottes!
೨೦ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
21 Er aber gebot ihnen ernstlich, solches niemand zu sagen,
೨೧ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.
22 indem er sprach: Des Menschen Sohn muß viel leiden und verworfen werden von den Ältesten und Hohenpriestern und Schriftgelehrten und getötet werden und am dritten Tage auferstehen.
೨೨ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
23 Er sprach aber zu allen: Will jemand mir nachkommen, so verleugne er sich selbst und nehme sein Kreuz auf sich täglich und folge mir nach.
೨೩ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
24 Denn wer seine Seele retten will, der wird sie verlieren; wer aber seine Seele verliert um meinetwillen, der wird sie retten.
೨೪ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
25 Denn was nützt es dem Menschen, wenn er die ganze Welt gewinnt, aber sich selbst verliert oder schädigt?
೨೫ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
26 Denn wer sich meiner und meiner Worte schämt, dessen wird sich auch des Menschen Sohn schämen, wenn er kommen wird in seiner und des Vaters und der heiligen Engel Herrlichkeit.
೨೬ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
27 Ich sage euch aber in Wahrheit, es sind etliche unter denen, die hier stehen, welche den Tod nicht schmecken werden, bis sie das Reich Gottes sehen.
೨೭ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
28 Es begab sich aber ungefähr acht Tage nach dieser Rede, daß er Petrus und Johannes und Jakobus zu sich nahm und auf den Berg stieg, um zu beten.
೨೮ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.
29 Und während er betete, wurde das Aussehen seines Angesichts anders und sein Kleid strahlend weiß.
೨೯ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.
30 Und siehe, zwei Männer redeten mit ihm, das waren Mose und Elia;
೩೦ಇದಲ್ಲದೆ ಇಬ್ಬರು ಪುರುಷರು ಆತನ ಸಂಗಡ ಮಾತನಾಡುತ್ತಿದ್ದರು. ಅವರು ಯಾರೆಂದರೆ ಮೋಶೆಯೂ ಎಲೀಯನೂ.
31 die erschienen in Herrlichkeit und redeten von seinem Ausgang, den er in Jerusalem erfüllen sollte.
೩೧ಅವರು ವೈಭವದೊಡನೆ ಕಾಣಿಸಿಕೊಂಡು ಯೆರೂಸಲೇಮಿನಲ್ಲಿ ಆತನು ಹೊಂದಬೇಕಾಗಿದ್ದ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32 Petrus aber und seine Gefährten waren vom Schlaf übermannt. Als sie aber erwachten, sahen sie seine Herrlichkeit und die zwei Männer, die bei ihm standen.
೩೨ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
33 Und es begab sich, als diese von ihm schieden, sprach Petrus zu Jesus: Meister, es ist gut, daß wir hier sind; und wir wollen drei Hütten machen, dir eine, Mose eine und Elia eine. Und er wußte nicht, was er sagte.
೩೩ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
34 Während er aber solches redete, kam eine Wolke und überschattete sie. Sie fürchteten sich aber, als sie in die Wolke hineinkamen.
೩೪ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
35 Und eine Stimme erscholl aus der Wolke, die sprach: Dies ist mein lieber Sohn; auf den sollt ihr hören!
೩೫ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
36 Und während die Stimme erscholl, fand es sich, daß Jesus allein war. Und sie schwiegen und sagten in jenen Tagen niemand etwas von dem, was sie gesehen hatten.
೩೬ಆ ವಾಣಿ ಆದ ಮೇಲೆ ಯೇಸುವನ್ನು ಮಾತ್ರ ಕಂಡರು. ತಾವು ಕಂಡ ಈ ಸಂಗತಿಗಳಲ್ಲಿ ಒಂದನ್ನಾದರೂ ಆ ದಿನಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.
37 Es begab sich aber am folgenden Tage, als sie den Berg hinunterstiegen, kam ihm viel Volk entgegen.
೩೭ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.
38 Und siehe, ein Mann aus dem Volke rief und sprach: Meister, ich bitte dich, sieh doch meinen Sohn an, denn er ist mein einziger!
೩೮ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.
39 Und siehe, ein Geist ergreift ihn, und plötzlich schreit er, und er reißt ihn hin und her, daß er schäumt, und will kaum von ihm weichen, ohne ihn gänzlich aufzureiben.
