< 2 Koenige 6 >

1 Und die Söhne der Propheten sprachen zu Elischa: Siehe doch, der Ort, da wir hier vor dir wohnen, ist zu eng für uns.
ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.
2 Laß uns doch an den Jordan gehen, und von da jeder Mann einen Balken holen und allda uns einen Ort zum dort wohnen machen; und er sprach: Gehet!
ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.
3 Und einer sprach: Laß es dir doch belieben, mit deinen Knechten zu gehen. Und er sprach: Ich will gehen.
ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.
4 Und er ging mit ihnen, und sie kamen an den Jordan und sie hieben Bäume ab.
ಅವರು ಯೊರ್ದನಿಗೆ ಹೋಗಿ ಮರಗಳನ್ನು ಕಡಿಯುತ್ತಿರುವಾಗ,
5 Und es geschah, daß einer den Balken fällte und das Eisen in das Wasser fiel. Und er schrie und sprach: Ach, mein Herr, und es ist entlehnt.
ಒಬ್ಬನ ಕೊಡಲಿಯು ಕೈಜಾರಿ ನೀರೊಳಗೆ ಬಿದ್ದಿತು. ಆಗ ಅವನು, “ಅಯ್ಯೋ, ಸ್ವಾಮಿ ನಾನು ಅದನ್ನು ಸಾಲವಾಗಿ ತಂದಿದ್ದೆನು” ಎಂದು ಕೂಗಿದನು.
6 Der Mann Gottes aber sprach: Wohin ist es gefallen? Und er zeigte ihm den Ort; und er schnitt ein Holz ab und warf es dorthin und machte, daß das Eisen heraufschwamm.
ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.
7 Und er sprach: Hebe es dir herauf, und er reckte seine Hand aus und nahm es.
ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.
8 Und der König von Aram war im Streit mit Israel, und beriet sich mit seinen Knechten und sprach: An diesem und jenem Ort will ich lagern.
ಅರಾಮ್ಯರ ಅರಸನು ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ತನ್ನ ಸೇನಾಧಿಪತಿಗಳಿಗೆ, “ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ಗೊತ್ತುಮಾಡಬೇಕು” ಎಂದನು.
9 Und der Mann Gottes sandte zum König von Israel und ließ ihm sagen: Hüte dich, daß du nicht an jenem Ort vorüberziehst, denn dort hat Aram sich niedergelassen.
ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.
10 Und der König von Israel sandte an den Ort, von dem ihm der Mann Gottes gesagt und vor dem er ihn gewarnt hatte, und er hütete sich davor, nicht einmal und nicht zweimal.
೧೦ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.
11 Und das Herz des Königs von Aram ward über die Sache beunruhigt, und er rief seine Knechte und sprach zu ihnen: Wollt ihr mir nicht ansagen: Wer von den unseren für den König von Israel ist?
೧೧ಇದರ ದೆಸೆಯಿಂದ ಅರಾಮ್ಯರ ಅರಸನು ಕಳವಳಗೊಂಡು ತನ್ನ ಸೇನಾಧಿಪತಿಗಳನ್ನು ಕರೆದು ಅವರನ್ನು, “ನಮ್ಮವರಲ್ಲಿ ಇಸ್ರಾಯೇಲರ ಅರಸನ ಪಕ್ಷದವರು ಯಾರು? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಿದನು.
12 Und einer von seinen Knechten sprach: Nicht doch, mein Herr König, sondern Elischa, der Prophet, der in Israel ist, sagt dem König von Israel die Worte an, die du in der Kammer redest, da dein Lager ist.
೧೨ಆಗ ಅವರಲ್ಲೊಬ್ಬನು ಅವನಿಗೆ, “ನನ್ನ ಒಡೆಯನಾದ ಅರಸನೇ, ಹಾಗಲ್ಲ, ಇಸ್ರಾಯೇಲರಲ್ಲಿ ಎಲೀಷನೆಂಬ ಒಬ್ಬ ಪ್ರವಾದಿಯಿರುತ್ತಾನೆ. ನೀನು ನಿನ್ನ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಾಯೇಲರ ಅರಸನಿಗೆ ತಿಳಿಸುತ್ತಾನೆ” ಎಂದನು.
13 Und er sprach: Gehet hin und sehet wo er ist, und ich will senden und ihn holen. Und man sagte ihm an und sprach: Siehe, er ist in Dothan.
೧೩ಅರಸನು ಇದನ್ನು ಕೇಳಿ, “ಎಲೀಷನು ಎಲ್ಲಿರುತ್ತಾನೆ ಎಂದು ವಿಚಾರಿಸಿರಿ. ನಾನು ಅವನನ್ನು ಹಿಡಿಸುತ್ತೇನೆ” ಎಂದು ಹೇಳಿದನು. “ಪ್ರವಾದಿಯು ದೋತಾನಿನಲ್ಲಿ ಇರುತ್ತಾನೆ” ಎಂದು ಅರಸನು ತಿಳಿದುಕೊಂಡನು.
14 Und er sandte dahin Rosse und Streitwagen und eine schwere Streitmacht. Und sie kamen bei Nacht und umringten die Stadt.
೧೪ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.
15 Und der Diener des Mannes Gottes stand früh auf, sich aufzumachen und ging hinaus, und siehe, es umgab eine Streitmacht und Roß und Streitwagen die Stadt; und sein Junge sprach zu ihm: Ach, mein Herr, wie tun wir?
