< Daniel 3 >
1 Der König Nebuchadnezzar machte ein Standbild von Gold, seine Höhe sechzig Ellen, seine Breite sechs Ellen; er richtete es auf in der Ebene Dura in der Landschaft Babel.
೧ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
2 Und der König Nebuchadnezzar sandte aus, daß zusammentreten die Satrapen, Landvögte, Statthalter, Oberrichter, Schatzmeister, Richter, Rechtsgelehrten und alle Verwalter der Landschaften, zur Einweihung des Standbildes zu kommen, das der König Nebuchadnezzar aufgerichtet hatte.
೨ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.
3 Da traten zusammen die Satrapen, die Landvögte und die Statthalter, die Oberrichter, die Schatzmeister, die Richter, die Rechtsgelehrten und alle Verwalter der Landschaften zur Einweihung des Standbildes, das der König Nebuchadnezzar hatte aufgerichtet, und sie traten vor das Bild, das Nebuchadnezzar aufgerichtet hatte.
೩ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ನೆರೆದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತುಕೊಂಡರು.
4 Und der Herold rief mit Macht: Euch wird es gesagt: ihr Völker, Volksstämme und Zungen!
೪ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.
5 Zur Zeit, da ihr hören werdet den Schall des Horns, der Pfeife, der Harfe, der Sambuke, des Psalters, der Sackpfeife und allerlei Saitenspiele, sollt ihr niederfallen und anbeten das Standbild von Gold, das der König Nebuchadnezzar aufgerichtet hat.
೫ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.
6 Und wer nicht niederfällt und anbetet, der soll im selben Augenblick mitten in den Ofen, der mit Feuer brennt, hinabgeworfen werden.
೬ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
7 Darum zur Zeit, da alle Völker den Schall des Horns, der Pfeife, der Harfe, der Sambuke, des Psalters und von allerlei Saitenspiel hörten, fielen alle Völker, Volksstämme und Zungen nieder, und beteten das Standbild von Gold an, das der König Nebuchadnezzar aufgerichtet hatte.
೭ಆದಕಾರಣ ಅದೇ ಕಾಲದಲ್ಲಿ ಸಮಸ್ತ ಜನಾಂಗ, ಕುಲ, ಭಾಷೆಗಳವರು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರೂ ಅಡ್ಡಬಿದ್ದು ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸಿದರು.
8 Darum, zur selben Zeit, nahten sich chaldäische Männer und klagten die Juden an.
೮ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
9 Sie antworteten und sagten zu dem König Nebuchadnezzar: Lebe, o König, in Ewigkeit!
೯ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!
10 Du hast, o König, eine Weisung erlassen, daß jeder Mensch, wenn er höre den Schall des Horns, der Pfeife, der Harfe, der Sambuke, des Psalters, der Sackpfeife und allerlei Saitenspiel, niederfallen und das Standbild von Gold anbeten soll.
೧೦ಪ್ರಭುವೇ, ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು, ಬಂಗಾರದ ಪ್ರತಿಮೆಯನ್ನು ಪೂಜಿಸಲಿ.
11 Wer aber nicht niederfällt und anbetet, der soll mitten in den Ofen, der mit Feuer brennt, hinabgeworfen werden.
೧೧“ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
12 Da sind jüdische Männer, die du zur Verwaltung der Landschaft Babel eingesetzt, Schadrach, Meschach und Abed Nego. Diese Männer haben nicht auf deine Weisung geachtet, o König. Deinen Gott verehren sie nicht, und das Standbild von Gold, das du aufgerichtet, beten sie nicht an.
೧೨ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
13 Da befahl Nebuchadnezzar in Wut und Grimm, Schadrach, Meschach und Abed Nego herbeizubringen. Da brachten sie diese Männer vor den König.
೧೩ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.
14 Nebuchadnezzar antwortete und sprach zu ihnen: Ist es aus Vorsatz, daß ihr, Schadrach, Meschach und Abed Nego, meinen Gott nicht verehrt und das Standbild von Gold nicht anbetet, das ich aufgerichtet habe?
೧೪ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?
15 Nun denn, wenn ihr bereit seid, zur Zeit, da ihr hört den Schall des Horns, der Pfeife, der Harfe, der Sambuke, des Psalters, der Sackpfeife und allerlei Saitenspiel, niederzufallen und das Standbild anzubeten, das ich gemacht habe - und wenn ihr es nicht anbetet, sollt ihr augenblicklich mitten in den Ofen, der mit Feuer brennt, hinabgeworfen werden! Und wer ist der Gott, der euch aus meinen Händen befreien kann?
೧೫“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
16 Da antworteten Schadrach, Meschach und Abed Nego, und sprachen zu dem König Nebuchadnezzar: Es ist nicht notwendig, daß wir auf die Rede erwidern.