೩೯ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
40 Und ich habe deine Jünger gebeten, daß sie ihn austreiben möchten, aber sie vermochten es nicht.
೪೦ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು” ಎಂದು ಹೇಳಿದನು.
41 Da antwortete Jesus und sprach: O du ungläubiges und verkehrtes Geschlecht! Wie lange soll ich bei euch sein und euch ertragen? Bringe deinen Sohn hierher!
೪೧ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
42 Und noch während er hinzuging, riß und zerrte ihn der Dämon. Aber Jesus bedrohte den unreinen Geist und machte den Knaben gesund und gab ihn seinem Vater wieder.
೪೨ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
43 Es erstaunten aber alle über die große Macht Gottes. Da sich nun alle verwunderten über alles, was er tat, sprach er zu seinen Jüngern:
೪೩ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
44 Fasset ihr diese Worte zu Ohren: Des Menschen Sohn wird in der Menschen Hände überliefert werden.
೪೪“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
45 Sie aber verstanden das Wort nicht, und es war vor ihnen verborgen, so daß sie es nicht begriffen; und sie fürchteten sich, ihn wegen dieses Wortes zu fragen.
೪೫ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.
46 Es schlich sich aber der Gedanke bei ihnen ein, wer wohl der Größte unter ihnen sei.
೪೬ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು.
47 Da nun Jesus ihres Herzens Gedanken merkte, nahm er ein Kind, stellte es neben sich und sprach zu ihnen:
೪೭ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ,
48 Wer dieses Kind aufnimmt in meinem Namen, der nimmt mich auf; und wer mich aufnimmt, der nimmt den auf, der mich gesandt hat. Denn wer der Kleinste ist unter euch allen, der ist groß!
೪೮ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.
49 Johannes aber antwortete und sprach: Meister, wir sahen jemand, der in deinem Namen Dämonen austrieb, und wir wehrten es ihm, weil er dir nicht mit uns nachfolgt.
೪೯ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
50 Jesus aber sprach: Wehret ihm nicht! Denn wer nicht wider uns ist, der ist für uns.
೫೦ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.
51 Es begab sich aber, als sich die Tage seines Heimgangs erfüllten und er sein Angesicht nach Jerusalem richtete, um dorthin zu reisen,
೫೧ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
52 sandte er Boten vor sich her. Diese kamen auf ihrer Reise in ein Samariterdorf und wollten ihm die Herberge bereiten.
೫೨ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು.
53 Aber man nahm ihn nicht auf, weil Jerusalem sein Reiseziel war.
೫೩ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.
54 Als aber das seine Jünger Jakobus und Johannes sahen, sprachen sie: Herr, willst du, so wollen wir sagen, daß Feuer vom Himmel herabfalle und sie verzehre, wie auch Elia getan hat!
೫೪ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
55 Er aber wandte sich und bedrohte sie und sprach: Wisset ihr nicht, welches Geistes [Kinder] ihr seid?
೫೫ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು.
56 Denn des Menschen Sohn ist nicht gekommen, der Menschen Seelen zu verderben, sondern zu erretten. Und sie zogen in ein anderes Dorf.
೫೬ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.
57 Als sie aber ihre Reise fortsetzten, sprach einer auf dem Wege zu ihm: Herr, ich will dir nachfolgen, wohin du auch gehst!
೫೭ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,
58 Und Jesus sprach zu ihm: Die Füchse haben Gruben, und die Vögel des Himmels haben Nester; aber des Menschen Sohn hat nicht, wo er sein Haupt hinlegen kann.
೫೮ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
59 Er sagte aber zu einem andern: Folge mir nach! Der sprach: Herr, erlaube mir, zuvor hinzugehen und meinen Vater zu begraben.
೫೯ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
60 Jesus aber sprach zu ihm: Laß die Toten ihre Toten begraben; du aber gehe hin und verkündige das Reich Gottes!
೬೦ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.
61 Es sprach aber auch ein anderer: Herr, ich will dir nachfolgen, zuvor aber erlaube mir, von denen, die in meinem Hause sind, Abschied zu nehmen.
೬೧ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
62 Jesus aber sprach zu ihm: Wer seine Hand an den Pflug legt und zurückblickt, ist nicht geschickt zum Reiche Gottes!
೬೨ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.