೧೫ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಬಂದು ನೋಡಿದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು ತನ್ನ ಯಜಮಾನನಿಗೆ, “ಅಯ್ಯೋ, ಸ್ವಾಮಿ ನಾವು ಏನು ಮಾಡೋಣ?” ಎಂದನು.
16 Er aber sprach: Fürchte dich nicht, denn derer sind mehr, die mit uns sind, als derer, die mit ihnen sind.
೧೬ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,
17 Und Elischa betete und sprach: Jehovah, tue ihm doch die Augen auf, daß er sehe. Und Jehovah tat dem Jungen die Augen auf und er sah, und siehe, der Berg war voll von Rossen und feurigen Streitwagen rings um Elischa.
೧೭“ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು.
18 Und sie kamen zu ihm herab und Elischa betete zu Jehovah und sprach: Schlage doch diese Völkerschaft mit Blindheit! Und er schlug sie mit Blindheit, nach dem Worte Elischas.
೧೮ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
19 Und Elischa sprach zu ihnen: Das ist nicht der Weg und das ist nicht die Stadt, gehet hinter mir her, und ich will euch zu dem Mann ziehen lassen, den ihr suchet; und er ließ sie nach Samaria ziehen.
೧೯ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು.
20 Und es geschah, wie sie nach Samaria kamen, da sprach Elischa: Jehovah, tue diesen die Augen auf, daß sie sehen! Und Jehovah tat ihnen die Augen auf, daß sie sahen, und siehe, sie waren mitten in Samaria.
೨೦ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.
21 Und der König von Israel sprach zu Elischa, wie er sie sah: Soll ich schlagen, soll ich schlagen, mein Vater?
೨೧ಇಸ್ರಾಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, “ಅಪ್ಪಾ, ನಾನು ಇವರನ್ನು ಸಂಹರಿಸಿ ಬಿಡಲೋ? ಸಂಹರಿಸಲೇ?” ಎಂದು ಕೇಳಿದನು.
22 Und er sprach: Du sollst nicht schlagen; schlägst du die, so du gefangen nimmst mit deinem Schwert und mit deinem Bogen? Setzte Brot und Wasser vor sie, daß sie essen und trinken, und laß sie zu ihrem Herrn gehen.
೨೨ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.
23 Und er richtete ihnen ein großes Mahl an, und sie aßen und tranken, und er entließ sie, und sie gingen zu ihrem Herrn, und es kamen keine Kriegshaufen Arams mehr in das Land Israels.
೨೩ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.
24 Und es geschah danach, daß Ben-Hadad, der König von Aram, all sein Lager zusammenbrachte und hinaufzog und Samaria belagerte.
೨೪ಆ ನಂತರ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ಬಂದು ಸಮಾರ್ಯಕ್ಕೆ ಮುತ್ತಿಗೆ ಹಾಕಿದನು.
25 Und in Samaria war große Hungersnot, und siehe, sie belagerten sie, so daß der Kopf eines Esels achtzig Silberlinge galt, und ein Viertelkab Taubenmist fünf Silberlinge.
೨೫ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
26 Und es geschah, daß der König von Israel auf der Stadtmauer vorüberging und ein Weib schrie zu ihm und sprach: Hilf mir, Herr König!
೨೬ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.
27 Er aber sprach: Hilft dir Jehovah nicht, woher sollte ich dir helfen von der Tenne oder von der Weinkufe?
೨೭ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,
28 Und der König sprach zu ihr: Was ist dir? Und sie sprach: Das Weib da sprach zu mir: Gib deinen Sohn her, daß wir ihn heute essen, und meinen Sohn essen wir morgen.
೨೮“ನಿನಗಿರುವ ದುಃಖ ಯಾವುದು” ಎಂದು ಅರಸನು ಕೇಳಿದನು. ಆಗ ಆಕೆಯು, “ಈ ಸ್ತ್ರೀಯು ನನಗೆ, ನಿನ್ನ ಮಗನನ್ನು ತೆಗೆದುಕೊಂಡು ಬಾ, ನಾವು ಈ ಹೊತ್ತು ಅವನನ್ನು ತಿಂದುಬಿಡೋಣ, ನಾಳೆ ನನ್ನ ಮಗನನ್ನು ತಿನ್ನೋಣ” ಎಂದು ಹೇಳಿದ್ದರಿಂದ,
29 Und wir kochten meinen Sohn und aßen ihn, und ich sprach zu ihr am anderen Tage: Gib deinen Sohn, daß wir ihn essen, sie aber versteckte ihren Sohn.
೨೯ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.
30 Und es geschah, wie der König die Worte des Weibes hörte, da zerriß er seine Kleider, da er auf der Stadtmauer vorüberging; und das Volk sah es, und siehe, der Sack war innen auf seinem Leibe.
೩೦ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.
31 Und er sprach: So tue mir Gott und so fahre Er fort, wenn dem Elischa, dem Sohne Schaphats, heute das Haupt auf ihm stehen wird!
೩೧ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.
32 Und Elischa saß in seinem Hause und die Ältesten saßen bei ihm, und er sandte einen Mann vor sich her. Ehe der Bote zu ihm kam, sprach er zu den Ältesten: Sehet ihr, daß der Sohn dieses Mörders hersendet, mir den Kopf wegzunehmen; sehet, wenn der Bote kommt, verschließt die Tür und klemmt ihn in die Tür! Ist nicht der Schall der Füße seines Herrn hinter ihm?
೩೨ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.
33 Er redete noch mit ihnen und siehe, da kam der Bote zu ihm herab und sprach: Siehe, das Böse ist von Jehovah! Was soll ich noch warten auf Jehovah?
೩೩ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.

< 2 Koenige 6 >