< 1 Koenige 16 >
1 Und es erging Jehovahs Wort an Jehu, den Sohn Chananis, wider Baescha und sprach:
೧ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
2 Weil Ich dich aus dem Staube erhöht und zum Führer über Mein Volk Israel gegeben habe, du aber im Wege Jerobeams gewandelt und Mein Volk Israel hast sündigen lassen, Mich zu reizen durch seine Sünden.
೨“ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.
3 Siehe, so fege Ich aus hinter Baescha und hinter seinem Hause und gebe dein Haus dahin, wie das Haus von Jerobeam, dem Sohne Nebats.
೩ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
4 Wer dem Baescha stirbt in der Stadt, den sollen die Hunde fressen, und wer ihm auf dem Felde stirbt, den soll das Gevögel der Himmel fressen.
೪ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.
5 Und die übrigen Geschichten Baeschas und was er getan, und seine Macht, ist es nicht geschrieben im Buche der Tagesgeschichten der Könige Israels?
೫ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
6 Und Baescha entschlief zu seinen Vätern, und ward begraben in Thirzah, und Elah, sein Sohn, ward König an seiner Stelle.
೬ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
7 Und es erging auch durch die Hand Jehus, des Sohnes Chananis, des Propheten, das Wort Jehovahs wider Baescha und wider sein Haus und über all das Böse, das er in den Augen Jehovahs tat, daß er Ihn reizte durch das Tun seiner Hände, daß er war wie das Haus Jerobeams, und weil er diesen erschlagen hatte.
೭ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
8 Im sechsundzwanzigsten Jahre Asas, König von Judah, ward Elah, der Sohn Baeschas, König über Israel in Thirzah, zwei Jahre.
೮ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
9 Und es verschwor sich wider ihn sein Knecht Simri, der Oberste der Hälfte der Streitwagen; und er war in Thirzah, trank betrunken im Hause Arzas, der über sein Haus in Thirzah war.
೯ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.
10 Und Simri kam herein und schlug ihn und tötete ihn im siebenundzwanzigsten Jahre Asas, des Königs von Judah, und ward König an seiner Stelle.
೧೦ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
11 Und es geschah, als er König ward, als er auf seinem Throne saß, erschlug er das ganze Haus Baeschas, und seine Verwandten und seine Genossen, und ließ nicht verbleiben einen, der an die Wand pißt.
೧೧ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.
12 Und Simri vernichtete das ganze Haus Baeschas, nach dem Worte Jehovahs, das Er durch die Hand Jehus, des Propheten, über Baescha geredet hatte.
೧೨ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.
13 Ob all den Sünden Baeschas und den Sünden Elahs, seines Sohnes, die sie gesündigt, und die sie Israel sündigen ließen, weil sie Jehovah, den Gott Israels, durch ihre Abgöttereien gereizt hatten.
೧೩ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
14 Und die übrigen Geschichten Elahs und alles, was er getan, ist es nicht geschrieben im Buche der Tagesgeschichten der Könige Israels?
೧೪ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
15 Im siebenundzwanzigsten Jahre, dem Jahre Asas, des Königs von Judah, ward Simri sieben Tage König in Thirzah. Und das Volk war gelagert wider Gibbethon der Philister.
೧೫ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.
16 Und das Volk, das im Lager war, hörte sagen: Simri hat sich verschworen und auch den König erschlagen. Und ganz Israel machte Omri, den Obersten des Heeres, an selbigem Tage im Lager zum König über Israel.
೧೬ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.
17 Und Omri und ganz Israel mit ihm zogen herauf von Gibbethon und belagerten Thirzah.
೧೭ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
18 Und es geschah, wie Simri sah, daß die Stadt erobert war, ging er in den Palast des Königshauses und verbrannte über sich das Königshaus mit Feuer und starb,
೧೮ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.
19 Ob seinen Sünden, die er gesündigt, weil er tat, was böse in den Augen Jehovahs war, indem er wandelte im Wege Jerobeams und in seiner Sünde, die er tat, daß er Israel sündigen machte.
೧೯ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
20 Und das übrige der Geschichten Simris, und die Verschwörung, mit der er sich verschwor, ist es nicht geschrieben im Buche der Tagesgeschichten der Könige Israels?
೨೦ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
21 Damals war das Volk Israel geteilt in Hälften, eine Hälfte des Volkes hinter Thibni, dem Sohne Ginaths, ihn zum König zu machen, und eine Hälfte hinter Omri.
೨೧ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
22 Aber das Volk hinter Omri ward stärker als das Volk hinter Thibni, dem Sohne Ginaths, und Thibni starb, und Omri ward König.
೨೨ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.
23 Im einunddreißigsten Jahre, dem Jahre Asas, des Königs von Judah, ward Omri König über Israel, zwölf Jahre; in Thirzah regierte er sechs Jahre.
೨೩ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
24 Und er kaufte den Berg Schomron von Schemer um zwei Talente Silber, und baute auf den Berg, und nannte den Namen der Stadt, die er baute, nach dem Namen Schemers, des Herrn des Berges, Schomron.
೨೪ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
25 Und Omri tat, was böse war in den Augen Jehovahs, und war ärger denn alle, die vor ihm gewesen.
೨೫ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.
26 Und er wandelte in all dem Wege Jerobeams, des Sohnes Nebaths, und in seinen Sünden, damit er Israel sündigen machte, so daß sie Jehovah, den Gott Israels, durch ihre Abgöttereien reizten.
೨೬ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
27 Und das übrige der Geschichten Omris, was er tat, und seine Macht, die er ausübte, ist es nicht geschrieben im Buche der Tagesgeschichten der Könige Israels?
೨೭ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
28 Und Omri entschlief zu seinen Vätern und ward begraben in Samaria, und Achab, sein Sohn, ward König an seiner Stelle.
೨೮ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.
29 Und Achab, der Sohn Omris, ward König über Israel im achtundreißigsten Jahre, dem Jahre Asas, des Königs von Judah; Achab aber, der Sohn Omris, regierte über Israel in Samaria zweiundzwanzig Jahre;
೨೯ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
30 Und Achab, der Sohn Omris, tat, was böse war in den Augen Jehovahs, mehr denn alle, die vor ihm gewesen.
೩೦ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
31 Und es war ihm ein Leichtes, daß er in den Sünden Jerobeams, des Sohnes Nebats, wandelte, und er nahm zum Weibe Isebel, die Tochter Ethbaals, des Königs der Zidonier, und ging und diente dem Baal und betete ihn an.
೩೧ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
32 Und er richtete dem Baal einen Altar im Hause des Baal auf, das er zu Samaria gebaut hatte.
೩೨ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
33 Und Achab machte eine Aschere. Und Achab fuhr fort, so zu tun, daß er Jehovah, den Gott Israels, mehr denn alle Könige Israels, die vor ihm waren, reizte.
೩೩ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
34 In seinen Tagen baute Chiel, der Bethelite, Jericho auf; in seinem Erstgeborenen, Abiram, legte er dessen Grund, und in seinem Jüngsten, Segub, stellte er dessen Türen ein, nach dem Worte Jehovahs, das Er durch die Hand Jehoschuas, des Sohnes Nuns, geredet hatte.
೩೪ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.