೧೬ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
17 Siehe, unser Gott, Den wir verehren, vermag uns aus dem Ofen, der mit Feuer brennt, zu befreien, und aus deiner Hand, o König, wird Er uns befreien.
೧೭‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
18 Und wenn nicht, so wisse, o König, daß wir deinen Gott nicht verehren, und das goldene Standbild, das du aufgerichtet hast, nicht anbeten wollen.
೧೮ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.
19 Da ward Nebuchadnezzar voll Grimmes und das Bild seines Antlitzes veränderte sich wider Schadrach, Meschach und Abed Nego. Er antwortete und befahl, den Ofen siebenmal mehr zu heizen, als man ihn jemals hatte heizen geschaut;
೧೯ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.
20 Und den Männern, den Helden der Tapferkeit in seiner Streitmacht, befahl er, Schadrach, Meschach und Abed Nego zu binden, um sie in den Ofen, der mit Feuer brennt, hinabzuwerfen.
೨೦ಇದಲ್ಲದೆ ತನ್ನ ಸೈನ್ಯದ ಕೆಲವು ಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.
21 Da wurden diese Männer gebunden in ihren Beinkleidern, ihren Unterkleidern und ihren Mänteln und ihren Anzügen, und wurden mitten in den Ofen, der mit Feuer brennt, hinabgeworfen.
೨೧ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
22 Weil das Wort des Königs so hastig war, und der Ofen über die Maßen geheizt worden, tötete die Flamme des Feuers die Männer, die Schadrach, Meschach und Abed Nego hinaufbrachten.
೨೨ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
23 Und diese drei Männer, Schadrach, Meschach und Abed Nego fielen gebunden mitten in den Ofen, der mit Feuer brennt.
೨೩ಶದ್ರಕ್, ಮೇಶಕ್, ಅಬೇದ್ನೆಗೋ ಈ ಮೂವರು ಕಟ್ಟಲ್ಪಟ್ಟವರಾಗಿ ಧಗಧಗನೆ ಉರಿಯುವ ಬೆಂಕಿಯ ಮಧ್ಯದಲ್ಲಿ ಬಿದ್ದುಬಿಟ್ಟರು.
24 Da entsetzte sich der König Nebuchadnezzar und stand bestürzt auf, hob an und sprach zu seinen Räten: Haben wir nicht drei Männer gebunden mitten ins Feuer hinabgeworfen? Sie antworteten und sprachen zum König: Gewißlich, o König!
೨೪ಆಗ ರಾಜನಾದ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳಿಗೆ, “ಕಟ್ಟಿದ ಮೂವರನ್ನು ನಾವು ಬೆಂಕಿಯೊಳಗೆ ಹಾಕಿಸಲಿಲ್ಲವೋ?” ಎಂದು ಕೇಳಲು ಅವರು ರಾಜನಿಗೆ, “ಅರಸನೇ, ಹೌದು, ಹಾಕಿರುವುದು ಸತ್ಯ” ಎಂದು ಉತ್ತರಕೊಟ್ಟರು.
25 Er antwortete und sprach: Siehe, ich schaue vier Männer lose mitten im Feuer umhergehen, und haben keinen Schaden an sich und das Aussehen des vierten gleicht einem Sohne der Götter.
೨೫ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು.
26 Da nahte Nebuchadnezzar dem Tor des Ofens, der mit Feuer brennt, hob an und sprach: Schadrach, Meschach und Abed Nego, ihr Knechte des höchsten Gottes, geht heraus und kommt her. Da gingen Schadrach, Meschach und Abed Nego mitten aus dem Feuer heraus.
೨೬ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.
27 Und die Satrapen, die Landvögte, die Statthalter und die Räte des Königs traten zusammen, und schauten die Männer, über deren Leib das Feuer nicht schaltete, und das Haar von deren Haupt nicht versengt, und deren Beinkleider nicht verändert waren, und an die der Geruch des Feuers nicht gekommen war.
೨೭ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
28 Da hob Nebuchadnezzar an und sprach: Gesegnet sei der Gott von Schadrach, Meschach und Abed Nego, Der Seinen Engel gesandt und Seine Knechte, die auf Ihn vertrauten, befreit hat, daß sie das Wort des Königs und ihre Leiber hingaben, daß sie einen anderen Gott, als ihren Gott, nicht verehrten und ihn anbeteten.
೨೮ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.
29 Und von mir ergeht die Weisung, daß jegliches Volk, jeder Volksstamm und jede Zunge, die gegen den Gott Schadrachs, Meschachs und Abed Negos etwas spricht, soll in Stücke zerhauen und sein Haus zu einem Düngerhaufen gemacht werden, alldieweil daß kein anderer Gott ist, der erretten kann, wie Dieser.
೨೯ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.
30 Dann gab der König dem Schadrach, Meschach und Abed Nego Gedeihen in der Landschaft Babel.
೩೦ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತ ಪದವಿ ನೀಡಿ ಗೌರವಿಸಿದನು.